KADABA
ಶಿರಾಡಿಯಲ್ಲಿ ಆನೆ ದಾಳಿಗೊಳಗಾದ ವ್ಯಕ್ತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಅಂಗಾರ
ಕಡಬ: ಶಿರಾಡಿಯಲ್ಲಿ ಆನೆ ದಾಳಿಗೆ ಒಳಗಾದ ಕಡಬದ ಗುಂಡ್ಯ ಗ್ರಾಮದ ವ್ಯಕ್ತಿಯ ಮನೆಗೆ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಘಟನೆ ಬಗ್ಗೆ ಅರಣ್ಯ ಇಲಾಖೆಯ ಡಿಸಿಎಫ್ ಅವರನ್ನು ಸಂಪರ್ಕಿಸಿ ಇಲಾಖಾ ವತಿಯಿಂದ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ರಸ್ತೆಯಲ್ಲಿ ಹೋಗುತ್ತಿದ್ದ ತಂದೆ ಮಗನ ಮೇಲೆ ಒಂಟಿ ಸಲಗ ಡಿ.31 ರಂದು ದಾಳಿ ಮಾಡಿತ್ತು.ಈ ಘಟನೆಯಲ್ಲಿ ಶಿರಾಡಿ ಗ್ರಾಮದ ಜಮತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ ಮತ್ತು ಅವರ ಪುತ್ರ ಶರಣ್ ದಾಳಿಗೆ ಒಳಗಾಗಿದ್ದರು.
ತಂದೆ ಸಾವಿಗೀಡಾದರೆ ಮಗ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ
ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
DAKSHINA KANNADA
ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ!
ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಆಗಿ ಜಯಣ್ಣ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.
ಇದಕ್ಕೂ ಮೊದಲು ಸೋಮವಾರ ಪೇಟೆ ತಾಲೂಕ ಪಂಚಾಯತ್ ನಲ್ಲಿ ಅವರು ಇಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿರುವಾಗಲೇ ಇವರ ವಿರುದ್ಧ ಅಕ್ರಮ ಆಸ್ತಿಗಳಿಕೆಯ ದೂರು ದಾಖಲಾಗಿದ್ದು, ಆ ವಿಚಾರದ ತನಿಖೆಗೆ ಇಂದು ಕಡಬದಲ್ಲಿ ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆಯ ಮನೆ, ಕಡಬದ ಕಚೇರಿ ಹಾಗೂ ಕಡಬದಲ್ಲೇ ಇರುವ ಜಯಣ್ಣ ಅವರ ಬಾಡಿಗೆ ಮನೆ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಜಯಣ್ಣ ಅವರ ವಿಚಾರಣೆ ನಡೆಸುತ್ತಿದ್ದಾರೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!