ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಕಡಬ : ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.
ಮಾ.30ರ ತಡರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕ ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.
ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.
ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.
ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.
ಕಳೆದ ರಾತ್ರಿ ರೆನೀಶ್ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.