ಹಿರಿಯ ಕಾಂಗ್ರೆಸ್ ಮುಖಂಡ ಕೆ.ಕೆ. ಸರಳಾಯ ಆತ್ಮಹತ್ಯೆ
ಹಿರಿಯ ಕಾಂಗ್ರೆಸ್ ಮುಖಂಡ ಕೆ.ಕೆ. ಸರಳಾಯ ಆತ್ಮಹತ್ಯೆ
ಉಡುಪಿ: ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ಗೆ ನಿಕಟವರ್ತಿಯಾಗಿದ್ದ ಕೆ.ಕೆ. ಸರಳಾಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳಾಯರಿಗೆ 88 ವರ್ಷ ವಯಸ್ಸಾಗಿತ್ತು.
ಉಡುಪಿಯ ಪಣಿಯಾಡಿಯಲ್ಲಿರುವ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಅಂತ ಹೇಳಲಾಗುತ್ತಿದೆ. ಇನ್ನು ಉಡುಪಿ ಜಿಲ್ಲೆಯ ಸಹಕಾರಿ ರಂಗದಲ್ಲಿಯೂ ಉತ್ತಮ ಹೆಸರು ಮಾಡಿದ್ದರು. ಉಡುಪಿಯಾದ್ಯಂತ ಪಟಾಕಿ ಸರಳಾಯರೆಂದೇ ಅವರು ಪ್ರಸಿದ್ಧರಾಗಿದ್ದರು.
ಸರಳಾಯರ ಆತ್ಮಹತ್ಯೆಗೆ ನಿಖಿರ ಕಾರಣ ತಿಳಿದು ಬಂದಿಲ್ಲ. ತನಿಖೆಯ ಬಳಿಕವಷ್ಟೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.
DAKSHINA KANNADA
ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ಮಂಗಳೂರು : ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತರು. ಈ ಪೈಕಿ ಸುಹೈಲ್ ಹಾಗೂ ಝುಬೈರ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್ನ ಸಹಕಾರದಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.
DAKSHINA KANNADA
ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.
ಗುತ್ತಿಗೆದಾರರಿಂದ ಲಂಚ ಸ್ವೀಕಾರ:
ಪಿಡಬ್ಲ್ಯೂಡಿ ಕ್ಲಾಸ್ ವನ್ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆ ವಹಿಸಿ ಕೆಲಸ ನಿರ್ವಹಿಸುತ್ತಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯವರು ದೂರು ನೀಡಿದ್ದಾರೆ. ಕಾಮಗಾರಿಯ ಮೊತ್ತ 9,77,154 ರೂಪಾಯಿಗಳ ಬಿಲ್ಲು ಮಂಜೂರಾತಿಯಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು 37,000 ರೂಪಾಯಿ ಹಾಗೂ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು ಮುಂಗಡವಾಗಿ 7000 ರೂ. ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು.
ಈ ದೂರಿನ ಹಿನ್ನೆಲೆಯಿಂದ ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಪಟ್ಟಣ ಪಂಚಾಯಿತಿ ದಾಳಿಗೆ ವ್ಯವಸ್ಥೆ ಮಾಡಿ ಆರೋಪಿಗಳಾದ ಜೂನಿಯರ್ ಎಂಜಿನಿಯರ್ ನಾಗರಾಜುರಿಂದ 30 ಸಾವಿರ ರೂಪಾಯಿ ಹಾಗೂ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿಯವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಅವರನ್ನು ಸೆರೆ ಹಿಡಿಯಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಡಾ. ಉಪಾಧೀಕ್ಷಕರಾದ ಗಾನಾ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
ವಿಡಿಯೋ ನೋಡಿ: