Thursday, September 29, 2022

ಕಾಪು ವಾರದ ಸಂತೆ ದಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ-ಇದು ನಮ್ಮ ಕುಡ್ಲ ವಾಹಿನಿ ಫಲಶೃತಿ..!

ಕಾಪು: ಉಡುಪಿ ಜಿಲ್ಲೆಯ ಕಾಪು ಪುರಸಭೆ ವ್ಯಾಪ್ತಿಯ ವಾರದ ಸಂತೆ ದಿನವಾದ ಶುಕ್ರವಾರ ಕಾಪು ಪೇಟೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಲಭಿಸಿದೆ.


ವಾರದ ಸಂತೆಯ ದಿನವಾದ ಇಂದು ಎಕ್ಸ್‌ಪ್ರೆಸ್‌ ಬಸ್‌ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲೈಓವರ್‌ ಮುಖಾಂತರವೇ ಸಂಚರಿಸಲು ಆರಂಭಿಸಿದ್ದು, ಇನ್ನು ಮುಂದೆ ಪ್ರತಿ ಶುಕ್ರವಾರ ಎಕ್ಸ್‌ಪ್ರೆಸ್‌ ಬಸ್‌ಗಳು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಸಂಚರಿಸಲಿವೆ.

‘ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಮಂಗಳೂರು ಸರ್ವಿಸ್‌ ರಸ್ತೆಗೆ ತಾಗಿಕೊಂಡಂತಿರುವ ಕಾಪುವಿನ ವಾರದ ಸಂತೆಯು ಹೆದ್ದಾರಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ಗೆ ಕಾರಣವಾಗುತ್ತಿದೆ.


ಇದರಿಂದ ನಿತ್ಯ ಕಿರಿಕಿರಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಕಳೆದ ಶುಕ್ರವಾರ ನಮ್ಮ ಕುಡ್ಲ ವಾಹಿನಿ ವರದಿ ಬಿತ್ತರಿಸಿತ್ತು.

ಈ ವರದಿಗೆ ಸ್ಪಂದಿಸಿದ ಕಾಪು ಪುರಸಭೆ ಮತ್ತು ಪೊಲೀಸ್ ಇಲಾಖೆ ಸಭೆ ನಡೆಸಿ ಬಸ್ ಮಾಲಕರ ಜತೆಗೂ ಚರ್ಚಿಸಿ ವಾರದ ಸಂತೆಯ ದಿನ ಬಸ್‌ಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಂತೆ ಮನ ಒಲಿಸುವ ಮೂಲಕ ಸಮಸ್ಯೆಗೆ ಪರಿಹಾರ ರೂಪಿಸಿದ್ದಾರೆ.

ಇಂದು ಬಸ್ ಮತ್ತು ಘನ ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದು ವಾರದ ಸಂತೆ ನಿರಾಳವಾಗಿ ನಡೆದಿದೆ. ನಮ್ಮ ಕುಡ್ಲ ವಾಹಿನಿ ವರದಿಗೆ ಸ್ಪಂದಿಸಿದ ಅಧಿಕಾರಿಗಳ ಬಗ್ಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಶಾಸಕರು ಬಂದ ಬಳಿಕ ಚರ್ಚೆ ನಡೆಸಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಕಾಪು ಪುರಸಭಾ ಮುಖ್ಯ ಅಧಿಕಾರಿ ವೆಂಕಟೇಶ ನಾವಡ ಅವರು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...