DAKSHINA KANNADA
ಕಡಬ ಮನೆ ಮೇಲೆ ಗುಡ್ಡ ಕುಸಿತ : ಪರಸ್ಪರ ಕೈ ಹಿಡಿದೇ ಜೀವಕಳಕೊಂಡ ಪುಟ್ಟ ಸಹೋದರಿಯರು..!
ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂಚಿನಲ್ಲಿ ನೀರು ತುಂಬಿತ್ತು.
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಮೇಘ ಸ್ಪೋಟದ ಮಳೆಯಿಂದಾಗಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಕಣ್ಮರೆಯಾಗಿದ್ದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲಕ್ಕೆತ್ತಲಾಯಿತು.
ಆದರೆ ಮೇಲಕ್ಕೆತ್ತುವ ಸಂದರ್ಭ ಇಬ್ಬರೂ ಸೋದರಿಯರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ.
ಪರ್ವತಮುಖಿಯ ಕುಸುಮಾಧರ ಅವರ ಮಕ್ಕಳಾದ ಶ್ರುತಿ (11) ಮತ್ತು ಜ್ಞಾನಶ್ರೀ (6) ಮಣ್ಣಿನಡಿ ಸಿಲುಕಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಸೋಮವಾರ ಸಂಜೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಸಂಜೆ 7 ಗಂಟೆ ಸುಮಾರಿಗೆ ಒಮ್ಮೆಲೇ ಭಾರೀ ಜೋರಾದ ಶಬ್ದ ಕೇಳಿಸಿದೆ.
ಈ ವೇಳೆ ಮನೆಯ ಜಗಲಿಯಲ್ಲಿ ಓದುತ್ತಿದ್ದ ಶ್ರುತಿ ಪುಸ್ತಕವನ್ನು ಅಲ್ಲಿಯೇ ಬಿಟ್ಟು ಶಬ್ದ ಮನೆಯ ಒಳಗಿಂದ ಬಂದಿರಬಹುದು ಎಂದು ಅತ್ತ ಓಡಿದ್ದಾಳೆ.
ಜ್ಞಾನಶ್ರೀ ಮನೆಯ ಒಳಗೆ ಚಾವಡಿಯಲ್ಲಿದ್ದು ದೊಡ್ಡವಳು ಕೂಡ ಅಲ್ಲಿಗೆ ತಲುಪಿದ್ದಾಳೆ. ಕ್ಷಣಾರ್ಧದಲ್ಲಿ ಪಕ್ಕದ ಗುಡ್ಡೆ
ಮನೆಯ ಮೇಲೆಯೇ ಕುಸಿದು ಬಿದ್ದಿದೆ.
ಅಡುಗೆಯಲ್ಲಿ ನಿರತರಾಗಿದ್ದ ತಾಯಿ ಅದೇ ಕ್ಷಣ ಶಬ್ದಕ್ಕೆ ಹೆದರಿ ಮಕ್ಕಳು ಹೊರಗಿದ್ದಾರೆ ಎಂದು ಹೊರಗಡೆ ಓಡಿ ಬಂದಿದ್ದಾರೆ.
ಆದರೆ ಅಲ್ಲಿ ಹೊರಗಡೆ ಮಕ್ಕಳು ಮಾತ್ರ ಕಾಣಲು ಸಿಗದೆ ಹೆತ್ತ ಕರುಳಿನ ರೋದನ ಆ ಕರಿ ಗತ್ತಲಲ್ಲೂ ಮಾರ್ದನಿಸುತ್ತಿತ್ತು.
ಹೆತ್ತ ತಾಯಿಯ ರೋದನ ಕೇಳಿ ಸನಿಹದಲ್ಲಿದ್ದ ಜನ ಓಡೋಡಿ ಬಂದರೂ ಗುಡ್ಡೆಯ ಅಗಾದ ಮಣ್ಣಿನ ರಾಶಿಯಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ. .
ತಡರಾತ್ರಿ ಸುರಿಯುತ್ತಿದ್ದ ಮಳೆಯೂ ರಕ್ಷಣ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲ ಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂಚಿನಲ್ಲಿ ನೀರು ತುಂಬಿತ್ತು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!