ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಡೆದಿದೆ.
ಕಲಬುರ್ಗಿ : ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಡೆದಿದೆ.
ಘಟನೆಯಲ್ಲಿ ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಅಂಬಣ್ಣ ಬಸಗೊಂಡ (20), ಸುರೇಶ ಅಂಬಣ್ಣ ಬಸಗೊಂಡ (18) ಮೃತ ದುರ್ದೈವಿಗಳಾಗಿದ್ದಾರೆ.
ಬೆಳಗಿನ ಜಾವ 1ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದ್ದಾಗ ವಿದ್ಯುತ್ ತಂತಿ ಕಡಿದು ನೆಲಕ್ಕೆ ಬಿದ್ದಿದೆ.
ಮನೆಯ ಹೊರಗಡೆ ಸಂಗ್ರಹಿಸಿದ್ದ (ಹೊಟ್ಟು) ಜಾನುವಾರುಗಳ ಮೇವು ಮಳೆಯಲ್ಲಿ ನೆನೆಯುತ್ತದೆ ಎಂದು ತರ್ಪಾಲ್ ಮುಚ್ಚಲು ಹೋದಾಗ ವಿದ್ಯುತ್ ತಗುಲಿ ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ.
ಘಟನೆಯಲ್ಲಿ ಅಂಬಣ್ಣನಿಗೆ ಗಾಯಗಳಾಗಿದ್ದು, ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.