ಉದ್ಯಮಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಕಡಬ : ಉದ್ಯಮಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 60 ವರ್ಷದ ಚಂದ್ರಶೇಖರ ಪೂಜಾರಿ ಎಂದು ಗುರುತಿಸಲಾಗಿದೆ.
ಇವರು ಇಲ್ಲಿನ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಬಲೂನ್ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.