ಕಡಬ: ಕೆಲ ದಿನಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿ ತೆಗೆದುಕೊಂಡಿತ್ತು. ಈ ವೇಳೆ ಅರಣ್ಯ ಇಲಾಖೆಯವರು ಆನೆ ಸೆರೆಹಿಡಿಯುತ್ತಿದ್ದ ವೇಳೆ ಪೊಲೀಸರು, ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರ ನಡುವೆ ಗಲಾಟೆ ನಡೆದು ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿ ಅಧಿಕಾರಿಗಳ ಕೊಲೆಗೆ ಯತ್ನಿಸಿದ್ದರು ಎಂದು ಪ್ರಕರಣ ದಾಖಲಿಸಿ 7 ಆರೋಪಿಗಳನ್ನು ಬಂಧಿಸಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯ ಆರೋಪಿಗಳಾದ ಉಮೇಶ್ ಕಮರ್ಕಜೆ, ರಾಜೇಶ್ ಕಮರ್ಕಜೆ, ಜನಾರ್ದನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿಬಾಗಿಲು ಮತ್ತು ಅಜಿತ್ ಕುಮಾರ್ ಕೆಂಜಾಳ ಎಂಬವರಿಗೆ ಷರತ್ತು ಬದ್ದ ಜಾಮೀನು ಮಂಜೂರುಗೊಳಿಸಿದರು.
ಆರೋಪಿಗಳ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ಅವರು ವಾದ ಮಂಡಿಸಿದ್ದರು.
ಕಡಬ: ಕಾಡಾನೆ ಸೆರೆ ಹಿಡಿದು ಸಾಗಿಸುತ್ತಿದ್ದಾಗ ಅಧಿಕಾರಿ ವಾಹನಗಳ ಮೇಲೆ ದಾಳಿ- ವಾಹನಗಳು ಪುಡಿಪುಡಿ..!