ಕಡಬ: ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮೂರು ತಿಂಗಳ ಹಿಂದೆ ಮನೆಗೆ ನುಗ್ಗಿ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿವಾಸಿ ಪ್ರಸ್ತುತ ಐತ್ತೂರು ಸುಂಕದಕಟ್ಟೆ ನಿವಾಸಿ ಹಕೀಂ (23) ಬಂಧಿತ ಆರೋಪಿ.
ಕಳ್ಳತನಕ್ಕೆ ಸಹಕರಿಸಿದ ಇನ್ನೋರ್ವ ಆರೋಪಿ ಹಮೀದ್ ನನ್ನು ( 25 ) ಇನ್ನೊಂದು ಪ್ರಕರಣದಲ್ಲಿ ಬೆಂಗಳೂರಿನ ಪೊಲೀಸರು ಬಂಧಿಸಿದ್ದು , ಅವರನ್ನು ಕಡಬ ಪೊಲೀಸರು ಇನ್ನಷ್ಟೇ ವಶಕ್ಕೆ ಪಡೆಯಬೇಕಾಗಿದೆ.