DAKSHINA KANNADA
ಆಹಾ…! ಕುದ್ರೋಳಿ ಶಾರದೆ ಲುಕ್‌ನಲ್ಲಿ ಕಂಗೊಳಿಸಿದ ಕಾಟೇರ ನಟಿ!
Published
8 months agoon
By
Adminಕಿರುತೆರೆಯಲ್ಲಿ ತನ್ನ ಸೌಂದರ್ಯ ಹಾಗೂ ನಟನೆಯಿಂದ ಫೇಮಸ್ ಆಗಿರುವ ಶ್ವೇತಾ ಪ್ರಸಾದ್ ಇದೀಗ ಕುದ್ರೋಳಿ ಶಾರದಾಂಬೆಯ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದಾ ಧಾರಾವಾಹಿ, ಸಿನೆಮಾಗಳಲ್ಲಿ ಸಕ್ರಿಯವಾಗಿರುವ ಇವರಿಗೆ ಫೊಟೋಶೂಟ್ ಕ್ರೇಜ್ ಅಂತೂ ಹೆಚ್ಚು. ಒಂದಿಲ್ಲೊಂದು ಫೊಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಪಡ್ಡೆ ಹೈಕಳ ಮನಸ್ಸು ಕದಿತಾರೆ. ಈಗ ಶಾರದೆಯಾಗಿ ಕಂಗೊಳಿಸಿದ್ದಾರೆ.
ಜೀ ಕನ್ನಡದಲ್ಲಿ ಪ್ರಸಾರವಾದ `ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಆದ್ರು. ‘ಶ್ರೀರಸ್ತು ಶುಭಮಸ್ತು’ವಿನ ಜಾನ್ಹವಿಯಾಗಿ, ‘ರಾಧಾ ರಮಣ’ದ ರಾಧಾ ಟೀಚರ್ ಆಗಿ ಕನ್ನಡಿಗರ ಮನಸ್ಸು ಗೆದ್ದಿದ್ದರು. ಕಲರ್ಸ್ ನಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ-ರಮಣ’ ಧಾರಾವಾಹಿಯಿಂದ ಶ್ವೇತಾರವರು ಜನಪ್ರಿಯತೆ ಹೆಚ್ಚಾಗಿತ್ತು. 2017 ರಲ್ಲಿ ಬೆಂಗಳೂರು ಟೈಮ್ಸ್‌ನ ಮೋಸ್ಟ್ ಡಿಸೈರೇಬಲ್ ಮಹಿಳೆ ಪ್ರಶಸ್ತಿಯನ್ನೂ ಲಭಿಸಿದೆ.
ಟ್ರಾವೆಲ್ ಇಷ್ಟಪಡ್ತಾರಂತೆ ‘ಶ್ವೇತಾ’..!!
ಕಿರುತೆರೆಯಿಂದ ಸ್ವಲ್ಪ ಗ್ಯಾಪ್ ತಗೊಂಡ ಇವರು ಒಂದಲ್ಲ ಒಂದು ಕಾರ್ಯ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಳ್ತಾರೆ. ಕೆಲವೇ ಸಮಯ ಕಿರುತೆರೆಯಲ್ಲಿ ಬಣ್ಣ ಹಚ್ಚಿದ್ದರೂ ಇವರ ಫ್ಯಾನ್ ಫಾಲೋಯಿಂಗ್ ಮಾತ್ರ ಕಮ್ಮಿ ಆಗಿಲ್ಲ. ಇನ್ಸ್ಟಾಗ್ರಾಮ್‌ನಲ್ಲಿ ಸದಾ ಆ್ಯಕ್ಟೀವ್ ಆಗಿರುವ ಇವರು ಬೇರೆ ಬೇರೆ ವಿಷಯದ ಕುರಿತು ಜನರಿಗೆ ಮಾಹಿತಿ ನೀಡ್ತಿದ್ದಾರೆ. ಟ್ರಾವೆಲ್ ಅನ್ನು ಇಷ್ಟಪಡುವ ಶ್ವೇತಾ ಇಡೀ ಭಾರತವನ್ನು ಟೂರ್ ಮಾಡುತ್ತಾ ಹೊಸ ಹೊಸ ವಿಷಾರಗಳನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡ್ತಾರೆ. ಸಿಕ್ಕಾಪಟ್ಟೆ ಟ್ರಾವೆಲ್ ಇಷ್ಟಪಡುವ ಇವರು ಆಗಾಗ ತಮ್ಮ ಪ್ರವಾಸದ ಫೋಟೋಗಳನ್ನು ಇನ್ಸ್ಟಾಗ್ರಾಂ ಪೇಜ್ ನಲ್ಲಿ ಅಪ್ ಲೋಡ್ ಮಾಡುತ್ತಿರುತ್ತಾರೆ.
ಹಾಟ್ ಲುಕ್‌ಗೂ ಸೈ, ಟ್ರೆಡಿಷನಲ್ ಲುಕ್‌ಗೂ ಸೈ..!!
ಬಹಳ ದಿನಗಳ ಬಳಿಕ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಅಂತರಪಟ ಸೀರಿಯಲ್ ನಲ್ಲಿ ಕಾಣಿಸಿಕೊಂಡಿದ್ದರು. ಇನ್ಸ್ಟಾಗ್ರಾಂ ನಲ್ಲಿ ಟ್ರೇಡಿಷನಲ್, ವೆಸ್ಟರ್ನ್ ಲುಕ್ ನಲ್ಲಿ ಫೋಟೋ ಪೋಸ್ಟ್ ಮಾಡಿ ಅಭಿಮಾನಿಗಳಿಂದ ಲೈಕ್ಸ್ ಗಿಟ್ಟಿಸಿಕೊಳ್ತಿದ್ರು. ಇದೀಗ ಮಂಗಳೂರಿನ ಪ್ರಸಿದ್ಧ ಕುದ್ರೋಳಿ ಶಾರದಾಂಬೆಯ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಸೀರೆ, ಕೈಯಲ್ಲೊಂದು ವೀಣೆ ಜೊತೆಗೆ ತಾವರೆ ಹೂವನ್ನು ಹಿಡಿದುಕೊಂಡು, ಮುಡಿ ತುಂಬಾ ಮಂಗಳೂರು ಮಲ್ಲಿಗೆಯನ್ನ ಮುಡಿದು, ಮೈ ತುಂಬಾ ಆಭರಣಗಳನ್ನು ತೊಟ್ಟು ಪೋಸ್ ನೀಡಿರುವ ಫೊಟೋವನ್ನ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಫಿದಾ ಆಗಿರೋ ಫ್ಯಾನ್ಸ್ ಬಹಳ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಪ್ರವಾಸ ಪ್ರಿಯೆ :
ಗೊಂಬೆಯಂತಿರುವ ಮುದ್ದು ನಟಿ ಸದಾ ಬೇರೆಯವರಿಗೆ ಸಹಾಯ ಮಾಡುವ ಶ್ವೇತಾ ಪ್ರಸಾದ್ ಅವರು ತಂದೆಯ ಹೆಸರಿನಲ್ಲಿ ಹೊಸ ಎನ್ .ಜಿ.ಓ ಕೂಡ ಪ್ರಾರಂಭಿಸಿದ್ದರು. ಈ ಬಗ್ಗೆಯೂ ವೀಡಿಯೋ ಮಾಡಿದ್ದರು. ಅವರ ತಂದೆ ಪ್ರಸಾದ್ ಫೌಂಡೇಷನ್ ಮೂಲಕ ಎನ್ ಜಿಒ ಪ್ರಾರಂಭಿಸಿದ್ದಾರೆ. ಇಷ್ಟೆಲ್ಲಾ ಬ್ಯುಸಿ ಇದ್ದರೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿ ಇರುವ ಮೂಲಕ ಅಭಿಮಾನಿಗಳ ಜೊತೆಗೆ ಸಂಪರ್ಕದಲ್ಲಿರುತ್ತಾರೆ. ಆಗಾಗ ಫೋಟೋಶೂಟ್ ಮಾಡಿಸುತ್ತಿರುತ್ತಾರೆ.
ಮಲೆನಾಡಿನ ಬೆಡಗಿ ಶ್ವೇತಾ ಪ್ರಸಾದ್ ಅವರು ಎಲ್ಲಾ ಬಗೆಯ ಉಡುಗೆಯಲ್ಲೂ ಗೊಂಬೆಯಂತೆ ಕಂಗೊಳಿಸುತ್ತಿರುತ್ತಾರೆ. ಶ್ವೇತಾ ಭಾರತದ ಪ್ರವಾಸ ಮಾಡಿದ್ದು, ಕೇರಳ, ಮಂಗಳೂರು, ಉತ್ತರ ಕರ್ನಾಟಕ, ಉತ್ತರ ಭಾರತ, ಆಂಧ್ರ, ಅಸ್ಸಾಂ, ಕಾಶ್ಮೀರ ಹೀಗೆ ಎಲ್ಲೆಡೆ ಪ್ರವಾಸ ಮಾಡಿದ್ದಾರೆ.
