Thursday, February 9, 2023

ಕಡಬ ಕೋಡಿಂಬಾಳ ಬಳಿ ಆಟೋ-ಪಿಕಪ್ ನಡುವೆ ಅಪಘಾತಕ್ಕೆ ಜೀವ ತೆತ್ತ ನಾಲ್ಕು ವರ್ಷದ ಕಂದ..!

ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ.

ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಈ ಅಪಘಾತ ನಡೆದಿದೆ.

ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ ಕಡಬದ ವಿದ್ಯಾನಗರ ಸರಸ್ವತೀ ವಿದ್ಯಾಲಯದ ಶಿಶು ಮಂದಿರದ ವಿದ್ಯಾರ್ಥಿ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದರು.

ಕೂಡಲೇ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...