Connect with us

DAKSHINA KANNADA

ಕಡಬ ಕಾಡಾನೆ ದಾಳಿ ಪ್ರಕರಣ: ಸ್ಥಳಕ್ಕೆ ಜಿಲ್ಲಾಧಿಕಾರಿ, ಡಿಎಫ್ಒ ಭೇಟಿ- ಸಾಂತ್ವಾನ..!

Published

on

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲ ಎಂಬಲ್ಲಿ ಕಾಡಾನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ತೀವ್ರ ಪ್ರತಿಭಟನೆ ಮತ್ತು ಆಗ್ರಹದಂತೆ ಘಟನಾ ಸ್ಥಳಕ್ಕೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಹಾಗೂ ಡಿಎಫ್ಒ ಡಾ‌.ವೈ.ಕೆ.ದಿನೇಶ್ ಆಗಮಿಸಿ ಸ್ಥಳೀಯರ ಅಹವಾಲು ಆಲಿಸಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಜೊತೆಗೆ ಸ್ಥಳೀಯ ಮುಖಂಡರೊಂದಿಗೆ ಮಾತನಾಡಿದ ಅವರು ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವ ಬಗ್ಗೆ ಭರವಸೆ ನೀಡಿದರು.

ಘಟನಾ ಸ್ಥಳ ಪರಿಶೀಲನೆ ನಡೆಸಿ ಘಟನೆಯ ಬಗ್ಗೆ ಸಮಗ್ರ ಮಾಹಿತಿ ಪಡೆದರು. ಅಧಿಕಾರಿಗಳ ಭರವಸೆ ಬಳಿಕ ಮೃತರ ಮುಂದಿನ ಕಾರ್ಯಗಳಿಗೆ ಅವಕಾಶಕ್ಕೆ ಸ್ಥಳೀಯರು ಒಪ್ಪಿಗೆ ಸೂಚಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಇಲ್ಲಿನ ಕಾಡಾನೆ ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಪೂರಕ ಕ್ರಮ ಕೈಗೊಳ್ಳಲಾಗುವುದು. ಮೃತಪಟ್ಟ ಇಬ್ಬರ ಕುಟುಂಬಕ್ಕೆ ಇಂದೇ ತಲಾ 15 ಲಕ್ಷ ಪರಿಹಾರ ನೀಡಲಾಗುವುದು.

ಕಾಡಾನೆ ಹಾವಳಿ ನಿಯಂತ್ರಣಕ್ಕೆ ವೈಜ್ಞಾನಿಕ ರೀತಿಯಲ್ಲಿ ಆನೆ ಕಂದಕ ತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. ಎಸಿ ಗಿರೀಶ್ ನಂದನ್, ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ್, ಎಸಿಎಫ್ ಪ್ರವೀಣ್ ಕುಮಾರ್, ಕಡಬ ತಹಶೀಲ್ದಾರ್ ರಮೇಶ್, ಉಪತಹಶೀಲ್ದಾರ್ ಗೋಪಾಲ ಕಲ್ಲುಗುಡ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಗಂಗಮ್ಮ, ಪಿಡಿಒ ಗುರುವ ಎಸ್. ತಾ.ಪಂ. ವ್ಯವಸ್ಥಾಪಕ ಭುವನೇಂದ್ರ ಸುಬ್ರಹ್ಮಣ್ಯ ಆರ್.ಎಫ್.ಒ. ರಾಘವೇಂದ್ರ, ಪಂಜ ಆರ್.ಎಫ್.ಒ. ಮಂಜುನಾಥ, ಕಡಬ ಎಸೈ ಹರೀಶ್, ಸುಬ್ರಹ್ಮಣ್ಯ ಎಸೈ ಮಂಜುನಾಥ, ಎಸೈ ರಾಜೇಶ್ ಸೇರಿದಂತೆ ವಿವಿಧ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಇಲಾಖೆಗಳ ಅಧಿಕಾರಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ಸಾರ್ವಜನಿಕರು ಸ್ಥಳದಲ್ಲಿದ್ದರು.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending