Connect with us

BANTWAL

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ-ಕಂಬನಿ ಮಿಡಿದ ಪತ್ರಕರ್ತರ ಸಂಘ

Published

on

ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ-ಕಂಬನಿ ಮಿಡಿದ ಪತ್ರಕರ್ತರ ಸಂಘ

ಬಂಟ್ವಾಳ :ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ಕಲ್ಲಡ್ಕ ಸಮೀಪ ಅಮ್ಟೂರಿನ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. 

ಅವರಿಗೆ 51 ವರ್ಷ ವಯಸ್ಸಾಗಿತ್ತು.ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನವಂಬರ್ 5ರಂದು ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು.

ಪತ್ನಿ, ತಾಯಿ, ಸಹೋದರರು, ಸಹೋದರಿಯನ್ನು ಅವರು ಅಗಲಿದ್ದಾರೆ. ಸುಮಾರು 25 ವರ್ಷಗಳಿಂದ ಅವರು ವಿವಿಧ ಪತ್ರಿಕೆಗಳ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ತೀರ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿಯಾಗಿದ್ದ ಪೂವಳ ಅವರು ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯ ಸಲ್ಲಿಸಿದ್ದರು.

ಮುಂಗಾರು ಪತ್ರಿಕೆ ಸಹಿತ ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು ಬಳಿಕ ಸುದೀರ್ಘ ಕಾಲ ಬಂಟ್ವಾಳದಿಂದ ಕನ್ನಡ ಜನಾಂತರಂಗ, ಕರಾವಳಿ ಅಲೆ ಪತ್ರಿಕೆಗಳ ವರದಿಗಾರರಾಗಿ ಕೆಲಸ ಮಾಡಿದ್ದರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದ ಅವರ ನಿಧನಕ್ಕೆ ಸಂಘ ಸಂತಾಪ ಸೂಚಿಸಿದೆ.

Click to comment

Leave a Reply

Your email address will not be published. Required fields are marked *

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

BANTWAL

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸದ ವಿದ್ಯಾರ್ಥಿನಿಗೆ ಪ್ರಶಸ್ತಿ

Published

on

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪೆರಾಜೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್  ಇದರ ಜಂಟಿ ಆಶ್ರಯದಲ್ಲಿ ಡಿ.1ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆದಿತ್ತು.


ಈ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ದೇವಿಕಾ ಕೆ ಭಾಗವಹಿಸಿ ಪ್ರೌಢ ಶಾಲಾ ವಿಭಾಗದ ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇವರನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Continue Reading

LATEST NEWS

Trending