ಅಷ್ಟೇ ಅಲ್ಲದೇ, ಸೌದಿ ಅರೇಬಿಯಾ ಸೇರಿದಂತೆ ಹೊರ ದೇಶಗಳಲ್ಲೂ ಸುತ್ತಾಡಿದ್ದಾರೆ. ಶ್ವೇತಾ ಅವರಿಗೆ ಟ್ರಾವೆಲಿಂಗ್ ಅಂದರೆ ಖುಷಿಯಂತೆ. ಹಾಗಾಗಿ ಹೊಸ ಹೊಸ ಜಾಗಗಳಿಗೆ ತೆರಳುತ್ತಿರುತ್ತಾರಂತೆ. ಇನ್ನು ಆಗಾಗ ಫೋಟೋಶೂಟ್ ಗಳ ಮೂಲಕ ಹೊಸ ಲುಕ್ ನಲ್ಲೂ ಕಾಣಿಸಿಕೊಳ್ಳುತ್ತಿರುತ್ತಾರೆ.
ಇತ್ತೀಚೆಗಷ್ಟೇ ಅಂತರಪಟ ಧಾರಾವಾಹಿಯಲ್ಲಿ ಸಪೋರ್ಟಿಂಗ್ ಕ್ಯಾರೆಕ್ಟರ್ ನಲ್ಲಿ ಕೆಲ ಸಮಯ ಕಿರುತೆರೆಯಲ್ಲಿ ಕಾಣಿಸಿಕೊಂಡರು. ಇದನ್ನು ನೋಡಿದ ಅಭಿಮಾನಿಗಳು ಶ್ವೇತಾ ಅವರನ್ನು ಹೊಸ ಧಾರಾವಾಹಿಯಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಬಹುದು ಎಂದು ನಿರೀಕ್ಷಿಸಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
12 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
14 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
DAKSHINA KANNADA
ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
Published
15 hours agoon
21/11/2024By
NEWS DESK3ಮಂಗಳೂರು/ಮಧ್ಯಪ್ರದೇಶ: ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಜತ್ ಪಾಟಿದಾರ್ ಅವರಿಗೆ ನಾಯಕತ್ವ ಒದಗಿ ಬಂದಿದೆ.
ರಜತ್ ಪಟಿದಾರ್ ಆರ್ ಸಿಬಿ ತಂಡದಲ್ಲಿ ಪ್ರಮುಖ ಆಟಗಾರ ಹಾಗೂ ಈ ಬಾರಿ ತಂಡ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ರಜತ್ ಪಾಟಿದಾರ್ ಗೆ ರಾಜ್ಯ ತಂಡದ ನಾಯಕತ್ವ ನೀಡಲಾಗಿದೆ.
ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ ತಂಡವನ್ನು ಘೋಷಿಸಲಾಗಿದೆ.
ಇದನ್ನು ಓದಿ: ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
ಮಧ್ಯಪ್ರದೇಶ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಒಂದು ವೇಳೆ ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವು ಫೈನಲ್ ಗೆ ತಲುಪಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ರೇಸ್ ನಲ್ಲಿ ರಜತ್ ಪಾಟಿದಾರ್ ಕೂಡ ತೀವ್ರ ಪೈಪೋಟಿ ಕೊಡಲಿದ್ದಾರೆ.
ಆರ್ ಸಿಬಿ ಪರ 24 ಇನ್ನಿಂಗ್ಸ್ ಆಡಿರುವ ರಜತ್ ಪಾಟಿದಾರ್ 1 ಶತಕ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಈಗಗಾಲೇ ಆರ್ ಸಿ ಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ತಂಡದಿಂದ ಹೊರಬಿದಿದ್ದಾರೆ. ಇದರಿಂದ ನಾಯಕತ್ವ ಯಾರ ಪಾಲಾಗಲಿದೆ ಎಂಬುವುದು ತ್ರೀವ್ರ ಕುತೂಹಲ ಮೂಡಿಸಿದೆ.
LATEST NEWS
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