ಕಡಬ: ಕಡಬದಲ್ಲಿ ವಾಚ್ ರಿಪೇರಿ ಅಂಗಡಿ ಸಿಬ್ಬಂದಿಯನ್ನು ಹಿಡಿದು ದೂಡಿ ಹಾಕಿ ತಂಡವೊಂದು ಪುಂಡಾಟಿಕೆ ಮೆರೆದ ಘಟನೆ ಕಡಬದಲ್ಲಿ ನಡೆದಿದೆ.
ಸದ್ಯ ಈ ಘಟನೆಗೆ ಸಂಬಂಧಿಸಿದ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಹಲ್ಲೆಗೆ ಒಳಗಾಗಿರುವ ಐಡಿಯಲ್ ಕಾಂಪ್ಲೆಕ್ಸ್‌ನ ಲಕ್ಷ್ಮಣ ರೈ ಎಂಬವರನ್ನು ಕಡಬದ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಶುರು ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ದ ದೂರು ನೀಡಿದ ಲಕ್ಷ್ಮಣ ರೈ ಅವರಿಗೆ ನ್ಯಾಯಾಯಲದ ಆದೇಶ ಪಡೆಯುವಂತೆ ಪೊಲೀಸರು ಹಿಂಬರಹ ನೀಡಿ ಸೂಚಿಸಿರುವುದಾಗಿ ತಿಳಿದು ಬಂದಿದೆ. ಲಕ್ಷ್ಮಣ ರೈ ಅವರ ಅಂಗಡಿಯ ಸಿಬ್ಬಂದಿ ಪದ್ಮನಾಭ ರೈ ಎಂಬವರು ಠಾಣೆಗೆ ದೂರು ನೀಡಲು ಆಗಮಿಸಿದರೂ ಸುಮಾರು 5 ಗಂಟೆಗಳ ವರೆಗೂ ಪೊಲೀಸರು ದೂರು ಪಡೆದುಕೊಂಡಿಲ್ಲ ಎಂದು ಆರೋಪಿಸಲಾಗಿದೆ. ಹಲ್ಲೆ ಘಟನೆ ವಿಡಿಯೋ ಸಾಮಾಜಿಕ ಜಾಲಯತಾಣದಲ್ಲಿ ವೈರಲ್ ಆಗಿದೆ.
ಮಂಗಳೂರು: ಪಿ*ಸ್ತೂಲಿನಿಂದ ಗುಂ*ಡು ಹಾ*ರಿಸಿ ವ್ಯಕ್ತಿಯೊಬ್ಬ ಗಾ*ಯಗೊಂಡ ಘಟನೆ ವಾಮಂಜೂರು ಮೂಡುಶೆಡ್ಡೆಯಲ್ಲಿ ನಡೆದಿದ್ದು, ಈಗ ಈ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇಬ್ಬರು ರೌ*ಡಿಗಳಾದ ಬದ್ರುದ್ದೀನ್ ಮತ್ತು ಇಮ್ರಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬದ್ರುದ್ದೀನ್ ಹೊಂದಿದ್ದ ಅಕ್ರಮ ಪಿ*ಸ್ತೂಲಿನಿಂದ ಆಕಸ್ಮಿಕವಾಗಿ ಗುಂಡುಹಾರಿದ್ದು, ಪ್ರಿಂಟರ್‌ಗೆ ತಗಲಿ ಮುಂಭಾಗದಲ್ಲಿ ಕುಳಿತಿದ್ದ ಸಫ್ವಾನ್ ಎಂಬಾತನ ಹೊಟ್ಟೆಗೆ ತಾ*ಗಿ ಆತ ಗಂ*ಭೀರ ಗಾ*ಯಗೊಂಡಿದ್ದ. ಜ.6ರಂದು ಮೂಡುಶೆಡ್ಡೆಯ ಬದ್ರುದ್ದೀನ್‌ನ ಸೆಕೆಂಡ್ ಹ್ಯಾಂಡ್ ಸೇಲ್ ಅಂಗಡಿಯಲ್ಲಿ ಗುಂ*ಡು ಸಿಡಿದು ಓರ್ವ ಗಾ*ಯಗೊಂಡಿದ್ದರು. ಬಂಧಿತರಿಬ್ಬರೂ ನಿ*ಷೇಧಿತ ಪಿಎಫ್‌ಐ ಸಂಘಟನೆ ಮುಖಂಡರಾಗಿದ್ದು, ಇವರಲ್ಲಿದ್ದ ಪಿ*ಸ್ತೂಲ್‌ಗೆ ಲೈ*ಸೆನ್ಸ್ ಇರಲಿಲ್ಲ ಎಂದು ತಿಳಿದುಬಂದಿದೆ.
