ಮಂಗಳೂರು: ಸಿನಿಮಾ ನಟರು, ರಾಜಕಾರಣಿಗಳು, ಜನಸಾಮಾನ್ಯರು, ಉದ್ಯಮಿಗಳು ಅಥವಾ ವಿವಿಐಪಿಗಳೇ ಇರಲಿ ಕಲ್ಲಡ್ಕಕ್ಕೆ ಬಂದರೆ ಈ ಹೋಟೆಲ್ ಭೇಟಿ ನೀಡದವರಿಲ್ಲ.
ಭೇಟಿ ನೀಡಿ ಮೊದಲು ಆರ್ಡರ್ ಮಾಡೋದೆ ಕೆಟಿ. ಆಮೇಲೆ ಉಳಿದೆಲ್ಲಾ ಈ ಚಹದ ಸ್ವಾದ ಅಂಥದ್ದು. ಇದೀಗ ಹಳೇ ಕಟ್ಟಡ ಇತಿಹಾಸದ ಪುಟ ಸೇರಲಿದ್ದು, ಹೊಸ ರೂಪದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಲಿದೆ.
ಕಲ್ಲಡ್ಕ ಕೆ.ಟಿ ಹೀಗಂದ್ರೆ ಚಹಾ ಪ್ರಿಯರ ಕಿವಿ ನೆಟ್ಟಗಾಗುತ್ತದೆ. ಅಷ್ಟರ ಮಟ್ಟಿಗೆ ಕಲ್ಲಡ್ಕ ಕೆಟಿ ಫೇಮಸ್ಸು. ಚಹಾ ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟು.
ಹೊಟ್ಟೆ ತುಂಬಾ ಬಿಸಿ ಬಿಸಿ ಯಾಗಿರೋ ರುಚಿಕರ ತಿಂಡಿ ತಿಂದ್ರೆ ಕೊನೆಗೆ ಸ್ಟ್ರಾಂಗ್ ಆಗಿರೋ ಚಹಾ ಕುಡಿಲೇಬೇಕು ಅನ್ಸುತ್ತೆ.
ಅದ್ರಲ್ಲಿ ಈ ಕಲ್ಲಡ್ಕ ಟೀ ಸ್ವಲ್ಪ ಸ್ಪೆಷಲ್. ಎಲ್ಲೆಲ್ಲಿಂದಲೋ ಈ ಕೆ.ಟಿ ಚಹಾ ಸವಿಯೋಕೆ ಬರ್ತಾರೆ ಅಂದ್ರೆ ಊಹೆ ಮಾಡಿ ಈ ಚಹಾ ಅದೆಂಥಾ ಮೋಡಿ ಮಾಡ್ರೋದು ಅಂತ.
ಮಂಗಳೂರು-ಬೆಂಗಳೂರು ರಾಷ್ಟ್ರಿಯ ಹೆದ್ದಾರಿ 75ರಲ್ಲಿ ಹಾಗೆ ಹಾದು ಕಲ್ಲಡ್ಕದ ಲಕ್ಷ್ಮೀ ನಿವಾಸ ಹೋಟೆಲ್ ಕಾಣಸಿಗುತ್ತೆ. ಇಲ್ಲೆ ಸ್ಪೆಷಲ್ ಟೀ ಕಲ್ಲಡ್ಕ ಟೀ ಸಿಗೋದು.
ಸುಮಾರು 70 ವರ್ಷಗಳಷ್ಟು ಹಳೆಯದಾದ ಈ ಹೊಟೇಲನ್ನು ಮೂರು ತಲೆಮಾರುಗಳಿಂದ ನಡೆಸಿಕೊಂಡು ಬರಲಾಗ್ತ ಇದೆ.
ಲಕ್ಷ್ಮೀ ನಾರಾಯಣ ಹೊಳ್ಳ ಈ ಹೋಟೆಲನ್ನು ಪ್ರಾರಂಭಿಸಿದರು. ಬೈಕ್ ರೈಡ್, ಲಾಂಗ್ ಡ್ರೈವ್‌ಗಾಗಿ ಈ ದಾರಿಯಲ್ಲಿ ತೆರಳುವವರು ಇಲ್ಲಿನ ಚಹಾ ಕುಡಿಯದೇ ಹೋಗುವ ಮಾತೇ ಇಲ್ಲ.
ಪುತ್ತೂರು ಮಾರ್ಗವಾಗಿ ಬೆಂಗಳೂರು ಸಾಗುವವರು ಕೂಡ ಹೆಚ್ಚಾಗಿ ಇಲ್ಲಿ ಕೇಟಿ ಕುಡಿದೇ ಮುಂದೆ ಸಾಗುತ್ತೀರಿ. ಅಷ್ಟರ ಮಟ್ಟಿಗೆ ನಮ್ಮ ಕಲ್ಲಡ್ಕ ಕೆಟಿ ಫೇಮಸ್ಸು. ಆ ದಾರಿಯಲ್ಲಿ ಯಾವತ್ತಾದರೂ ಓಡಾಡಿದರೆ ನೀವೂ ಸವಿಯಿರಿ ಕಲ್ಲಡ್ಕ ಚಾ.
ಆದ್ರೆ ಈಗ ಈ ಲಕ್ಷ್ಮೀ ನಿವಾಸ ಹೋಟೆಲ್ ಧರಶಾಹಿಯಾಗುತ್ತಿದೆ. ಬಂಟ್ವಾಳ ತಾಲೂಕಿನ ಹೆದ್ದಾರಿ ಬದಿಯ ಕಲ್ಲಡ್ಕದಲ್ಲಿ ಫ್ಲೈ ಓವರ್ ನಿರ್ಮಾಣ ಹಾಗೂ ರಸ್ತೆ ಅಗಲಗೊಳಿಸುವ ಕಾರ್ಯಕ್ಕೆ ಪೂರ್ವಭಾವಿಯಾಗಿ ಕಟ್ಟಡಗಳನ್ನು ಕೆಡವಲಾಗುತ್ತಿದೆ.
ರಸ್ತೆ ಅಭಿವೃದ್ಧಿ ಹಿನ್ನೆಲೆ ಈ ಹಳೆಯ ಹೋಟೆಲ್ ಧರಾಶಾಹಿಯಾದರೆ, ಈಗ ಇರುವ ಜಾಗದ ಹಿಂದೆಯೇ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಕೆಲ ಸಮಯದಲ್ಲೇ ಹೊಸ ವಿನ್ಯಾಸದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಲಿದೆ.
ಅದೇನೇ ಇರಲಿ 70 ವರ್ಷಗಳ ಹಿಂದಿನ ಟೇಸ್ಟೇ ಇಂದಿಗೂ ಇದೆ. ಮಂಗಳೂರಿಗೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕೂಡ ಕಲ್ಲಡ್ಕಕ್ಕೆ ಬಂದು ಕೆಟಿ ಸವಿದಿದ್ದರು. ನೀವು ಒಮ್ಮೆ ಕೇಟಿ ಕುಡ್ದು ಟೇಸ್ಟ್ ನೋಡಿ ಮಾರ್ರೇ
ವರದಿ ಮತ್ತು ಚಿತ್ರ: ನಿತಿನ್ ಅಮೀನ್ ಕಲ್ಲಡ್ಕ , ನಮ್ಮ ಕುಡ್ಲ ನ್ಯೂಸ್ ಮಂಗಳೂರು
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.