Connect with us

KADABA

ಕಡಬ: ವ್ಯಕ್ತಿಯಿಂದ ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Published

on

ಕಡಬ: ಒತ್ತಾಯಪೂರ್ವಕವಾಗಿ ಮತಾಂತರ ಮಾಡಿಸಿರುವ ಆರೋಪವನ್ನು ಹೊತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕಡಬ ತಾಲೂಕಿನ ಕುಟುಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದವರು.


ಅರ್ಜಿ ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ನ್ಯಾಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ರಾಜ್ಯದಲ್ಲಿ ಮತಾಂತರ ನಿಷೇಧಿಸಲು ರಾಜ್ಯ ಸರಕಾರ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣ ಕಾಯ್ದೆ-2020’ ಅನ್ನು ಜಾರಿಗೊಳಿಸಿದೆ. ಇದು ಸಂವಿಧಾನ ವಿರೋಧಿಯಾಗಿದ್ದು, ಇದನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಇನ್ನು ಸರಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ದಾಖಲಿಸಿರುವ ಅರ್ಜಿದಾರರರ ವಿರುದ್ಧವೇ ಬಲವಂತದ ಮತಾಂತರ ಆರೋಪದಲ್ಲಿ 2 ಕ್ರಿಮಿನಲ್ ಪ್ರಕರಣಗಳಿವೆ.

ಸ್ವತಃ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಅರ್ಜಿಯನ್ನು ಪರಿ ಗಣಿಸಬಾರದು ಎಂದು ಮನವಿ ಮಾಡಿದರು.

ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಆರೋಪಿ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಲಾಗದು ಎಂದು ಹೇಳಿ ವಿಚಾರಣೆಯನ್ನು ನ.28ಕ್ಕೆ ಮುಂದೂಡಿದೆ.

DAKSHINA KANNADA

“ಮಂಗಳೂರು ಅಂದ್ರೆ ಅಭಿಮಾನ”-ಒಂದೇ ವೇದಿಕೆಯಲ್ಲಿ ಅಭಿ-ರೂಪಿ,

Published

on

ಮಂಗಳೂರು ಹಿಂದೂ ಯುವ ಸೇನೆ ವತಿಯಿಂದ ನೆಹರು ಮೈದಾನದಲ್ಲಿ ನಡೆದ 31 ನೇ ವರ್ಷದ ಮಂಗಳೂರು ಗಣೇಶೋತ್ಸವ ನಿನ್ನೆ ಸಂಪನ್ನಗೊಂಡಿದೆ. ಉತ್ಸವಕ್ಕೆ ಬಂದಿದ್ದ ಕನ್ನಡ ಚಿತ್ರರಂಗದ ನಾಯಕ ನಟ ಅಭಿಷೇಕ್ ಅಂಬರೀಷ್ ಗಣೇಶನನ್ನು ಕಣ್ತುಂಬಿಕೊಂಡರು

 

ಮಂಗಳೂರು :  ಮಂಗಳೂರು ಹಿಂದೂ ಯುವ ಸೇನೆ ವತಿಯಿಂದ ನೆಹರು ಮೈದಾನದಲ್ಲಿ ನಡೆದ 31 ನೇ ವರ್ಷದ ಮಂಗಳೂರು ಗಣೇಶೋತ್ಸವ ನಿನ್ನೆ ಸಂಪನ್ನಗೊಂಡಿದೆ. ಉತ್ಸವಕ್ಕೆ ಬಂದಿದ್ದ ಕನ್ನಡ ಚಿತ್ರರಂಗದ ನಾಯಕ ನಟ ಅಭಿಷೇಕ್ ಅಂಬರೀಷ್ ಗಣೇಶನನ್ನು ಕಣ್ತುಂಬಿಕೊಂಡರು.

ಈ ಸಂದರ್ಭ ಮಾತನಾಡಿದ ಅವರು “”ದಕ್ಷಿಣ ಕನ್ನಡ ಜಿಲ್ಲೆ ಅಂದ್ರೆ ನಮಗೆ ಭಾರೀ ಅಭಿಮಾನ. ಇಲ್ಲಿನ ಕಲಾವಿದರು ಕನ್ನಡ ಸಿನೆಮಾ ರಂಗದ ಪಿಲ್ಲರ್ಸ್. ಮಂಡ್ಯದಲ್ಲಿ ರೈತರಿಗೆ ದೊಡ್ಡ ಸಮಸ್ಯೆ ಇದೆ.

ಆ ಸಮಸ್ಯೆ ಪರಿಹಾರಕ್ಕಾಗಿ ನೀವು ಗಣಪನಲ್ಲಿ ಪ್ರಾರ್ಥಿಸಿ. ಹಾಗೇ ನಮ್ಮ ಬ್ಯಾಡ್ ಮ್ಯಾನರ್ಸ್ ಸಿನೆಮಾಕ್ಕೆ ಆಶೀರ್ವಾದ ಮಾಡಿ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ತುಳು ಚಿತ್ರನಟ ರೂಪೇಶ್ ಶೆಟ್ಟಿ ಮಾತನಾಡಿ “ನಾನು ಇಲ್ಲೆ ಪಕ್ಕದ ಪಾಂಡೇಶ್ವರದಲ್ಲೆ ಇದ್ದುಕೊಂಡು ಬಾಲ್ಯದಲ್ಲೆ ಹಿಂದೂ ಯುವ ಸೇನೆ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮವನ್ನು ನೋಡಿಕೊಂಡು ಬೆಳೆದವ. ಮಂಗಳೂರು ಗಣೇಶೋತ್ಸವವೇ ನಮಗೆ ಬಹುದೊಡ್ಡ ಗಣೇಶೋತ್ಸವ ಎಂದರು.

 

Continue Reading

DAKSHINA KANNADA

ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಂ ಘೋಷಣೆ ಪ್ರಕರಣ- ಓರ್ವ ಬಂಧನ, ಇನ್ನೋರ್ವ ಎಸ್ಕೇಪ್‌..!

Published

on

Kadaba: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಆವರಣಕ್ಕೆ ಇಬ್ಬರು ಯುವಕರು ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕಡಬ ತಾಲೂಕಿನ ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್  (25) ಬಂಧಿತ ಆರೋಪಿ.

ಇನ್ನೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಕಡಬ ಪೊಲೀಸರು ಬಲೆ ಬೀಸಿದ್ದಾರೆ.

ಸೋಮವಾರ ರಾತ್ರಿ 11 ಗಂಟೆ ವೇಳೆಗೆ ಬೈಕಿನಲ್ಲಿ ಬಂದ ಈ ಇಬ್ಬರು ಯುವಕರು ಮಸೀದಿಯ ಹೊರ ಭಾಗದಲ್ಲಿ ಬೈಕ್‌ ನಿಲ್ಲಿಸಿ ಕೆಳಗಿಳಿದು ಬಳಿಕ ಮಸೀದಿ ಕೌಂಪೌಂಡ್ ಒಳನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದರು.

ಸಿಸಿಟಿವಿ ಕ್ಯಾಮರಾದಲ್ಲಿ ಇಬ್ಬರು ಕಿಡಿಗೇಡಿಗಳು ಕಂಪೌಂಡ್‌ ಒಳನುಗ್ಗಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.

ಮಸೀದಿಯ ಧರ್ಮಗುರುಗಳನ್ನು ನೋಡಿದ ತತ್‌ಕ್ಷಣ ಆರೋಪಿಗಳು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ 24 ಗಂಟೆಗಳೊಳಗೆ ಓರ್ವ ಆರೋಪಿಯನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ  ಕಡಬ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Continue Reading

DAKSHINA KANNADA

Kadaba: ಬೈಕ್, ಕಾರು ಢಿಕ್ಕಿ- ತಾ.ಪಂ.ಮಾಜಿ ಸದಸ್ಯ ಆಸ್ಪತ್ರೆಗೆ ದಾಖಲು..!

Published

on

ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ.

ಕಡಬ: ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ.


ಬೈಕ್ ಸವಾರ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂಬವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಲಕ್ಷ್ಮೀ ನಾರಾಯಣರ ಅವರ  ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

LATEST NEWS

Trending