ಗಾ*ಯಾಳು ಸಫ್ವಾನ್ ಈ ಪ್ರಕರಣವನ್ನು ತಿರುಚಲು ಯತ್ನಿಸಿದ್ದು, ತನ್ನ ಕೈನಿಂದಲೇ ಗುಂ*ಡು ಹಾರಿತ್ತು ಹಾಗೂ ಪಿ*ಸ್ತೂಲ್ ಅನ್ನು ಭಾಸ್ಕರ್ ಎಂಬಾತ ನೀಡಿದ್ದಾಗಿ ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದ್ದರು. ಎಫ್‌ಎಸ್‌ಎಲ್ ಮತ್ತು ಬ್ಯಾಲಿಸ್ಟಿಕ್ ವಿಭಾಗದ ಅಧಿಕಾರಿಗಳೂ ತನಿಖೆ ನಡೆಸಿದಾಗ ಸ್ವಯಂ ಆಗಿ ಗುಂ*ಡು ಹಾರಿಸಿದಾಗ ಈ ರೀತಿ ಗಾ*ಯವಾಗುವುದಿಲ್ಲ ಎನ್ನುವುದು ಗೊತ್ತಾಗಿದೆ. ಅಲ್ಲದೆ ಪ್ರತ್ಯಕ್ಷದರ್ಶಿಗಳ ವಿಚಾರಣೆ ಹಾಗೂ ಸಿಸಿಟಿವಿ ತುಣುಕುಗಳನ್ನು ಪರಿಶೀಲಿಸಿದಾಗ ವಾಸ್ತವಾಂಶ ಬಹಿರಂಗಗೊಂಡಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬದ್ರುದ್ದೀನ್‌ಗೆ ಈ ಪಿ*ಸ್ತೂಲನ್ನು ಇಮ್ರಾನ್ ನೀಡಿದ್ದ ಹಾಗೂ ಗಾ*ಯಾಳು ಸಫ್ವಾನ್ ಕೂಡ ಪಿಎಫ್‌ಐ ಸದಸ್ಯ ಎಂದು ತಿಳಿದುಬಂದಿದೆ.ನಿಷೇಧಿತ ಪಿಎಫ್‌ಐ ಮುಖಂಡ ಪಿ*ಸ್ತೂಲ್ ಇರಿಸಿಕೊಂಡದ್ದು ಯಾಕೆ ಹಾಗೂ ಈತನ ಅಸಲಿ ಗುರಿ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ವಾಟ್ಸಾಪ್‌ನಲ್ಲಿ ಪರಿಚಯವಾದ ವ್ಯಕ್ತಿಗೆ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣವೊಂದರಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ತ್ರಿಶೂರ್‌ನ ಮಟ್ಟೂರು ನೂಲುವ್ಯಾಲಿಯ ಕೈಪುಝ ಹೌಸ್ ನಿವಾಸಿ ನಿಧಿನ್ ಕುಮಾರ್ ಕೆ.ಎಸ್ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ನಡೆದಿದೆ.
ಈತ ಕಳೆದ ವರ್ಷ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗ ಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10,32,000 ರೂಪಾಯಿಗಳನ್ನು ಹಂತಹಂತವಾಗಿ ಪಡೆದುಕೊಂಡಿದ್ದ. ಈ ಬಗ್ಗೆ ಮಂಗಳೂರಿನ ಸೆನ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ದೂರುದಾರರ ವಿವಿಧ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾದ ಬಗ್ಗೆ ಮತ್ತು ಅದು ಯಾರ ಖಾತೆಗೆ ಪಾವತಿಯಾಗಿದೆ ಎಂಬಿತ್ಯಾದಿ ವಿವರಗಳನ್ನು ಸಂಗ್ರಹಿಸಿ ಪೊಲೀಸರು ತನಿಖೆಯನ್ನು ನಡೆಸಿದ್ದರು. ಆರೋಪಿಯ ಬ್ಯಾಂಕ್ ಖಾತೆಗೆ 1 ಲಕ್ಷ ರೂಪಾಯಿ. ಬಂದಿದ್ದು, ಆತನ ಸ್ನೇಹಿತ ತಿಳಿಸಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣವನ್ನು ವರ್ಗಾವಣೆ ಮಾಡಿದ್ದಾಗಿ ತಿಳಿದು ಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ರವಿಶಂಕರ್ ನಿರ್ದೇಶನದಂತೆ ಸೆನ್ ಎಸಿಪಿ ರವೀಶ್ ನಾಯಕ್, ಇನ್‌ಸ್ಪೆಕ್ಟರ್ ಸತೀಶ್ ಎಂ.ಪಿ ಹಾಗೂ ಎಸ್‌ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಮಂಗಳೂರು/ಬೆಂಗಳೂರು : ಅದ್ದೂರಿಯಾಗಿ ತೆರೆಕಂಡು ಜನ ಮನ ಗೆದ್ದು, ತುಳು ಚಿತ್ರರಂಗದಲ್ಲೇ ಇತಿಹಾಸ ನಿರ್ಮಿಸಿರುವ ‘ದಸ್ಕತ್’ ಸಿನಿಮಾ ಜ.11, 12 (ಶನಿವಾರ ಮತ್ತು ಭಾನುವಾರ) ಬೆಂಗಳೂರಿನ ತುಳುವರಿಗಾಗಿ ಪ್ರದರ್ಶನ ಆಯೋಜಿಸಲಾಗಿದೆ.
