Connect with us

    BELTHANGADY

    ಮಾಜಿ ಕಂಬಳ ಓಟಗಾರ ಜಯಶೆಟ್ಟಿ  ಕಿಂಜಾಲು ನಿಧನ

    Published

    on

    ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ  ಶೆಟ್ಟಿ  ಕಿಂಜಾಲು(65) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು.

    ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಕಂಬಳಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು ಕಂಬಳ ಕ್ಷೇತ್ರದ ಅದ್ವಿತೀಯ ಸಾಧನೆಗಾಗಿ ಹಲವಾರು ಪ್ರಶಸ್ತಿ, ಸಮ್ಮಾನ ಪಡೆದಿದ್ದರು. ಸುಮಾರು 70 ರ ದಶಕದ ಆರಂಭದಲ್ಲಿ ಕಕ್ಯಪದವು ಡೀಕಯ್ಯ ಪೂಜಾರಿ, ಪುಣ್ಕೆದಡಿ ಅಣ್ಣು ಭಂಡಾರಿ ಅವರ ಕೋಣಗಳನ್ನು ಓಡಿಸುತ್ತಿದ್ದ ಅವರು ಬಳಿಕ ಕಾಡಬೆಟ್ಟು ದಿ.ನಾರಾಯಣ ರೈಅವರ ಕೋಣಗಳನ್ನು ಹಗ್ಗ ಹಿರಿಯ ವಿಭಾಗದಲ್ಲಿ ಓಡಿಸುತ್ತಿದ್ದು, ಸುಮಾರು ಒಂದೂವರೆ ದಶಕಗಳ ಕಾಲ ನಿರಂತರ ಪದಕ ಪಡೆದು ನಂಬರ್ ಒನ್ ಸ್ಥಾನದಲ್ಲಿ ವಿರಾಜಿಸಿದ್ದರು. ಆದರೆ ಯಾವುದೇ ಸಂಭಾವನೆ ಪಡೆಯದೆ ಕಂಬಳದ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿತ್ತು. ಸ್ವಾಮಿ ನಿಷ್ಠ  ಓಟಗಾರ ಎಂಬ ಗೌರವ ಪಡೆದಿದ್ದರು. ಯುವ ಓಟಗಾರರಿಗೆ ಮಾರ್ಗದರ್ಶಕರಾಗಿದ್ದರು.
    ಅವರು 5ವರ್ಷ ಕಕ್ಯಬೀಡು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿದ್ದರು. ಕಕ್ಯಪದವು ಶ್ರೀ ಪಂಚದುರ್ಗಾ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿ ಸದಸ್ಯರಾಗಿ, ಉಳಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ ಬ್ರಹ್ಮ ಬದರ್ಕಳ ಗರಡಿ ಜೀರ್ಣೋದ್ಧಾರ ಸಮಿತಿ ಮತ್ತು ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುತ್ತಿರುವ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿಯ ಗೌರವ ಸಲಹೆಗಾರರಾಗಿದ್ದರು. ಸ್ಥಳೀಯವಾಗಿ ಕೊಡುಗೈ ದಾನಿಯಾಗಿದ್ದರು.
    ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ಕಂಬಳ ಕ್ಷೇತ್ರ ಕಂಬನಿ ಮಿಡಿದಿದೆ. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending