Connect with us

    LATEST NEWS

    ಲೋಕಸಭಾ ಚುನಾವಣಾ ಅಖಾಡಕ್ಕಿಳಿದ ಕಾಡುಗಳ್ಳ ವೀರಪ್ಪನ್ ಪುತ್ರಿ! ಇಲ್ಲಿದೆ ಡಿಟೇಲ್ಸ್

    Published

    on

    ಕಾಡುಗಳ್ಳ, ದಂತಚೋರ, ದರೋಡೆಕೋರ ಎಂದೆಲ್ಲಾ ಕುಖ್ಯಾತಿ ಪಡೆದಿದ್ದ ವೀರಪ್ಪನ್ ನ ಪುತ್ರಿ ವಿದ್ಯಾ ರಾಣಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ವಿದ್ಯಾರಾಣಿ ಏಪ್ರಿಲ್ 19 ರ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) ಪಕ್ಷದ ಅಭ್ಯರ್ಥಿಯಾಗಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

    ವಿದ್ಯಾರಾಣಿ ಜುಲೈ 2020 ರಲ್ಲಿ ಬಿಜೆಪಿಗೆ ಸೇರಿದರು. ಅಲ್ಲದೇ, ಅದರ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡರು. ಆದರೆ ಇತ್ತೀಚೆಗೆ ಬಿಜೆಪಿ ಪಕ್ಷವನ್ನು ಎನ್‌ಟಿಕೆಗೆ ಸೇರಿದ್ದಾರೆ.

    ವೃತ್ತಿಯಲ್ಲಿ ವಕೀಲೆ :

    ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಲ್ಲಾ 40 ಅಭ್ಯರ್ಥಿಗಳನ್ನು ಪರಿಚಯಿಸುವ ಮೂಲಕ ಚೆನ್ನೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ “ವಿದ್ಯಾ ರಾಣಿ ಕೃಷ್ಣಗಿರಿಯಿಂದ ಎನ್‌ಟಿಕೆ ಅಭ್ಯರ್ಥಿಯಾಗಲಿದ್ದಾರೆ” ಎಂದು ಘೋಷಿಸಿದರು. ವೃತ್ತಿಯಲ್ಲಿ ವಕೀಲರಾದ ವಿದ್ಯಾ ರಾಣಿ ಅವರು ಕೃಷ್ಣಗಿರಿಯಲ್ಲಿ ಮಕ್ಕಳ ಶಾಲೆಯನ್ನು ನಡೆಸುತ್ತಿದ್ದಾರೆ ಮತ್ತು ಬೆಂಗಳೂರಿನಲ್ಲಿ ಐದು ವರ್ಷಗಳ ಕಾನೂನು ಕೋರ್ಸ್ ಅನ್ನು ಪಡೆದಿದ್ದು, ಬೆಂಗಳೂರಿನೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ.

    ‘ಆ ಸಂಭಾಷಣೆಯೇ ಕಾರಣ’

    ವಿದ್ಯಾರಾಣಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾಗ ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಗೋಪಿನಾಥಂನಲ್ಲಿರುವ ಅಜ್ಜನ ಮನೆಯಲ್ಲಿ ತಂದೆಯನ್ನು ಭೇಟಿಯಾಗಿದ್ದರು. ತಂದೆಯನ್ನ ಭೇಟಿಯಾಗಿದ್ದು ಅದೇ ಮೊದಲು ಮತ್ತು ಕೊನೆ. ನಾನು 30 ನಿಮಿಷಗಳ ಕಾಲ ಮಾತನಾಡಿದ್ದೇವೆ. ಆ ಸಂಭಾಷಣೆಯು ನನ್ನ ಮನಸ್ಸಿನಲ್ಲಿ ಈಗಲೂ ಹಾಗೇ ಇದೆ. ನನಗೆ ವೈದ್ಯೆಯಾಗಿ ಜನರಿಗೆ ಸೇವೆ ಸಲ್ಲಿಸುವಂತೆ ಕೇಳಿಕೊಂಡರು. ಇಂದು ನಾನು ಏನಾಗಿದ್ದೇನೋ, ಅದಕ್ಕೆ ಆ ಸಂಭಾಷಣೆಯೇ ಕಾರಣ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

    ಅಕ್ಟೋಬರ್ 18, 2004 ರಂದು ತಮಿಳುನಾಡು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಎನ್‌ಕೌಂಟರ್‌ನಲ್ಲಿ ವೀರಪ್ಪನ್ ಕೊಲ್ಲಲ್ಪಟ್ಟ. ಆನೆಗಳನ್ನು ಬೇಟೆಯಾಡುವುದು, ಶ್ರೀಗಂಧದ ಮರವನ್ನು ಕಳ್ಳಸಾಗಣೆ ಮಾಡುವುದು, ಕನ್ನಡ ಹಿರಿಯ ನಟ ರಾಜ್ ಕುಮಾರ್ ಮತ್ತು ಮಾಜಿ ಸಚಿವ ನಾಗಪ್ಪ ಅವರಂತಹ ಉನ್ನತ ವ್ಯಕ್ತಿಗಳನ್ನು ಅಪಹರಿಸುವ ಮೂಲಕ ಕುಖ್ಯಾತಿ ಗಳಿಸಿದ್ದ.

    ವಿದ್ಯಾ ರಾಣಿ ಅವರ ತಾಯಿ ಮುತ್ತುಲಕ್ಷ್ಮಿ ಶಾಸಕ ಟಿ.ವೇಲ್‌ಮುರುಗನ್ ನೇತೃತ್ವದ ‘ತಮಿಳಗ ವಝಿರಿಮೆ ಕಚ್ಚಿ’ ಪಕ್ಷದಲ್ಲಿದ್ದಾರೆ.
    ತಮಿಳುನಾಡು ಹಾಗೂ ಪುದುಚೇರಿಯ ಲೋಕಸಭೆ ಸ್ಥಾನಗಳಿಗೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending