Monday, January 24, 2022

ಕಡಬ: ಯುವತಿ ನಾಪತ್ತೆ

ಕಡಬ: ಯುವತಿಯೊಬ್ಬಳು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದಿಂದ ವರದಿಯಾಗಿದೆ.
ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ನಾಪತ್ತೆಯಾದ ಯುವತಿಯಾಗಿದ್ದಾಳೆ.


ಬುಧವಾರದಂದು ಮನೆಯಿಂದ ಹೊರ ಹೋದ ಯುವತಿ ರಾತ್ರಿಯಾದರೂ ಮನೆಗೆ ಬಾರದೆ ಇದ್ದುದರಿಂದ ಸಂಬಂಧಿಕರಲ್ಲಿ ಹಾಗೂ ನೆರೆ ಹೊರೆಯವರಲ್ಲಿ ವಿಚಾರಿಸಿದಾಗ ಯಾವುದೇ ಸುಳಿವು ಪತ್ತೆಯಾಗದ ಕಾರಣ ಆಕೆಯ ತಂದೆ ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮ ದಿನದ ಪ್ರಯುಕ್ತ ರಕ್ತದಾನ ಶಿಬಿರ

ಮಂಗಳೂರು: ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ 125 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ) ನೇತೃತ್ವದಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...