ರಾಘವೇಂದ್ರ ಕುಡ್ಡ ನಿರ್ಮಾಣದಲ್ಲಿ ರೂಪುಗೊಂಡಿರುವ ಈ ಚಲನಚಿತ್ರವು ಶನಿವಾರ ಸಂಜೆ 7.30 ಹಾಗೂ ಜ.12ರ ಭಾನುವಾರದಂದು ಬೆ.11, ಮಧ್ಯಾಹ್ನ 2.30 ಹಾಗೂ ಸಂಜೆ 6 ಗಂಟೆಗೆ ಪ್ರದರ್ಶನಗೊಳ್ಳಲಿದೆ. ಚಿತ್ರರಂಗದ ಅನುಭವವಿಲ್ಲದವರೇ ಇರುವ ಈ ತುಳು ಭಾಷಾ ಚಲನಚಿತ್ರವು ಕರಾವಳಿಯ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಸುಂದರವಾಗಿ ನಿರೂಪಿಸಿದೆ. ಕರಾವಳಿಯ ಚಿತ್ರಪ್ರೇಮಿಗಳಿಗಾಗಿ ಮತ್ತು ತುಳು ಸಂಸ್ಕೃತಿಯನ್ನು ಅರಿಯುವ ಮನಸ್ಸುಳ್ಳ ಎಲ್ಲರಿಗಾಗಿ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಡಾ. ರಾಜ್‌ಕುಮಾರ್ ಭವನದ ಡಾ.ಅಂಬರೀಷ್ ಆಡಿಟೋರಿಯಂನಲ್ಲಿ ಚಲನಚಿತ್ರದ ಪ್ರದರ್ಶನ ಏರ್ಪಾಟಾಗಿದೆ.
ಗ್ರಾಮೀಣ ಬದುಕಿನ ನೂರಾರು ಸಂಗತಿಗಳನ್ನು ಆಯ್ದುಕೊಂಡು ಅವುಗಳನ್ನು ಬಿಡಿಬಿಡಿಯಾಗಿ ಬಿಡಿಸಿಕೊಂಡು ಒಂದೊಂದು ಸಂಗತಿಯನ್ನೂ ರೂಪಕದ ಹಾಗೆ ಸೃಷ್ಟಿಸುತ್ತಾ ಹೋಗಿದ್ದಾರೆ. ತಂತ್ರಜ್ಞಾನ, ಕ್ಯಾಮರಾ, ನಟ ನಟಿಯರು, ನಿರ್ಮಾಪಕ, ವ್ಯವಹಾರ, ಕಲಾತ್ಮಕತೆ, ಆರ್ಥಿಕ ಲಾಭ ಎಲ್ಲವನ್ನೂ ಲೆಕ್ಕಾಚಾರ ಮಾಡುವ ಈ ದಿನಗಳಲ್ಲಿ, ಅದೂ ತುಳು ಭಾಷೆಯಲ್ಲಿ ಒಂದು ವಿಶಿಷ್ಟ ಬಗೆಯ ಪ್ರಯತ್ನ ನಡೆದಿದೆ. ಪ್ರಮುಖ ಕಥಾ ಪಾತ್ರವೊಂದು ನಾಯಕನೂ ಅಲ್ಲದ ಖಳನೂ ಅಲ್ಲದ ಮತ್ತು ಅದು ಎರಡೂ ಆಗಿರುವ ನಟನೊಬ್ಬನ ನಟನಾಶಕ್ತಿಯನ್ನು ಈ ಸಿನಿಮಾದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ ಎಂದು ವಿಮರ್ಶಿಸಿದ್ದಾರೆ.
ನಾಯಕ ನಟನಾಗಿ ದೀಕ್ಷೀತ್ ಅಂಡಿಂಜೆ ಸಿನಿಮಾದಲ್ಲಿ ಉತ್ತಮ ಅಭಿನಯದ ಮೂಲಕ ಮಿಂಚಿದ್ದಾರೆ. ದಸ್ಕತ್ ಚಿತ್ರಕ್ಕೆ ಅನೀಶ್ ಪೂಜಾರಿ ವೇಣೂರು ನಿರ್ದೇಶನ ಮಾಡಿದ್ದು, ಸಂತೋಷ್ ಆಚಾರ್ಯ ಗುಂಪಲಾಜೆಯ ಛಾಯಾಗ್ರಹಣ ಗಮನ ಸೆಳೆದಿದೆ. ಸಮರ್ಥನ್ ಎಸ್.ರಾವ್ ಸಂಗೀತವಿದ್ದು, ಹೊಸಬರ ನಟನೆಯಲ್ಲಿ ಸುಂದರವಾಗಿ ಮೂಡಿಬಂದಿದೆ. ಈಗಾಗಲೇ ಎಂಟನೇ ಪರಿಚ್ಛೇದಕ್ಕೆ ಸೇರಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ತುಳು ಭಾಷೆಯ ವೈವಿಧ್ಯವೂ ಈ ಚಿತ್ರದ ಮೂಲಕ ಬಿಂಬಿತವಾಗಿದೆ.