Connect with us

    LATEST NEWS

    ಕದ್ರಿ ಪಾರ್ಕ್‌ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್‌ನಿಂದ ಲಾಂಛನ ಬಿಡುಗಡೆ

    Published

    on

    ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಬಿಡುಗಡೆ ಗೊಳಿಸಿದರು.

    ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಮತ್ತು ಇದರ ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶವನ್ನು ಇಟ್ಟುಕೊಂಡು ಈ ಕಲಾ ಪರ್ಬವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಮೂರ್ತ – ಅಮೂರ್ತ, ಹಿರಿಯ – ಕಿರಿಯ ಎಂಬ ಯಾವುದೇ ಅಂತರ, ಬೇಧ ಇಲ್ಲದೇ ಎಲ್ಲಾ ಕಲಾವಿದರು ತಮ್ಮ ಕಲಾ ಪ್ರಕಾರಗಳನ್ನು ಕಲಾ ವೀಕ್ಷಕರಿಗೆ, ಕಲಾಭಿಮಾನಿಗಳಿಗೆ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸುವುದು ಪ್ರಮುಖವಾಗಿರುತ್ತದೆ. ಚಿತ್ರ ಕಲೆ, ಶಿಲ್ಪಕಲೆ ಮತ್ತು ನೃತ್ಯ ಪ್ರಕಾರಗಳ ವಿವಿಧ ರೂಪಗಳ ಅಭಿವ್ಯಕ್ತ ಹರಿವು, ಸೆಳವುಗಳ ಮೂಲಕ ಮೇಳದ ರೂಪದಲ್ಲಿ ಇಲ್ಲಿ ಆಗುತ್ತಿರುವುದು ಕಲಾ ಸಂಭ್ರಮ ಮತ್ತು ಕಲಾ ಜಂಗಮ.

    ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಇರುವುದು. ಕಲಾಕೃತಿಗಳನ್ನು ಮಿತ ದರದಲ್ಲಿ ಖರೀದಿಸುವವರಿಗೆ ಉತ್ತಮ ಅವಕಾಶವಿದು.

    ಲಾಂಛನದ ಅರ್ಥ :

    ಈ ಕಲಾಪರ್ಬದ ಲಾಂಛನವು ಒಂದು ಸಂದೇಶವನ್ನು ನೀಡುತ್ತಿದೆ. ಇಲ್ಲಿ ಒಂದು ಕ್ಯಾನ್ವಾಸ್ ನಲ್ಲಿ 3 ಬಣ್ಣಗಳ ಸಂಗಮ ( K ) ಇಲ್ಲಿ ಕ್ಯಾನ್ವಾಸ್ ಕಲಾಕೃತಿಯ ಪ್ರತೀಕವಾದರೂ ನಮ್ಮ ಸಮಾಜವೇ ಒಂದು ರೀತಿಯ ಕ್ಯಾನ್ವಾಸ್ ಎಂಬ ಚೌಕಟ್ಟು. ಈ ಬದುಕಿನ ಚೌಕಟ್ಟಿನ ಒಳಗೆ ಎಲ್ಲರದ್ದೂ ಒಂದು ರೀತಿಯ ಬಣ್ಣದ ಬದುಕು. ನಮ್ಮ ನಿತ್ಯ ದಿನಚರಿ, ಚಟುವಟಿಕೆಗಳಿಂದ ಸಮಾಜಕ್ಕೆ, ಪ್ರಕೃತಿಗೆ ಒಂದು ಕೊಡುಗೆಯನ್ನು ನೀಡಬೇಕಾದರೆ ನಮ್ಮ ಸೀಮಿತ ಚೌಕಟ್ಟಿನಿಂದ ವಾದ ಮತ್ತು ಪಾದಗಳನ್ನು ಹೊರಗಿಡಲೇ ಬೇಕು. ಇದರ ಪ್ರತಿ ರೂಪವಾಗಿ ಕ್ಯಾನ್ವಾಸ್ ನಿಂದ ಒಂದು ಕಡೆ ಕುಂಚ ( ವಾದ…ತತ್ವ, ಸಿದ್ದಾಂತ ) ಹೊರಗೆ ಬಂದಿರುತ್ತದೆ. ಇನ್ನೊಂದು ಕಡೆ ಹೆಜ್ಜೆ ( ಪಾದ…ನಡೆ, ನಡತೆ ) ಹೊರಗೆ ಬಂದಿರುತ್ತದೆ.

