Connect with us

DAKSHINA KANNADA

ಕಡಬ : ಸುಬ್ರಹ್ಮಣ್ಯ- ಗುಂಡ್ಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರದ ಬಸ್ಸಿಗೆ ಕಾಡಾನೆ ದಾಳಿ, ಪ್ರಯಾಣಿಕರು ಅಪಾಯದಿಂದ ಪಾರು..!

Published

on

ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. 

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ,ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ಹಾವಾಳಿ ತೀವೃಗೊಂಡಿದ್ದು ಜನ ಭಯ ಭೀತರಾಗಿದ್ದಾರೆ.ಇದೀಗ ಈ ಭಾಗದಲ್ಲಿ ಸಂಚರಿಸುತ್ತಿರುವ ವಾಹನಗಳ ಮೇಲೂ ಕಾಡಾನೆ ದಾಳಿ ಮಾಡಲು ತೊಡಗಿದ್ದು ಆತಂಕ ಇನ್ನೂ ಹೆಚ್ಚಾಗಿದೆ.

ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಇಲ್ಲಿನ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿತ್ತು.

ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆ ಕಂಡು ಅನಾಹುತ ತಪ್ಪಿಸಲು ಪ್ರಯತ್ನಿಸಿದ್ದಾರೆ.

ಆದರೂ ಒಂಟಿ ಸಲಗ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ ಎನ್ನಲಾಗಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ ಇದೀಗ ಈ ಭಾಗದಲ್ಲಿ ರಾತ್ತಿ ಹೊತ್ತು ಸಂಚರಿಸುವ ವಾಹನಗಳು ಜಾಗೃತೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending