Monday, January 24, 2022

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ- ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು: ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ, ಆಕೆ ಗರ್ಭವತಿಯಾನ್ನಾಗಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಏನಿದು ಪ್ರಕರಣ?
ಕಡಬ ಪೊಲೀಸ್ ಠಾಣೆಯ ಶಿವರಾಜ್ ಅದೇ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ. ಈ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ.28 ರಂದು ಪೊಲೀಸರು ಬಂಧಿಸಿದ್ದರು.

ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ದೋಷಾರೋಪಣ ಪಟ್ಟಿ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪರ ವಕೀಲರು ಜಾಮೀನು ಕೋರಿ ಪುತ್ತೂರಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದು‌ ಈಗ ತಿರಸ್ಕೃತಗೊಂಡಿದೆ.

ಈ ಘಟನೆಗೆ ಸಂಬಂಧಿಸಿ ನೀತಿ ಸಾಮಾಜಿಕ ಸಂಘಟನೆಯ ಮುಖ್ಯಸ್ಥ ಜಯನ್ ಟಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ದೂರು ನೀಡಿದ್ದರು.

ಕಡಬ ಪೊಲೀಸಪ್ಪನ ಪೋಲಿಯಾಟ: ಸಂತ್ರಸ್ತೆ ತಂದೆಯಿಂದ ದೂರು ದಾಖಲು

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...