KADABA
ಕಡಬ: ವ್ಯಕ್ತಿಯಿಂದ ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
Published
2 years agoon
By
Adminಕಡಬ: ಒತ್ತಾಯಪೂರ್ವಕವಾಗಿ ಮತಾಂತರ ಮಾಡಿಸಿರುವ ಆರೋಪವನ್ನು ಹೊತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕಡಬ ತಾಲೂಕಿನ ಕುಟುಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದವರು.
ಅರ್ಜಿ ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ನ್ಯಾಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ ಮತಾಂತರ ನಿಷೇಧಿಸಲು ರಾಜ್ಯ ಸರಕಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣ ಕಾಯ್ದೆ-2020’ ಅನ್ನು ಜಾರಿಗೊಳಿಸಿದೆ. ಇದು ಸಂವಿಧಾನ ವಿರೋಧಿಯಾಗಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಇನ್ನು ಸರಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ದಾಖಲಿಸಿರುವ ಅರ್ಜಿದಾರರರ ವಿರುದ್ಧವೇ ಬಲವಂತದ ಮತಾಂತರ ಆರೋಪದಲ್ಲಿ 2 ಕ್ರಿಮಿನಲ್ ಪ್ರಕರಣಗಳಿವೆ.
ಸ್ವತಃ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಅರ್ಜಿಯನ್ನು ಪರಿ ಗಣಿಸಬಾರದು ಎಂದು ಮನವಿ ಮಾಡಿದರು.
ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಆರೋಪಿ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಲಾಗದು ಎಂದು ಹೇಳಿ ವಿಚಾರಣೆಯನ್ನು ನ.28ಕ್ಕೆ ಮುಂದೂಡಿದೆ.
DAKSHINA KANNADA
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ಮೆಸೇಜ್; ಯುವಕರಿಂದ ಹಲ್ಲೆ
Published
3 weeks agoon
02/11/2024ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.
ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ.
ಸ್ಥಳೀಯ ಯುವತಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದು ಬಂದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ.
ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಕೋಡಿಂಬಾಳ ಪರಿಸರದಲ್ಲಿ ಸಾಕು ನಾಯಿಗಳು ನಾಪತ್ತೆ..! ಚಿರತೆ ಹೊತ್ತೊಯ್ದಿರಬಹುದೆಂಬ ಆಂತಕ
Published
3 months agoon
30/08/2024By
NEWS DESK3ಕಡಬ: ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಮನೆಯಲ್ಲಿ ಸಾಕು ನಾಯಿಗಳು ನಾಪತ್ತೆಯಾಗುತ್ತಿರುವ ಘಟನೆ ಕೋಡಿಂಬಾಳ ಬಳಿಯ ಪುಳಿಕುಕ್ಕು, ಪಂಜ, ನೇರಳ ಪರಿಸರದಲ್ಲಿ ನಡೆಯುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇನ್ನು ಈ ಪ್ರದೇಶದಲ್ಲಿ ಚಿರತೆಗಳು ಓಡಾಟ ನಡೆಸಿದ್ದು ಸಾಕು ನಾಯಿಗಳನ್ನು ಚಿರತೆಗಳೇ ಎಳೆದೊಯ್ದಿರಬೇಕು ಎಂದು ಸಂಶಯಿಸಲಾಗಿದೆ.
ಪಂಜ ಬಳಿಯ ಕರುಂಬು ನೆಕ್ಕಿಲ ನಿವಾಸಿ ರಾಮಚಂದ್ರ ಭಟ್ ಅವರ ಎರಡು ಸಾಕುನಾಯಿಗಳು ಆ.28ರಂದು ರಾತ್ರಿ ವೇಳೆ ಗೂಡಿನಿಂದ ಹೊರಬಿಟ್ಟ ಬಳಿಕ ತೋಟದತ್ತ ಹೋಗಿದ್ದು ಅನಂತರ ನಾಪತ್ತೆಯಾಗಿವೆ. ಇನ್ನು ಪಕ್ಕದ ಮನೆಯಲ್ಲಿ ಮಲಗಿದ್ದ ಸಾಕು ನಾಯಿಗಳು ಕೂಡಾ ನಾಪತ್ತೆಯಾಗಿವೆ.
17 ವರ್ಷದ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ಕಾರು ಡಿ*ಕ್ಕಿ; ಬೈಕ್ ಸವಾರ ಸಾ*ವು
ಸಿಟೌಟ್ ನಲ್ಲಿ ನಾಯಿ ಮಲವಿಸರ್ಜನೆ ಮಾಡಿದ್ದು ಯಾವುದೋ ಪ್ರಾಣಿ ಜೊತೆ ಕಾದಾಡಿರುವ ಕುರುಹುಗಳು ಕೂಡಾ ಕಂಡು ಬಂದಿದೆ. ಈ ಹಿಂದೆಯೂ ಬೊಳ್ಳಾಜೆ, ಪೂಳೆಂಜ, ನೆಕ್ಕಿಲ, ನೇರಳ ಎಂಬ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಂಡಿತ್ತು ಎಂಬ ಸುದ್ದಿ ಹರಡಿತ್ತು. ಹೀಗಾಗಿ ನಾಯಿಗಳನ್ನು ಚಿರತೆ ಹೊತ್ತೊಯ್ದಿರಬಹುದು ಎಂದು ಹೇಳಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಅರಣ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ..! ಕ್ಯಾಶ್ ರಿಜಿಸ್ಟರ್ ಮಾಡದ ಬಗ್ಗೆ ಅಸಮಾಧಾನ
Published
3 months agoon
24/08/2024By
NEWS DESK3ಕಡಬ: ಕಡಬದ ತಾಲೂಕು ಆಡಳಿತ ಸೌಧಕ್ಕೆ ಲೊಕೋಯುಕ್ತ ಎಸ್‌ಪಿ ನಟರಾಜ್ ದಿಢೀರ್ ಬೇಟಿ ನೀಡಿ ಕಚೇರಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಸಿಬ್ಬಂದಿಗಳು ಲಾಗಿನ್ ಸಮಯದಲ್ಲಿ ತಮ್ಮಲ್ಲಿರುವ ಕ್ಯಾಶ್ ಲೆಕ್ಕ ಬರೆದಿಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಂದಾಪುರ:ಆಕಸ್ಮಿಕವಾಗಿ ಬೆಂಕಿ ತಗುಲಿ ಫ್ಯಾನ್ಸಿ ಸ್ಟೋರ್ ಭಸ್ಮ
ಪ್ರತಿ ನಿತ್ಯ ಕಚೇರಿಗೆ ಬರುವಾಗ ಮತ್ತು ಕಚೇರಿಯಿಂದ ಹೋಗುವಾಗ ಕ್ಯಾಶ್ ರಿಜಿಸ್ಟರ್ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಕ್ಯಾಶ್ ರಿಜಿಸ್ಟರ್ ಮಾಡಲು ಪುಸ್ತಕ ಇದ್ರೂ ಖಾಲಿ ಇರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಇದೆ ವೇಳೆ ಅರ್ಹ ಬಿಪಿಎಲ್ ಕಾರ್ಡ್ ಬಳಕೆದಾರರನ್ನು ಗುರುತಿಸಿ ಉಳಿದವರ ಕಾರ್ಡ್ ಅನರ್ಹಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಐಶಾರಾಮಿ ಕಾರಿನಲ್ಲಿ ಓಡಾಡುವವರು ಕೂಡಾ ಬಿಪಿಎಲ್ ಕಾರ್ಡ್ ಹೊಂದಿರುವ ಕಾರಣ ಅರ್ಹರಿಗೆ ವಂಚನೆ ಆಗುತ್ತಿದೆ ಎಂದು ಅಧಿಕಾರಿಗಳ ಗಮನ ಸೆಳೆದಿದ್ದಾರೆ. ತಾಲೂಕು ಕಚೇರಿಯಲ್ಲಿ ಜನರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜನರು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಎಸ್‌ಪಿ ನಟರಾಜ್ ಜನರನ್ನು ವಿನಾ ಕಾರಣ ಕಚೇರಿಗಳಿಗೆ ಅಲೆದಾಡಿಸಿದ್ರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ವೇಳೆ ಎಚ್ಚರಿಕೆ ಕೂಡಾ ನೀಡಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