Connect with us

    DAKSHINA KANNADA

    ಕಣಚೂರು ಆಸ್ಪತ್ರೆಯ ಬಸ್‌-ಸಿಬ್ಬಂದಿ ಪೊಲೀಸ್‌ ವಶಕ್ಕೆ: ಬೆಡ್‌ ದಂಧೆಯ ವಾಸನೆ

    Published

    on

    ಮಂಗಳೂರು: ದೇರಳಟ್ಟೆಯ ಕಣಚೂರು ಆಸ್ಪತ್ರೆಯೊಂದರ ಬಸ್ಸಿನಲ್ಲಿ ಶೇಕಡಾ 50ರಷ್ಟು ಮಹಿಳೆಯರನ್ನು ಸಾಗಿಸಲೆತ್ನಿಸಿದ ಆರೋಪಕ್ಕೆ ಸಂಬಂಧಿಸಿ ಲಾಕ್​ಡೌನ್ ನಿಯಮ ಉಲ್ಲಂಘನೆಯಡಿ ಪ್ರಕರಣ ದಾಖಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಲಿಂಗಪ್ಪಯ್ಯ ಕಾಡು ಎಂಬಲ್ಲಿ ನಡೆದಿದೆ.


    ಮುಲ್ಕಿಯ ಲಿಂಗಪ್ಪಯ್ಯ ಕಾಡು ಎಂಬಲ್ಲಿ ಮಂಗಳೂರಿನ ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ಸೇರಿದ ಬಸ್ಸಿನಲ್ಲಿ ರಾತ್ರಿ ವೇಳೆ ಯಾವುದೇ ಸುರಕ್ಷಿತ ಅಂತರವಿಲ್ಲದೆ ಮಹಿಳೆಯರನ್ನು ಕುಳ್ಳಿರಿಸಿ ಸಂಚಾರಕ್ಕೆ ಯತ್ನಿಸುತ್ತಿದ್ದ ವೇಳೆ ಸ್ಥಳೀಯರು ತಡೆದು ದೂರು ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದರು.
    ಸ್ಥಳೀಯ ಮಹಿಳೆಯರನ್ನು ರಾತ್ರಿ ಹೊತ್ತು ಬಸ್ಸಿನಲ್ಲಿ ಯಾವುದೇ ಸುರಕ್ಷಿತ ಅಂತರವಿಲ್ಲದೆ ಸಾಗಿಸುತ್ತಿದ್ದನ್ನು ಗಮನಿಸಿದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ವಿಚಾರಿಸಿದ್ದು, ಆಸ್ಪತ್ರೆಯ ಮ್ಯಾನೇಜರ್ ನವಾಝ್ ಸೂಚನೆಯ ಮೇರೆಗೆ ಲಸಿಕೆಗಾಗಿ ಅವರನ್ನು ಕರೆದೊಯ್ಯುತ್ತಿರುವುದಾಗಿ ಬಸ್ಸಿನ ಚಾಲಕ ತಿಳಿಸಿದ್ದಾನೆ. ಆದರೆ ರಾತ್ರಿ ಹೊತ್ತು ಲಸಿಕೆ ನೀಡಲಾಗುತ್ತದೆಯೇ ಎಂದು ಸ್ಥಳೀಯರು ಪ್ರಶ್ನಿಸಿದಾಗ, ಬೆಳಗ್ಗೆ ನೀಡುತ್ತಾರೆ ಎಂದು ಆತ ಹೇಳಿದ್ದು, ಲಸಿಕೆ ನೀಡುವ ಬಗ್ಗೆ ಪತ್ರ ಇದೆಯೇ ಎಂದು ಸ್ಥಳೀಯರು ಪ್ರಶ್ನಿಸಿದಾಗ ಆತನ ಬಳಿ ಉತ್ತರವಿರಲಿಲ್ಲ, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    ಚಾಲಕ ಹಾಗೂ ಬಸ್ಸಿನಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅನುಮಾನಸ್ಪದವಾಗಿ ರಾತ್ರಿ ಹೊತ್ತು ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸಂಚಾರಕ್ಕೆ ಪ್ರಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಎನ್.ಶಶಿಕುಮಾರ್ ಅವರು ಹೇಳಿದರು.

     

    ಮೆಡಿಕಲ್‌ ಬೆಡ್‌ ದಂಧೆ
    ವಿಶ್ವವಿದ್ಯಾಲಯಗಳಿಗೆ ನೀಡುವ ಗ್ರೇಡ್‌ ಹಾಗೂ ನ್ಯಾಕ್‌ ಶ್ರೇಣಿ ಮೆಡಿಕಲ್‌ ಕಾಲೇಜುಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತದೆ. ಇದರಿಂದ ಆಯಾ ಕಾಲೇಜು ಮತ್ತು ಮೆಡಿಕಲ್‌ ಆಸ್ಪತ್ರೆಗಳ ದರ್ಜೆ ಹೆಚ್ಚಿದೆ ಎಂದು ತಿಳಿಯುತ್ತದೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹಾಗೂ ಮೆಡಿಕಲ್‌ ಕಾಲೇಜಿಗೆ ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚುತ್ತದೆ. ಇದೊಂದು ಮೆಡಿಕಲ್‌ ದಂಧೆ.
    ಈ ಕಾರಣದಿಂದ ಉನ್ನತ ಮಟ್ಟದ ಇಲಾಖಾಧಿಕಾರಿಗಳು ಪರಿಶೀಲನೆಗೆ ಬಂದ ವೇಳೆ ಬೆಡ್‌ ಭರ್ತಿ ಮಾಡುತ್ತಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಹಾಗೂ ಬೇರೆ ರಾಜ್ಯದವರನ್ನು ಇಂತಿಷ್ಟು ಹಣ ನೀಡಿ ಕೃತಕವಾಗಿ ಬೆಡ್‌ ಭರ್ತಿ ಮಾಡುತ್ತಾರೆಂಬ ಆರೋಪವಿದೆ.

     

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending