Connect with us

DAKSHINA KANNADA

ಕಡಬ : ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾ*ವು

Published

on

ಕಡಬ : ಎರಡು ತಿಂಗಳ ಬಾಣಂತಿ ಸಾ*ವನ್ನಪ್ಪಿರುವ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ದಯಾನಂದ ಗೌಡ ಎಂಬವರ ಪತ್ನಿ ಪುಷ್ಪಾವತಿ(34) ಮೃ*ತ ಮಹಿಳೆ. ಪುಷ್ಪಾವತಿ ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ತಾಯಿ ಮಗು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಕೆಲವು ದಿನಗಳ ಹಿಂದೆ ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು ಎನ್ನಲಾಗಿದೆ.  ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ(ಜ.10)ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ : ಮನೆಯ ಈ ದಿಕ್ಕಿಗೆ ಮಲಗಿದ್ರೆ ಸಾಕು ಥಟ್ ಅಂತಾ ಗಾಢ ನಿದ್ರೆ ಬರುತ್ತೆ..!

ಪುಷ್ಪಾವತಿ, ಪತಿ, ಎರಡು ತಿಂಗಳ ಹೆಣ್ಣು ಮಗು ಸಹಿತ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Ancient Mangaluru

ಕಾಸರಗೋಡು: ಗಲ್ಫ್‌ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು

Published

on

ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆಯಲ್ಲಿ ಶನಿವಾರ ಸಂಜೆ ನಡೆದಿದೆ.

 

ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಕಂದಮ್ಮನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎನ್ನಲಾಗಿದೆ.

Continue Reading

DAKSHINA KANNADA

ಪಿಲಿಕುಳ ಕಂಬಳ ವಿಚಾರಣೆ ಜನವರಿ 21 ಕ್ಕೆ ಮುಂದೂಡಿಕೆ

Published

on

ಮಂಗಳೂರು : ಪಿಲಿಕುಳ ಜೈವಿಕ ಪಾರ್ಕ್‌ ಸಮೀಪ ಕಂಬಳಕ್ಕೆ ಅವಕಾಶ ನೀಡಬಾರದು ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹೊರಗೂ ಕಂಬಳ ನಿಷೇಧ ಮಾಡಬೇಕು ಎಂದು ಪ್ರಾಣಿ ದಯಾ ಸಂಘಟನೆ ಪೇಟಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಜನವರಿ 21 ಕ್ಕೆ ಮುಂದೂಡಿತು.

ಶುಕ್ರವಾರ ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಮೂರ್ತಿ  ಎನ್.ವಿ.ಅಂಜಾರಿಯಾ ಮತ್ತು ನ್ಯಾ| ಎಂ.ಐ. ಅರುಣ್ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಬಂದ ಸಂದರ್ಭದಲ್ಲಿ ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ಅಡ್ವೋಕೇಟ್ ಜನರಲ್ ಅವರು ಇಂದು ಲಭ್ಯರಿಲ್ಲ. ಹಾಗಾಗಿ ವಿಚಾರಣೆಯನ್ನು ಮುಂದೂಡುವಂತೆ ನ್ಯಾಯಾಲಯವನ್ನು ಕೋರಿದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಜ.21 ಕ್ಕೆ ಮುಂದೂಡಿದೆ.

Continue Reading

DAKSHINA KANNADA

ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್

Published

on

ತಪಸ್ಯ ಫೌಂಡೇಷನ್ ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿದೆ 2025 ರ ಬೀಚ್ ಫೆಸ್ಟಿವಲ್ ಮಂಗಳೂರಿನ ತಣ್ಣೀರುಬಾವಿಯಲ್ಲಿ ಆಯೋಜಿಸಲಾಗಿದೆ. ಜನವರಿ 31 ರಿಂದ ಫೆಬ್ರವರಿ 2 ರ ತನಕ ಈ ಬೀಚ್ ಫೆಸ್ಟಿವಲ್ ನಡೆಯಲಿದ್ದು, ಹಲವಾರು ವಿಶೇಷ ಕಾರ್ಯಕ್ರಮಗಳು ನಡೆಯಲಿದೆ.

ಅದರಲ್ಲಿ ಪ್ರಮುಖವಾಗಿ ಕೃಷಿ ಮೇಳವು ಒಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಸಹಾಯ ಆಗುವಂತಹ ಮಾಹಿತಿಗಳು ಸಿಗಲಿದೆ. ಕಡಿಮೆ ಬಂಡವಾಳದಲ್ಲಿ ಹೆಚ್ಚು ಇಳುವರಿ ಗಳಿಕೆ ಹಾಗೂ ಬೆಳೆ ಅಭಿವೃದ್ದಿಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗುತ್ತದೆ. ಕೃಷಿ ಮಣ್ಣಿನ ಆರೋಗ್ಯ ನಿರ್ವಹಣೆ, ನೀರಿನ ನಿರ್ವಹಣೆ, ಕೃಷಿ ಯಂತ್ರದ ಮಾಹಿತಿ, ಪಶು ಸಂಗೋಪನೆ ಮತ್ತು ಕೋಳಿ ಸಾಕಣಿಕೆಯ ಮಾಹಿತಿ, ಕೃಷಿ ವ್ಯಾಪಾರ ಮತ್ತು ಮಾರುಕಟ್ಟೆ, ಅರಣ್ಯ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಆರ್ಥಿಕ ನಿರ್ವಹಣೆ ಮತ್ತು ಸರ್ಕಾರದ ಯೋಜನೆಗಳು, ಜೇನು ಸಾಕಾಣಿಕೆ, ಅಣಬೆ ಕೃಷಿ, ಮೀನುಗಾರಿಕೆ ಮತ್ತು ಜಲಕೃಷಿ ಹಾಗೂ ಕೃಷಿಯಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯ ಬಗ್ಗೆ ಮಾಹಿತಿ ಸಿಗಲಿದೆ.

ಬೀಚ್ ಉತ್ಸವದಲ್ಲಿ ನಡೆಯಲಿರುವ ಅತಿ ದೊಡ್ಡ ಕೃಷಿಮೇಳದಲ್ಲಿ ಎಲ್ಲರೂ ಭಾಗವಹಿಸುವಂತೆ ತಪಸ್ಯ ಫೌಂಡೇಷನ್ ಹಾಗೂ ಜಿಲ್ಲಾಡಳಿತ ಮನವಿ ಮಾಡಿದೆ.

Continue Reading

LATEST NEWS

Trending

Exit mobile version