Friday, August 19, 2022

ಕಡಬ ಠಾಣೆಯ ಪೊಲೀಸಪ್ಪನ ಪೋಲಿಯಾಟ: ಅತ್ಯಾಚಾರಗೈದು ಅಬಾರ್ಷನ್

ಕಡಬ: ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿ, ಆಕೆ ಗರ್ಭರ್ವತಿಯಾನ್ನಾಗಿಸಿ ಕಾರಣನಾಗಿ, ನಂತರ ಅಬಾರ್ಷನ್ ಮಾಡಲಾಗಿದೆ ಎನ್ನಲಾದ ಕಡಬ ಪೊಲೀಸ್ ಸಿಬ್ಬಂದಿಯ ಕಾಮಪುರಾಣ ಸುದ್ದಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಈ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಪುತ್ತೂರು ಎಎಸ್‌ಪಿ ಕಡಬ ಠಾಣೆಗೆ ಆಗಮಿಸಿದ್ದಾರೆ.
ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಠಾಣಾ ವ್ಯಾಪ್ತಿಯ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ್ದು,

ಅವಳು ಗರ್ಭಿಣಿಯಾಗಿದ್ದಾಳೆಂದು ಗೊತ್ತಾದ ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಅಬಾರ್ಷನ್ ಮಾಡಿಸಿದ್ದಾನೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕಡಬ ಠಾಣೆಯ ಅಧಿಕಾರಿ ಈ ಪೊಲೀಸ್ ಸಿಬ್ಬಂದಿಯ ಕಾಮ ಪುರಾಣ ತಿಳಿದು ತಮ್ಮ ಚೇಂಬರ್‌ಗೆ ಕರೆಸಿ ಬುದ್ಧಿವಾದ ಹೇಳಿದ್ದಾರೆ.

ಆದರೂ ಈತ ತನ್ನ ಚಾಳಿ ಮುಂದುವರಿಸಿದ್ದಾನೆ. ಇತನ ಕೆಲಸಗಳನ್ನು ಪತ್ರಕರ್ತರು ವರದಿ ಮಾಡುತ್ತಾರೆ ಎಂದು ಗೊತ್ತಾದ ತಕ್ಷಣ ಪತ್ರಕರ್ತರೊಬ್ಬರಿಗೆ ಇದೇ ಪೊಲೀಸ್ ಸಿಬ್ಬಂದಿ ವರದಿ ಮಾಡದಂತೆ ದುಂಬಾಲು ಬೀಳುವ ವಿಡಿಯೋ ಕೂಡ ವೈರಲ್ ಆಗಿದೆ.
ಈ ಸಂಬಂಧ ಪುತ್ತೂರು ಎಎಸ್‌ಪಿ ಗಾನಾ ಪಿ. ಕುಮಾರ್ ಪತ್ರಕರ್ತರೊಂದಿಗೆ ಮಾತನಾಡಿ, ವಿಷಯ ಗಮನಕ್ಕೆ ಬಂದಿದೆ. ನೊಂದ ಯುವತಿ ಅಥವಾ ಸಾರ್ವಜನಿಕರು ಹೆಸರು ಉಲ್ಲೇಖ ಮಾಡಿ ದೂರು ನೀಡಿದರೆ ಆರೋಪಿಯ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರಗೆ ಜೀವಬೆದರಿಕೆ: ಬಂಟ್ವಾಳ DYSPಗೆ ದೂರು

ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಬೋರ್ಡ್‌ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.  ಖಾಲಿದ್ ನಂದಾವರದ.ಕ ಜಿಲ್ಲಾ ವಕ್ಫ್‌ ಬೋರ್ಡ್ ಸದಸ್ಯ...

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...