Connect with us

DAKSHINA KANNADA

ಮುಂದಿನ ನವೆಂಬರ್‌ನಲ್ಲಿ ಕಲ್ಲಡ್ಕ ಫ್ಲೈಓವರ್‌ ಪೂರ್ಣ: ಕೆಪಿಟಿ-ನಂತೂರ್‌ನಲ್ಲಿ VOP

Published

on

ಮಂಗಳೂರು: ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಂಸದರಿಗೆ ಭರವಸೆ ನೀಡಿದ್ದಾರೆ.


ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತೀವ್ರ ಟ್ರಾಫಿಕ್ ಸಮಸ್ಯೆ ಇರುವ ಎದುರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕೆಪಿಟಿ ಜಂಕ್ಷನ್ ಹಾಗೂ ನಂತೂರು ಜಂಕ್ಷನ್ ರಾಷ್ಟೀಯ ಹೆದ್ದಾರಿ 66ರಲ್ಲಿ ಮೇಲ್ಸೇತುವೆ (ವೆಹಿಕಲ್ ಓವರ್‌ಪಾಸ್-ವಿಒಪಿ) ನಿರ್ಮಾಣವಾಗಲಿದ್ದು,

ಶೀಘ್ರ ಯೋಜನೆ ಕಾರ್ಯಾ ನುಷ್ಠಾನಕ್ಕೆ ಬರಲಿದೆ. ಕೆಪಿಟಿಯಲ್ಲಿ 25 ಕೋಟಿ ರೂ.ವೆಚ್ಚದಲ್ಲಿ ವಿಒಪಿ ನಿರ್ಮಾಣಗೊಳ್ಳಲಿದ್ದು, ಟೆಂಡರ್ ಪ್ರಕ್ರಿಯೆ ಆಗಿದೆ. ಮಳೆಗಾಲದ ಬಳಿಕ ಕಾಮಗಾರಿ ಪ್ರಾರಂಭ. ರಾಷ್ಟ್ರೀಯ ಹೆದ್ದಾರಿ ಕೆಳಗಡೆ ಸಾಗಲಿದ್ದು ಸರ್ಕೀಟ್ ಹೌಸ್‌ನಿಂದ ವಿಮಾನ ನಿಲ್ದಾಣ ರಸ್ತೆಗೆ ವಿಒಪಿ ನಿರ್ಮಾಣಗೊಳ್ಳಲಿದೆ. ನಂತೂರಿನಲ್ಲಿ 22 ಕೋಟಿ ರೂ.ವೆಚ್ಚದಲ್ಲಿ ವಿಒಪಿ ನಿರ್ಮಾಣ ಯೋಜನೆ ಸಿದ್ಧಗೊಂಡಿದ್ದು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.
ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಪ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಹಲವಾರು ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂ.ಗಳನ್ನು ಒದಗಿಸಲಾಗಿದೆ,

ಬರುವ ಸೆಪ್ಟಂಬರ್ 2ರಂದು ಅಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಇನ್ನೂ ನೆರವೇರಿಸಬೇಕಾಗಿರುವ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲು ಪಟ್ಟಿಯೊಂದನ್ನು ಸಿದ್ದಪಡಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಬಳ್ಪ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಕಲ್ಲಡ್ಕ ಫ್ಲೈ ಓವರ್ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದಾಗ, ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಂಸದರಿಗೆ ಭರವಸೆ ನೀಡಿದ್ದಾರೆ.
ಸಂಸದರ ಆದರ್ಶ ಗ್ರಾಮದಲ್ಲಿ ದೇಶದ ಯಾವುದೇ ಗ್ರಾಮದಲ್ಲೂ 60 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿಲ್ಲ, ಜಿಲ್ಲೆಯ ಬಳ್ಪ ಗ್ರಾಮದಲ್ಲಿ ಮಾತ್ರ ಇಷ್ಟು ಮೊತ್ತದ ಹಣವನ್ನು ಖರ್ಚು ಮಾಡಲಾಗುತ್ತಿದೆ,

ಅಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಸೆಪ್ಟಂಬರ್ 2ರಂದು ಲೋಕಾರ್ಪಣೆ ಮಾಡಲಾಗುವುದು ಹಾಗೂ ಬಾಕಿ ಉಳಿದ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಲು ಪಟ್ಟಿ ಸಿದ್ದಪಡಿಸುವಂತೆ ತಿಳಿಸಿದರು.
ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 47.50 ಲಕ್ಷ ರೂ.ಗಳು ಬಿಡುಗಡೆಯಾಗಿವೆ, 10 ಎಕರೆ ಜಾಗಕ್ಕೆ ತಂತಿ ಮೇಲೆ ಅಳವಡಿಸಲಾಗುತ್ತಿದ್ದು, ಈಗಾಗಲೇ ಎರಡು ಕೊಳವೆ ಬಾವಿಗಳನ್ನು ಕೊರೆಸಲಾಗಿದೆ.

ಅವುಗಳಲ್ಲಿ ನೀರು ಲಭಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸಭೆಗೆ ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಬಾಕಿ ಉಳಿದಿದ್ದ ಕಾಮಗಾರಿಗಳು ಮಳೆಯಿಂದಾಗಿ ತಡೆಹಿಡಿಯಲಾಗಿದ್ದು, ಮುಂದಿನ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಕುರಿತಂತೆ, ಮುಂಬರುವ ಸೆಪ್ಟೆಂಬರ್ 15ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ನಂತರ ಪಾರ್ಕ್ ಸ್ಥಾಪನೆಯ ಪ್ರಕ್ರಿಯೆಗಳು ಶೀಘ್ರವಾಗಲಿವೆ ಎಂದು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ವಿವರಿಸಿದರು.
ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ರಹಿತ ಮನೆಗಳಿಗೆ ಮಂಗಳೂರು ವಿಭಾಗದಲ್ಲಿ ಮೊದಲ ಹಂತದಲ್ಲಿ 25 ಮನೆಗಳಿಗೆ ಹಾಗೂ ಎರಡನೇ ಹಂತದಲ್ಲಿ 31 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಮೆಸ್ಕಾಂ ಅಧಿಕಾರಿ ಸಭೆಗೆ ತಿಳಿಸಿದರು.
ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ರೈತ ವಿದ್ಯಾನಿಧಿಯಡಿ ಜಿಲ್ಲೆಯ ರೈತರ ಮಕ್ಕಳಿಗೆ ಸೌಲಭ್ಯ ಒದಗಿಸಿಕೊಡಲು ಕೃಷಿ ಇಲಾಖೆ ಮತ್ತಷ್ಟು ಚುರುಕಾಗಬೇಕು, ಇಲಾಖೆಯ ಜಂಟಿ ನಿರ್ದೇಶಕರು ಜಿಲ್ಲೆಯಲ್ಲಿ ಹೆಚ್ಚು ಮಕ್ಕಳನ್ನು ವಿದ್ಯಾ ನಿಧಿ ಯೋಜನೆಯಡಿ ನೋಂದಾಯಿಸಲಾಗಲು ಅಗತ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಇದೂವರೆಗೆ 35,000 ವಿದ್ಯಾರ್ಥಿಗಳು ವಿದ್ಯಾನಿಧಿ ಯೋಜನೆಯಡಿ ನೋಂದಾಯಿತರಾಗಿದ್ದಾರೆ. ಒಂದೂವರೆ ಲಕ್ಷದಷ್ಟು ಮಕ್ಕಳನ್ನು ನೋಂದಾಯಿಸುವ ಗುರಿ ಹಾಕಿಕೊಳ್ಳಬೇಕೆಂದು ಜಿ.ಪಂ. ಸಿಇಓ ಡಾ. ಕುಮಾರ್ ಅವರು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೀತಾ ಅವರಿಗೆ ಸೂಚಿಸಿದರು.
ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಮೊದಲ ಹಂತದ ಕಾಮಗಾರಿಗಳನ್ನು ಸೆಪ್ಟೆಂಬರ್ 15ರೊಳಗೆ ಪೂರ್ಣಗೊಳಿಸಲೇಬೇಕೆಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ, ಅದರಂತೆ ಮಂಗಳೂರು ತಾಲೂಕು ಹೊರತು ಪಡಿಸಿದರೆ ಉಳಿದ ತಾಲೂಕುಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ, ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 15ರೊಳಗೆ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೆ ಸಂಬಂಧಿಸಿದ ಎಂಜಿನಿಯರ್ ಮತ್ತು ಕಂಟ್ರಾಕ್ಟರ್‍ಗಳನ್ನು ನೇರ ಹೊಣೆ ಮಾಡಲಾಗುವುದು ಹಾಗೂ ಕ್ರಮಕೈಗೊಳ್ಳಲಾಗುವುದು, ಈ ಬಗ್ಗೆ ಸಂಬಂಧಿಸಿದವರಿಗೆ ನೋಟಿಸ್ ಸಹ ನೀಡಲಾಗಿದೆ ಎಂದು ಜಿ.ಪಂ. ಸಿಇಓ ಡಾ. ಕುಮಾರ್ ಎಚ್ಚರಿಕೆ ನೀಡಿದರು.
ಮಹಾತ್ಮ ಗಾಂಧಿ ಗ್ರಾಮೀಣ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ 2022ರ ಜೂನ್ ಮಾಹೆಗೆ ನಿಗದಿ ಪಡಿಸಲಾಗಿದ್ದ ಗುರಿಯನ್ನು ಸಾಧಿಸಲಾಗಿದೆ, ಈ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ಕೆರೆ ಅಭಿವೃದ್ಧಿ ಪಡಿಸುವ ಹಾಗೂ ಶಾಲೆಯ ಕ್ರೀಡಾಂಗಣವನ್ನು ನಿರ್ಮಿಸುವ ಗುರಿ ಹೊಂದಲಾಗಿದೆ, ಕೆರೆಗಳ ಅಭಿವೃದ್ಧಿ ಹಾಗೂ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 5 ಕಿ.ಮೀ.ಗಳ ರಸ್ತೆ ಅಭಿವೃದ್ಧಿಪಡಿಸುವ ಕೆಲಸ ಆಗುತ್ತಿದೆ, ಶಾಲೆಗಳಲ್ಲಿ ಮಕ್ಕಳ ಶೌಚಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 174 ಶಾಲೆಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ, ಅಂಗನವಾಡಿಗಳಲ್ಲಿ ಕಾಂಪೌಂಡ್ ನಿರ್ಮಾಣ ಕಾರ್ಯ ಆರಂಭಗೊಂಡಿದೆ ಎಂದು ಡಾ. ಕುಮಾರ್ ತಿಳಿಸಿದರು.
ನಮ್ಮ ಕ್ಲಿನಿಕ್ ಯೋಜನೆಯಡಿ ಜಿಲ್ಲೆಗೆ 14 ಕ್ಲಿನಿಕ್‍ಗಳು ದೊರೆತಿದ್ದು, ಮಂಗಳೂರು ನಗರದಲ್ಲಿ 7 ಹಾಗೂ ಉಳಿದ ಏಳನ್ನು ವಿವಿಧ ತಾಲೂಕುಗಳಲ್ಲಿ ಸ್ಥಾಪಿಸಲಾಗುವುದು, ಈ ಕ್ಲಿನಿಕ್ ಗಳಲ್ಲಿ ವೈದ್ಯರು, ನರ್ಸ್ ಹಾಗೂ ಅಗತ್ಯ ಸಿಬ್ಬಂದಿಗಳಿರಲಿದ್ದಾರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇರದ ಕಡೆಗೆ ಈ ಕ್ಲಿನಿಕ್‍ಗಳನ್ನು ಆರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಈ ವೇಳೆ ಪ್ರತಿಕ್ರಿಯಿಸಿದ ಸಿಇಓ ಡಾ. ಕುಮಾರ್ ಅವುಗಳನ್ನು ಕಟ್ಟಡ ನಿರ್ಮಾಣ ಕಾರ್ಮಿಕರು ಹೆಚ್ಚಿನ ಪ್ರದೇಶಗಳಲ್ಲಿ ಆರಂಭಿಸುವಂತೆ ಸಲಹೆ ನೀಡಿದರು.
ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಇದುವರೆಗೂ ಕೈಗೊಂಡ ಕಾಮಗಾರಿಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಪಟ್ಟಿಗಳನ್ನು ನೀಡುವಂತೆ ಸಂಸದರು ತಿಳಿಸಿದರು. ಈ ಕಾಮಗಾರಿಗಳನ್ನು ಪ್ರಧಾನ ಮಂತ್ರಿಗಳಿಂದ ಉದ್ಘಾಟಿಸಲು ಅನುಕೂಲವಾಗುವುದು ಹಾಗಾಗಿ ಕೂಡಲೇ ಪಟ್ಟಿ ಒದಗಿಸುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು.

DAKSHINA KANNADA

ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Published

on

ಮಂಗಳೂರು : ಬಿಗ್‌ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್‌ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ.  ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.

2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್​ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.

Continue Reading

DAKSHINA KANNADA

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ

Published

on

ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.

ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ,  ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’

ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.

ಭದ್ರತಾಕೋಶ ಉದ್ಘಾಟನೆ : 

ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.

ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.

ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.

ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”

ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

Trending