Connect with us

DAKSHINA KANNADA

Kadaba: ಪ್ರೇಮ ವೈಫಲ್ಯಕ್ಕೆ ಆ್ಯಸಿಡ್ ದಾಳಿ- ಗಂಭೀರಗೊಂಡ ಮೂವರು ಐಸಿಯುವಿನಲ್ಲಿ ಚಿಕಿತ್ಸೆ

Published

on

ಕಡಬ: ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಸಿಡ್ ದಾಳಿಗೆ ತುತ್ತಾಗಿರೋ ಮೂವರು ವಿದ್ಯಾರ್ಥಿನಿಯರಿಗೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಜನಪ್ರತಿನಿಧಿಗಳು ವಿದ್ಯಾರ್ಥಿನಿಯರಿಗೆ ಚಿಕಿತ್ಸೆಗೆ ಪ್ರಥಮ ಚಿಕಿತ್ಸೆ ನೀಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತಂದಿದ್ದಾರೆ. ಆರೋಪಿ ಆಬಿನ್‌ ಈಗಾಗಲೇ ಪೊಲೀಸರು ಬಂಧಿಸಿದ್ದು ಪ್ರೇಮ ನಿರಾಕರಣೆಯೇ ಕೃತ್ಯಕ್ಕೆ ಕಾರಣ ಎಂದು ಬಾಯ್ಬಿಟ್ಟಿದ್ದಾನೆ. ಅಸಿಡ್ ದಾಳಿಯಿಂದ ಅಲಿನಾ ಸಿಬಿಳಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಮುಖ ಹಾಗೂ ಕೈ ಹಾಗೂ ಬೆನ್ನಿನ ಮೇಲೆ ಅಸೀಡ್ ಬಿದ್ದಿರುವ ಕಾರಣ ಅಲಿನಾ ಸಿಬಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಮೃತಾ ಹಾಗೂ ಅರ್ಚನಾ ರಿಗೂ ಮುಖ ಹಾಗೂ ಕೈ ಮೆಲೆ ಅಸಿಡ್ ಬಿದ್ದು ಗಾಯಗಳಾಗಿದೆ.

ಘಟನೆಯಿಂದ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳೂ ಕೂಡಾ ಭಯಭೀತರಾಗಿದ್ದು, ಸಹಪಾಠಿಗಳ ಪರಿಸ್ಥಿತಿಯ ಬಗ್ಗೆಯೂ ಆತಂಕಗೊಂಡಿದ್ದಾರೆ. ಪರೀಕ್ಷೆ ನಡೆಯುತ್ತಿರುವಾಗಲೇ ಹೊರಗಡೆ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡಗಳು ಪರಿಶೀಲನೆ ನಡೆಸಿದ ಕಾರಣ ಸಹಜವಾಗಿಯೇ ಡಿಸ್ಟರ್ಬ್ ಆಗಿದ್ದರು. ಹೀಗಾಗಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸವನ್ನು ಪೊಲೀಸರು ಹಾಗೂ ಶಿಕ್ಷಣಾಧಿಕಾರಿಗಳು ಮಾಡಿದ್ದಾರೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್‌ ಹೇಳಿದ್ದಾರೆ.


ಶಿಕ್ಷಣಾಧಿಕಾರಿ ಜಯಣ್ಣ ಮಾತನಾಡಿ, ಪರೀಕ್ಷೆ ನಡೆಯುತ್ತಿರುವ ವೇಳೆಯಲ್ಲೇ ಇಂತಹ ಧುರ್ಘಟನೆ ನಡೆದಿರೋ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಇನ್ನು ತೀವೃ ಸುಟ್ಟಗಾಯಗಳು ಉಂಟು ಮಾಡುವ ಕಲೆಗಳಿಂದ ಅವರ ಮುಂದಿನ ಭವಿಷ್ಯ ಕೂಡಾ ಹಾಳಾಗುವ ಆತಂಕ ಎದುರಾಗಿದೆ. ಇಷ್ಟೇ ಅಲ್ಲದೆ ವಿದ್ಯಾರ್ಥಿನಿಯರಿಗೆ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಕಾರಣ ಆಸ್ಪತ್ರೆಯ ಬಿಲ್ ಪಾವತಿಯ ಸವಾಲು ಕೂಡಾ ಎದುರಾಗಿದೆ. ಹೀಗಾಗಿ ಸರ್ಕಾರ ಈ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಹಾಗೂ ಅವರ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದೆ.

DAKSHINA KANNADA

ಸಿಡಿಲ ಬಡಿತಕ್ಕೆ ನವವಿವಾಹಿತ ದುರ್ಮರ*ಣ..!10 ದಿನಗಳ ಹಿಂದೆಯಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ವಿಧಿಯಾಟಕ್ಕೆ ಬ*ಲಿ!!