    ಅಂದರೆ ಕಲಾಕ್ಷೇತ್ರದಲ್ಲಿ ಆಗಲಿ, ಸಮಾಜದಲ್ಲಾಗಲಿ ನಾವು ನಮ್ಮದೇ ಸೀಮಿತ ಬಣ್ಣ, ಬದುಕು ಎಂಬ ಚೌಕಟ್ಟಿನಲ್ಲಿ ಕಂಡು ಕೊಂಡದ್ದಕ್ಕಿಂತ, ನಾವು ಚೌಕಟ್ಟು ಮೀರಿ ಹೊರ ಆಯಾಮವನ್ನು ತಲುಪಲು ಪ್ರಯತ್ನಿಸಿದರೆ ( ಖಾಸಗಿ ಬದುಕಿನಿಂದ ಸಾಮಾಜಿಕ ಬದುಕಿಗೆ ) ಉತ್ತಮವಾದ ಕಲಾಕೃತಿಯನ್ನು ಮತ್ತು ಸಮಾಜವನ್ನು ರೂಪಿಸಬಹುದು ಎಂಬುದು ಈ ಲಾಂಛನದ ಒಳಾರ್ಥ.

    ಅದೇ ರೀತಿ ಕರ ಪತ್ರದಲ್ಲಿ ಬಣ್ಣದ ಹುಡುಗಿಯೊಬ್ಬಳು ಸಂಭ್ರಮಿಸುತ್ತಿದ್ದಾಳೆ. ಆಕೆಯ ಮುಖ ಬಣ್ಣದ ಪಾಲೇಟ್ ಮತ್ತು ನೀರಿನ ಹೂಜಿ, ಕೈ, ಕಾಲುಗಳು ಕುಂಚ ( ಚಿತ್ರ ಕಲಾ ಮೇಳ ಆಗಿರುವುದರಿಂದ ) ಕೆಳಗಿನ ಪಾದದ ಕುಂಚಗಳಲ್ಲಿ ಹೆಜ್ಜೆ – ಗೆಜ್ಜೆ ( ಈ ಪರ್ಬದಲ್ಲಿ ನೃತ್ಯವೂ ಇರುವುದರಿಂದ ) ಉಟ್ಟ ಲಂಗವು ಶಿಲಾ ಹಾಸುಗಳ ಪ್ರತಿರೂಪ ( ಈ ಪರ್ಬದಲ್ಲಿ ಶಿಲ್ಪ ಕಲೆಯೂ ಇರುವುದರಿಂದ ) ಎದೆ ಭಾಗದಲ್ಲಿ ಕ್ಯಾಮೆರಾ ಲೆನ್ಸ್ ( ಈ ಪರ್ಬದಲ್ಲಿ ಛಾಯಾ ಚಿತ್ರ ಪ್ರದರ್ಶನವೂ ಇರುವುದರಿಂದ ) ಇದೆಲ್ಲರ ಪ್ರತೀಕವಾಗಿ ಈ ಚಿತ್ರವನ್ನು ರಚಿಸಲಾಗಿದೆ.

    ಬನ್ನಿ ಕಲಾ ಪರ್ಬ ನಿಮ್ಮದೇ…ಬಣ್ಣದ ಲೋಕದಲ್ಲಿ ಸಂಭ್ರಮಿಸೋಣ. ನಿಮ್ಮ ಬೆಂಬಲವೇ ಈ ಪರ್ಬದ ಯಶಸ್ಸು

    International news

    ರೋಹಿತ್ ಬಿಟ್ಟು, ಕೊಹ್ಲಿ ಆಟೋಗ್ರಾಫ್ ಪಡೆದಿದ್ದೇಕೆ ಆಸ್ಟ್ರೇಲಿಯಾ ಪ್ರಧಾನಿ ?

    Published

    on

    ಮಂಗಳೂರು/ಕ್ಯಾನ್ ಬೆರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರನ್ನು ಭೇಟಿ ಮಾಡಿತು. ಈ ವೇಳೆ ಆಸೀಸ್ ಪ್ರಧಾನಿ, ಕೊಹ್ಲಿ ಅವರ ಆಟೋಗ್ರಾಫ್ ಪಡೆದುಕೊಂಡಿದ್ದು ತುಂಬಾ ಸದ್ದು ಮಾಡಿತ್ತು.


    ಅಷ್ಟಕ್ಕೂ, ಆಂಥೋನಿ ಆಲ್ಬನೀಸ್ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಅವರನ್ನು ಬಿಟ್ಟು ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆದಿದ್ದೇಕೆ ಎಂಬುದನ್ನು ಸ್ವತಃ ಅವರೇ ರಿವಿಲ್ ಮಾಡಿದ್ದಾರೆ.

    ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು ! 

    ಈ ಬಗ್ಗೆ ಮಾತನಾಡಿರುವ ಆಲ್ಬನೀಸ್,’ನನ್ನ ಖಾಸಗಿ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅವರು ಕೊಹ್ಲಿಯ ಬಗ್ಗೆ ಎಷ್ಟು ಭಾವೋದ್ರಿಕೃತರಾಗಿದ್ದಾರೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ನಾನು ಕೊಹ್ಲಿಯನ್ನು ಭೇಟಿಯಾಗುತ್ತೇನೆ ಎಂದು ಹೇಳಿದಾಗ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಈಗಾಗೀ ಕೊಹ್ಲಿಯ ಆಟೋಗ್ರಾಫ್ ಕೊಡಿಸಲು ಅವರು ನನ್ನಲ್ಲಿ ಹೇಳಿದ್ದಾರೆ. ಎಂದು ತಿಳಿಸಿದರು.

    ಇನ್ನೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವು ಶುಕ್ರವಾರದಿಂದ ಶುರುವಾಗಲಿದೆ.

    Continue Reading

    LATEST NEWS

    ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಜೇನು ದಾಳಿ : 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    Published

    on

    ಉತ್ತಕನ್ನಡ : ಶಾಲಾ ಮೈದಾನದಲ್ಲಿ ಮಕ್ಕಳು ತಮ್ಮ ಪಾಡಿಗೆ ತಾವು ಆಟವಾಡುತ್ತಿದ್ದರು. ಈ ವೇಳೆ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಇದರಿಂದ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಡಾನ್ ಬಾಸ್ಕೋ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ.

    ಶಾಲಾ ಮೈದಾನದಲ್ಲಿ ಆಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದೆ. ಸುಮಾರು 23ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಒಂದು ಘಟನೆ ನಡೆದಿದೆ. ಶಿರಸಿಯ ಡಾನ್ ಬಾಸ್ಕೋ ಶಾಲಾ ಮೈದಾನದಲ್ಲಿ ಈ ಒಂದು ಘಟನೆ ನಡೆದಿದೆ. ಕೂಡಲೇ ಶಿರಸಿ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು.

    Continue Reading

    LATEST NEWS

    ಗೂಗಲ್ ಮ್ಯಾಪ್ ನಂಬಿ ಅವಾಂತರ ; ಕಾಲುವೆಗೆ ಬಿ*ದ್ದ ಕಾರು !!

    Published

    on

    ಮಂಗಳೂರು/ಬರೇಲಿ: ಜಿಪಿಎಸ್ ಮ್ಯಾಪ್ ಮೂಲಕ ಸಾಗಿದ ಕಾರು ಕಾಲುವೆಗೆ ಬಿ*ದ್ದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಆದರೆ ಟಾಟಾ ಕಾರು ಈ ಪ್ರಯಾಣಿಕರ ಜೀವ ಉಳಿಸಿದ ಘಟನೆ ಬರೇಲಿಯ ಪಿಲಿಭಿತ್ ಹೆದ್ದಾರಿಯಲ್ಲಿ ನಡೆದಿದೆ.

    ಎಲ್ಲೇ ಹೋಗಬೇಕಿದ್ದರೂ ದಾರಿಯಲ್ಲಿ ಸಿಕ್ಕವರನ್ನು ಕೇಳುವ ಪ್ರಶ್ನೆ ಇಲ್ಲ. ಗೂಗಲ್ ಮ್ಯಾಪ್ ಹಾಕಿದರೆ ಸಾಕು. ಹತ್ತಿರದ ಮಾರ್ಗ, ಕ್ರಮಿಸಬೇಕಾದ ದೂರ, ಸಮಯ ಎಲ್ಲವನ್ನು ಹೇಳುತ್ತೆ. ಆದರೆ ತಂತ್ರಜ್ಞಾನ ಬಳಕೆ ಹೆಚ್ಚಾಗುತ್ತಿದ್ದಂತೆ ಜೀವನ ಸುಲಭವಾಗಬೇಕಿತ್ತು. ಆದರ ಬದಲಾಗಿ ಅ*ಪಾಯವೇ ಹೆಚ್ಚಾಗುತ್ತಿದೆ. ಕಾರಣ ಇದೇ ಜಿಪಿಎಸ್ ಮಾರ್ಗ ನಂಬಿ ತೆರಳುತ್ತಿರುವ ಪ್ರಯಾಣಿಕರು ಅಪಘಾತಕ್ಕೀಡಾಗುತ್ತಿರುವ ಘಟನೆಯೂ ಹೆಚ್ಚಾಗುತ್ತಿದೆ. 10 ದಿನಗಳ ಹಿಂದೆ ಮದುವೆ ಹೊರಟ ಕಾರು ಸೇತುವೆ ಮೇಲಿಂದ ಬಿದ್ದ ಮೂವರು ಪ್ರಾ*ಣಕ್ಕೆ ಕುತ್ತು ತಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರ್ಘಟನೆ ಸಂಭವಿಸಿದೆ.

    ಟಾಟಾ ಟಿಗೋರ್ ಕಾರಿನಲ್ಲಿ ಮೂವರು ಪ್ರಯಾಣ ಆರಂಭಿಸಿದ್ದಾರೆ. ದಾರಿ ಗೊತ್ತಿಲ್ಲದ ಕಾರಣ ಜಿಪಿಎಸ್ ಮ್ಯಾಪ್ ಆನ್ ಮಾಡಿ ವಿಳಾಸ ಹಾಕಿದ್ದಾರೆ. ಬಳಿಕ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಸಾಗಿದ್ದಾರೆ. ಆದರೆ ಬರ್ಕಾಪುರ ಗ್ರಾಮದ ಬಳಿ ಬರುತ್ತಿದ್ದಂತೆ ರಸ್ತೆ ಕಾಮಗಾರಿಗಳು ಎದುರಾಗಿದೆ. ಹೀಗಾಗಿ ರಸ್ತೆ ಸಂಚಾರ ಬದಲಿಸಲಾಗಿತ್ತು. ಆದರೆ ಗೂಗಲ್ ಮ್ಯಾಪ್ ಮಾತ್ರ ನೇರವಾಗಿ ಸಾಗಲು ಸೂಚಿಸಿದ ಕಾರಣ ಅದೇ ದಾರಿಯಲ್ಲಿ ಸಾಗಿದ ಕೆಲವೇ ಕ್ಷಣದಲ್ಲಿ ಕಾಲಾಪುರ ಕಾಲುವೆಗೆ ಕಾರು ಉರುಳಿ ಬಿದ್ದಿದೆ. ವೇಗವಾಗಿ ಸಾಗುತ್ತಿದ್ದ ಕಾರಣ ಅ*ಪಘಾತದ ಪ್ರಮಾಣ ಹೆಚ್ಚಾಗಿದೆ. ಟಾಟಾ ಮೋಟಾರ್ಸ‌ನ ಗರಿಷ್ಠ ಸುರಕ್ಷತೆಯ ಟಾಟಾ ಟಿಗೋರ್ ಸೆಡಾನ್ ಕಾರಾಗಿದ್ದ ಕಾರಣ ಪ್ರಯಾಣಿಕರ ಬದುಕುಳಿದಿದ್ದಾರೆ. ಸಣ್ಣ ಪುಟ್ಟ ಗಾ*ಯಗಳಾಗಿದ್ದರೂ ಮೂವರು ಪ್ರಯಾಣಿಕರ ಜೀ*ವಕ್ಕೆ ಯಾವುದೇ ಅಪಾಯವಾಗಿಲ್ಲ.

     

    ಇದನ್ನೂ ಓದಿ : ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ

     

    ಅ*ಪಘಾತ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಮೂವರುು ಪ್ರಯಾಣಿಕರನ್ನು ಕಾರಿನಿಂದ ಹೊರತೆಗೆದಿದ್ದಾರೆ. ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಗಂ*ಭೀರ ಗಾ*ಯಗಳಿಲ್ಲದ ಕಾರಣ ಮೂವರು ಪ್ರಯಾಣಿಕರು ತಪಾಸಣೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತ ಕಾರನ್ನು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತಲಾಗಿದೆ. ಗೂಗಲ್ ಮ್ಯಾಪ್ ನೀಡಿದ ತಪ್ಪು ಸೂಚನೆಯಿಂದ ಕಾರು ಕಾಲುವೆಗೆ ಮ*ಗುಚಿ ಬಿ*ದ್ದಿದೆ ಎಂದು ಪ್ರಯಾಣಿಕರು ಹೇಳಿದ್ದಾರೆ.

    Continue Reading

    LATEST NEWS

    Trending