Wednesday, October 20, 2021

ನಟಿ ಕಂಗನಾ ರಣಾವತ್ ಗೆ ‘ವೈ ಪ್ಲಸ್’ ಭದ್ರತೆ ನೀಡಿದ ಕೇಂದ್ರ ಸರ್ಕಾರ..!

ನಟಿ ಕಂಗನಾ ರಣಾವತ್ ಗೆ ‘ವೈ ಪ್ಲಸ್’ ಭದ್ರತೆ ನೀಡಿದ ಕೇಂದ್ರ ಸರ್ಕಾರ ..!

ಮುಂಬೈ : ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈ ಭೇಟಿಗೆ ಕೇಂದ್ರ ಸರ್ಕಾರ ‘ವೈ ಪ್ಲಸ್’ ಶ್ರೇಣಿಯ ಭದ್ರತೆ ನೀಡಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶ ರಾಜ್ಯ ಸರ್ಕಾರ ಕಂಗನಾಗೆ ಭದ್ರತೆ ನೀಡುವುದಾಗಿ ಹೇಳಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ‘ವೈ ಪ್ಲಸ್’ ಶ್ರೇಣಿಯ ಭದ್ರತೆ ಒದಗಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ ರಣಾವತ್ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ತಿಳಿಸಿದ್ದಾರೆ.

“ಇದು ದೇಶ ಭಕ್ತರ ಧ್ವನಿಯನ್ನು ನಾಶಮಾಡಲು ಸಾಧ್ಯವಿಲ್ಲ ಎಂದು ಸಾಬೀತುಪಡಿಸಿದೆ.

ಅಮಿತ್ ಶಾ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರು ಬಯಸಿದರೆ, ಕೆಲವು ದಿನಗಳ ಬಳಿಕ ಮುಂಬೈಗೆ ಹೋಗಬೇಕೆಂದು ಹೇಳಬಹುದಿತ್ತು.

ಆದರೆ ಅವರು ಭಾರತದ ಮಗಳನ್ನು ಗೌರವಿಸಿದರು. ಹೆಮ್ಮೆ ಮತ್ತು ಸ್ವಾಭಿಮಾನವನ್ನು ರಕ್ಷಿಸಿದರು. ಜೈ ಹಿಂದ್” ಟ್ವೀಟ್ ಮಾಡಿದ್ದಾರೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈ ಭೇಟಿಗೆ ರಾಜ್ಯ ಸರ್ಕಾರ ಭದ್ರತೆ ನೀಡಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದರು.

“ಕಂಗನಾ ಹಿಮಾಚಲ ಪ್ರದೇಶದ ಮಗಳು ಮತ್ತು ಸೆಲೆಬ್ರಿಟಿ ಕೂಡ ಹೌದು. ಅವರಿಗೆ ಭದ್ರತೆ ನೀಡುವುದು ನಮ್ಮ ಕರ್ತವ್ಯ. ಆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿದ್ದೇನೆ” ಎಂದು ಹೇಳಿದ್ದರು. ಆದರೆ ಕೇಂದ್ರ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ Y + ಕೆಟಗರಿಯ ಭದ್ರತೆ ನೀಡಿದ್ದಾರೆ.

ವೈ ಪ್ಲಸ್’ ಶ್ರೇಣಿ ಭದ್ರತೆ ಎಂದರೆ, ಕಂಗನಾ ರಣಾವತ್ ಅವರನ್ನು ವೈಯಕ್ತಿಕ ಭದ್ರತಾ ಅಧಿಕಾರಿ ಮತ್ತು ಕಮಾಂಡೋಗಳು ಸೇರಿದಂತೆ 11 ಸಶಸ್ತ್ರ ಪೊಲೀಸರು ರಕ್ಷಿಸಲಿದ್ದಾರೆ.

ನಟಿ ಕಂಗನಾ ರಣಾವತ್ ಮುಂಬೈ ಪೊಲೀಸರ ಭದ್ರತೆ ನಿರಾಕರಿಸಿ, ‘ಮುಂಬೈ ಪೊಲೀಸರು, ಮಾಫಿಯಾ ಗೂಂಡಾಗಳಿಗಿಂತಲೂ ಭಯ ಹುಟ್ಟಿಸುತ್ತಾರೆ’ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಶಿವಸೇನಾ ಮುಖ್ಯಸ್ಥ ಸಂಜಯ್ ರಾವತ್ ‘ಮುಂಬೈ ಬರಬೇಡಿ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದರು.

ಜೀವ ಬೆದರಿಕೆ ಕರೆಗಳು ಬರುತ್ತಿವೆ ಎನ್ನುತ್ತಲೇ, ಸಂಜಯ್ ರಾವತ್ ಗೆ ತಿರುಗೇಟು ನೀಡಿದ್ದ ಕಂಗನಾ ‘ಮುಂಬೈ ನಗರ ಪಾಕ್ ಆಕ್ರಮಿತ ಪಾಕಿಸ್ತಾನದಂತೆ ಕಾಣುತ್ತಿದೆ’ ಎಂದು ಹೇಳಿ ವಿವಾದದ ಕಿಡಿ ಹೊತ್ತಿಸಿದ್ದರು.

ಆದರೂ ಕಂಗನಾ ‘ಮುಂಬೈಗೆ ಬಂದೆ ಬರ್ತೀನಿ, ಧೈರ್ಯ ಇದ್ದರೆ ತಡೀರಿ’ ಎಂದು ಸವಾಲ್ ಹಾಕಿ, ಮುಂಬೈಗೆ ಎಂಟ್ರಿ ಕೊಡುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...