Friday, July 1, 2022

ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ್ ಚೌಟ ಇನ್ನಿಲ್ಲ

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.


ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು.

ಅಲ್ಲದೇ ದ.ಕ ಜಿಲ್ಲೆಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಮೊದಲ ಕ್ರೀಡಾಪಟುವಾಗಿದ್ದಾರೆ.

2007ರಲ್ಲಿ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿದ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದಿದ್ರು.

ಪ್ರಸ್ತುತ ಬ್ಯಾಂಕ್ ಆಫ್ ಬರೊಡಾ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿ ಕಾರ್ಯ ನಿರ್ವಹಿಸಿದ್ರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಇವರ ನಿಧನಕ್ಕೆ ಕ್ರೀಡಾ ಕ್ಷೇತ್ರದ ಗಣ್ಯರು ಮಾತ್ರವಲ್ಲದೇ ಇತರ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ಮಂಗಳೂರು: ಬಿರುವೆರ್ ಕುಡ್ಲ ದುಬೈ ಘಟಕದ ವತಿಯಿಂದ ನೆರವು ನಿಧಿ ವಿತರಣೆ

ಮಂಗಳೂರು: ಫ್ರೆಂಡ್ಸ್‌ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಪಂದನ ತಂಡವು ಬಡ ವರ್ಗದ ಚಿಕಿತ್ಸೆಗಾಗಿ ಕಳೆದ ಹಲವಾರು ವರ್ಷಗಳಿ೦ದ ಮಾನವೀಯ ನೆಲೆಯಲ್ಲಿ ನೆರವು ನೀಡುತ್ತಾ ಬರುತ್ತಿರುವುದು ಇತರ ಸಂಘಟನೆಗಳಿಗೆ ಮಾದರಿ ಎಂದು...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...