Wednesday, October 20, 2021

ಯಾವುದೇ ವಿಚ್ಛೇದನ ನಡೆದರು ಅದಕ್ಕೆ ಪುರುಷನೇ ಮೂಲ ಕಾರಣ: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ನಟಿ ಕಂಗನಾ ರಣಾವತ್‌ ಪ್ರತಿಕ್ರಿಯೆ

ಮುಂಬೈ: ಸಮಂತಾ-ನಾಗ ಚೈತನ್ಯರ ವಿಚ್ಛೇದನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್​ ಅಮೀರ್​ ಖಾನ್​​​​​ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.


ದಶಕಗಳ ಕಾಲ ಸಮಂತಾ ಜೊತೆಗಿದ್ದು, 4 ವರ್ಷಗಳ ನಂತರ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿರುವ ನಾಗಚೈತನ್ಯ ನಡೆಯನ್ನ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಕಂಗನಾ ಬಾಲಿವುಡ್​​ನಲ್ಲಿ ಡಿವೋರ್ಸ್​​​​​ ಎಕ್ಸ್​​​ಪರ್ಟ್​​​ ಅಂತಾ ಖ್ಯಾತರಾಗಿರುವ ಸ್ಟಾರ್​​ ನಟರೊಬ್ಬರ ಜೊತೆ ಸೇರಿದ ಮೇಲೆಯೇ ಈ ಬೆಳವಣಿಗೆ ಆಗಿರೋದು ಅಹಿತಕರ ಅಂತಾ ಪರೋಕ್ಷವಾಗಿ ಅಮೀರ್​​ ಖಾನ್​​ ವಿರುದ್ಧ ಕಿಡಿಕಾರಿದ್ದಾರೆ.
ಅಲ್ಲದೇ ಇದೇ ವೇಳೆ ವಿಚ್ಛೇದಗಳ ಕುರಿತು ಅಸಮಾಧಾನ ಹೊರಹಾಕಿರುವ ಕಂಗನಾ, ಯಾವುದೇ ವಿಚ್ಛೇದನ ನಡೆದರು ಅದಕ್ಕೆ ಪುರುಷನೇ ಮೂಲ ಕಾರಣ.

ಕೇಳಲು ಇದು ತೀರ್ಪಿನಂತೆ ಕಂಡರು ಇದರಲ್ಲಿ ಸತ್ಯವಿದೆ. ಏಕೆಂದರೆ ದೇವರು ಮಹಿಳೆ, ಪುರುಷರನ್ನ ಅದೇ ರೀತಿ ಸೃಷ್ಟಿ ಮಾಡಿದ್ದಾರೆ. ವಿಚ್ಛೇದನ ಸಂಸ್ಕೃತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...