Saturday, November 27, 2021

ಕಡಬ: ಚಾಲಕನ ನಿಯಂತ್ರಣ ತಪ್ಪಿ ಪೊದೆಯೊಳಗೆ ನುಗ್ಗಿದ ಕಾರು,ಐವರಿಗೆ ಗಾಯ..!

ಕಡಬ: ಚಾಲಕನ ನಿಯಂತ್ರಣ ತಪ್ಪಿದ್ದ ಕಾರೊಂದು ರಸ್ತೆಯನ್ನು ಬಿಟ್ಟು ಹೊರಗಡೆ ಪೊದೆಗೆ ಹೋಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸಹಿತ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಸಮೀಪ ಬೆಳಂದೂರು ಎಂಬಲ್ಲಿ ಅ .15 ರಂದು ಮಧ್ಯಾಹ್ನ ನಡೆದಿದೆ.

ಗಾಯಾಳುಗಳ ಬಿಜೆಪಿ ಹಿರಿಯ ನಾಯಕರ ಹತ್ತಿರದ ಸಂಬಂಧಿಕರು ಎಂದು ಗುರುತಿಸಲಾಗಿದೆ.

ಬೆಂಗಳೂರು ಮೂಲದ ಯಾತ್ರಿಕರು ಜಿಲ್ಲೆಯ ಸುಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪುತ್ತೂರಿನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ಬರುತ್ತಿರುವಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದು ಅವರು ಬೆಂಗಳೂರಿನ ಜೆಪಿ ನಗರ ನಿವಾಸಿಗಳು. ಕಾರಿನಲ್ಲಿ ಒರ್ವ ಮಹಿಳೆ, ಒಂದು ಮಗು, ಒರ್ವ ವೃದ್ದ ಹಾಗೂ ಇಬ್ಬರು ಪುರುಷರು ಪ್ರಯಾಣಿಸುತ್ತಿದ್ದರು.

ಇವರ ಪೈಕಿ ಇಬ್ಬರ ಹೆಸರು ನಿರಂಜನ ಹಾಗೂ ರವಿರಾಮ ಎಂದು ತಿಳಿದು ಬಂದಿದೆ. ಅಪಘಾತದಿಂದ ಐವರಿಗೂ ಗಾಯಗಳಾಗಿದ್ದು ಅವರ ಪೈಕಿ ವೃದ್ದರೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಚಿಕಿತ್ಸೆಗಾಗಿ ಪುತ್ತೂರಿನ ಪ್ರಗತಿ ಆಸ್ಫತ್ರೆಗೆ ಹಾಗೂ ಚೇತನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...