Published

on

ಕಡಬ:  ಹದಿನೈದು ದಿನಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಮೇ.3ರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಇಲ್ಲಿನ ಪರ್ವತಮುಖಿ ನಿವಾಸಿ ಸೋಮಸುಂದರ್(34 ವ)ಮೃತಪಟ್ಟವರು.

death

ಸುಬ್ರಹ್ಮಣ್ಯದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಡಿತ್ತು. ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ವೇಳೆ ಸೋಮಸುಂದರ್‌ರವರಿಗೆ ಸಿಡಿಲು ಬಡೆದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಮುಂಧೆ ಓದಿ..; ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

10 ದಿನಗಳ ಹಿಂದೆಯಷ್ಟೆ ಏ.18ರಂದು ಮೋಹಿನಿ(ಪವಿತ್ರ) ಎಂಬವರ ಜೊತೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯ ಸಭಾಭವನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ವಿಧಿಯಾಟಕ್ಕೆ ಸೋಮಸುಂದರ್ ಬಲಿಯಾಗಿದ್ದಾರೆ. ಹೊಸೋಳಿಕೆ ಪರ್ವತಮುಖಿ ದಿ.ಸಾಂತಪ್ಪ ಗೌಡರ ಪುತ್ರ ಸೋಮಸುಂದರ್ ಪರ್ವತಮುಖಿ ಬಳಿ ಕಾರ್ ವಾಷಿಂಗ್ ಉದ್ಯಮವನ್ನು ನಡೆಸುತ್ತಿದ್ದರು. ಮದುವೆ ಸಂಭ್ರಮ ಮಾಸುವ ಮುನ್ನವೇ ಮನೆಯಲ್ಲಿ ಸಾವಿನ ಛಾಯೆ ಮೂಡಿದೆ. ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

Published

on

ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.

ಶುಕ್ರವಾರ ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾ*ತ ನಡೆಸಿದ ಕಾರು ಚಾಲಕನೇ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕೊಡದೆ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ : ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

ಮೃ*ತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿದ್ದರು. ಶ್ರೀಕಾಂತ್ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

Published

on

ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5 ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ವಹಿಸಲಾಗಿದೆ.

ಬೆಂದೂರು ಸ್ಥಾವರದಿಂದ ನೀರು ಪೂರೈಕೆ :

ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್‌ಸ್ಟ್ರೀಟ್, ಬಾವುಟಗುಡ್ಡ, ಆಕಾಶವಾಣಿ, ಪದವು, ಗೋರಿಗುಡ್ಡ, ಸೂಟರ್‌ಪೇಟೆ, ಶಿವಬಾಗ್, ಕದ್ರಿ, ವಾಸ್‌ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ, ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್‌ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್‌ನಿಂದ ಕುಂಜತ್ತಬೈಲ್, ಮೊಗ್ರೊಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ, ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ – ಪಣಂಬೂರು ನೇರ ಲೈನ್‌ನಿಂದ ಕಂಕನಾಡಿ, ನಾಗುರಿ, ಪಂಪ್‌ವೆಲ್, ಬಳ್ಳೂರುಗುಡ್ಡೆ, ಪಡೀಲ್‌ಗೆ ನೀರು ಪೂರೈಕೆ ಮಾಡಲಾಗುವುದು.

ಪಣಂಬೂರು ಸ್ಥಾವರದಿಂದ ನೀರು ಪೂರೈಕೆ :

ಮೇ 6 ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್‌ಐಟಿಕೆ, ಮುಕ್ಕ, ಹೊಸಬೆಟ್ಟು, ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ, ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್‌ ಬ್ಯಾಂಕ್, ಗೂಡ್ಸ್‌ಶೆಡ್, ಬಂದರ್ ದಕ್ಕೆ,ಕಣ್ಣೂರು, ನಿಡ್ಡೆಲ್, ಶಿವನಗರ. ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್‌ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್‌ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್‌ಹೌಸ್, ಕೂಳೂರು ಪಂಪ್‌ಹೌಸ್, ಕಾಪಿಕ್ಕಾಡ್, ದಡ್ಡಲ್‌ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೋಲು ಮಾಡಿದಲ್ಲಿ ನೀರು ಕಡಿತ :

ಕಟ್ಟಡ ರಚನೆ ಮತ್ತಿತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್‌ಗಳ ಜೋಡಣೆ ಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ ಜೋಡಣೆ ಕಡಿತಗೊಳಿಸುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ :

ಸಂಪರ್ಕ ಸಂಖ್ಯೆ :

ಕುಡಿಯುವ ನೀರಿನ ಸಮಸ್ಯೆಯಾದರೆ ದೂ.ಸಂ: ಪಡೀಲ್ ರೇಚಕ ಸ್ಥಾವರ-0824-2220364 ಹಾಗೂ ಮನಪಾ ವಾಟ್ಸ್‌ಆ್ಯಪ್ ಸಂಖ್ಯೆ 9449007722/ಮನಪಾ ಕಂಟ್ರೋಲ್ ರೂಮ್- 0824-2220319/2220306ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Continue Reading

LATEST NEWS

Trending