ಮುಂಬೈ: ಬಾಲಿವುಡ್ನ ನಟ ಆಮಿರ್ ಖಾನ್ ಮತ್ತು ಕಿರಣ್ ರಾವ್ ವಿಚ್ಛೇದನ ಬಗ್ಗೆ ನಟಿ ಕಂಗನಾ ರಣಾವತ್ ಕೂಡ ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದು. ಇವರಿಬ್ಬರಿಗೆ ಜನಿಸಿದ ಪುತ್ರ ಆಜಾದ್ ರಾವ್ ಖಾನ್ ಯಾಕೆ ಮುಸ್ಲಿಂ ಆಗಿ ಮುಂದುವರಿಯುತ್ತಿದ್ದಾನೆ ಎಂಬ ಬಗ್ಗೆ ಕಂಗನಾ ಪ್ರಶ್ನೆ ಎತ್ತಿದ್ದಾರೆ.
ಈ ಕುರಿತು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ಸೋರಿಯಲ್ಲಿ ಬರೆದುಕೊಂಡಿರುವುದು ವೈರಲ್ ಆಗಿದೆ. ‘ಒಂದು ಕಾಲದಲ್ಲಿ ಪಂಜಾಬ್ನ ಬಹುತೇಕ ಕುಟುಂಬಗಳು ಒಬ್ಬ ಮಗನನ್ನು ಸಿಖ್ ಆಗಿ, ಇನ್ನೊಬ್ಬ ಮಗನನ್ನು ಹಿಂದು ಆಗಿ ಬೆಳೆಸುತ್ತಿದ್ದರು. ಆದರೆ ಹಿಂದು-ಮುಸ್ಲಿಂ ಅಥವಾ ಮುಸ್ಲಿಂ ಜೊತೆ ಮದುವೆಯಾದ ಯಾರಲ್ಲೂ ಈ ಟ್ರೆಂಡ್ ಕಾಣಿಸುವುದಿಲ್ಲ ಯಾಕೆ? ಆಮಿರ್ ಖಾನ್ ಅವರ ವಿಚ್ಛೇದನದ ವಿಚಾರದಲ್ಲಿ ನನಗೆ ಅಚ್ಚರಿ ಆಗಿದ್ದು ಏನೆಂದರೆ, ಇಂಥ ಅಂತರ್ಧರ್ಮೀಯ ಮದುವೆಯಲ್ಲಿ ಮಕ್ಕಳು ಮುಸ್ಲಿಂ ಆಗಿಯೇ ಮುಂದುವರಿಯುತ್ತಾರೆ ಯಾಕೆ?’ ಎಂದು ಕಂಗನಾ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಆಮಿರ್ ಖಾನ್ ಅಥವಾ ಕಿರಣ್ ರಾವ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೋ ತಿಳಿದಿಲ್ಲ. ವಿಚ್ಛೇದನದ ಬಳಿಕ ಪುತ್ರ ಆಜಾದ್ ರಾವ್ ಖಾನ್ನನ್ನು ಬೆಳೆಸುವ ಜವಾಬ್ಧಾರಿಯನ್ನು ಇವರಿಬ್ಬರು ಜೊತೆಯಾಗಿ ವಹಿಸಿಕೊಂಡಿದ್ದಾರೆ.
ಬಾಗಲಕೋಟೆ: ಪಾರ್ಸೆಲ್ ಮೂಲಕ ತರಿಸಲಾಗಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯ ಎರಡು ಕೈಗಳು ಛಿದ್ರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರಡು ಟ್ವಿಸ್ಟ್‌ಗಳು ಲಭ್ಯವಾಗಿದ್ದು, ಪೊಲೀಸ್ ತನಿಖೆಯಲ್ಲಿ ಅಸಲಿ ಸತ್ಯ ಹೊರಬಿದ್ದಿದೆ.
ಬಾಗಲಕೋಟೆಯಲ್ಲಿ ಸ್ನೇಹಿತೆಯ ಹೆಸರಿಗೆ ಬಂದಿದ್ದ ಪಾರ್ಸಲ್ ಬಾಕ್ಸ್‌ನಲ್ಲಿದ್ದ ಹೇರ್ ಡ್ರೈಯರ್ ತೆರದು ಆನ್ ಮಾಡಿದ್ದ ಮಹಿಳೆ ಬಸವರಾಜೇಶ್ವರಿ ಯರನಾಳ (35) ಅವರ ಕೈಗಳು ತುಂಡಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಎರಡೆರಡು ಟ್ವಿಸ್ಟ್ ಲಭ್ಯವಾಗಿದ್ದು, ಅನೈತಿಕ ಸಂಬಂಧವೇ ಮುಖ್ಯ ಕಾರಣ ಎಂದು ತಿಳಿದು ಬಂದಿದೆ.
ಮೃತ ಯೋಧ ಪಾಪಣ್ಣ ಅವರ ಪತ್ನಿ ಬಸವರಾಜೇಶ್ವರಿ ಹಾಗೂ ಸಿದ್ಧಪ್ಪ ಶೀಲವಂತರ ಮಧ್ಯೆ ಪ್ರೀತಿ ಇತ್ತು. ಇದಕ್ಕೆ ಬಸವರಾಜೇಶ್ವರಿ ಸ್ನೇಹಿತೆ ಶಶಿಕಲಾ ಅಡ್ಡಿಯಾಗಿದ್ದಳು. ಇದು ಸರಿಯಲ್ಲ ಎಂದು ಹೇಳಿದ್ದಳು. ನಂತರ ಬಸವರಾಜೇಶ್ವರಿ ಸಿದ್ದಪ್ಪ ಜೊತೆ ಮಾತಾಡೋದನ್ನು ಬಿಟ್ಟಿದ್ದಳು. ಇದಕ್ಕೆಲ್ಲ ಕಾರಣ ಶಶಿಕಲಾ, ಆಕೆಯನ್ನೇ ಮುಗಿಸೋಣ ಎಂದ ಸಿದ್ದಪ್ಪ ಹೇರ್ ಡ್ರೈಯರ್‌ನಲ್ಲಿ ಗ್ರಾನೈಟ್ ಡೆಟೊನೇಟರ್ ಇಟ್ಟು ಶಶಿಕಲಾ ಅವರಿಗೆ ಕೊರಿಯರ್ ಮಾಡಿದ್ದ. ಆದರೆ ಅದನ್ನು ರಿಸೀವ್ ಮಾಡಿದ ಬಸವರಾಜೇಶ್ವರಿಯ ಕೈಗಳು ಛಿದ್ರವಾಗಿದೆ.
ಗ್ರಾನೈಟ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಡೆಟೋನೇಟರ್ ಬಗ್ಗೆ ಮಾಹಿತಿ ಪಡೆದಿದ್ದ. ನವೆಂಬರ್ 10 ರಂದು 500 ರೂ. ಕೊಟ್ಟು ಹೇರ್ ಡ್ರೈಯರ್ ಖರೀದಿಸಿದ್ದ. ಅದರಲ್ಲಿ ಡೆಟೊನೇಟರ್ ಅಳವಡಿಸಿ ನ.13 ರಂದು ಬಾಗಲಕೋಟೆ ಡಿಟಿಡಿಸಿಯಿಂದ ಇಳಕಲ್‌ಗೆ ಕೊರಿಯರ್ ಮಾಡಿದ್ದ. ಕೊರಿಯರ್‌ಗೆ ಶಶಿಕಲಾ ಹಾಗೂ ಆಕೆಯ ನಂಬರ್ ಹಾಕಿ ಕಳಿಸಿದ್ದ. ಕವರ್ ಮೇಲೆ ವಿಶಾಖಪಟ್ಟಣ ಎಂದು ಬರೆದಿದ್ದ. ಆದರೆ, ಸಿದ್ದಪ್ಪನ ಲೆಕ್ಕಾಚಾರವೆಲ್ಲವೂ ಉಲ್ಟಾ ಆಗಿದ್ದು, ಪ್ರೇಯಸಿಯ ಕೈ ಛಿದ್ರವಾಗಿದೆ. ಪ್ರಕರಣದ ಗಂಭೀರತೆ ಅರಿತ ಇಳಕಲ್ ನಗರ ಠಾಣೆ ಪೊಲೀಸರು ಎರಡೇ ದಿನದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ .
ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು :
ಆ ಕುಟುಂಬ ಕಳೆದ ತಿಂಗಳಷ್ಟೇ ಜಾರ್ಖಂಡ್ ನಿಂದ ಬಂದು ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ವಾಸವಾಗಿತ್ತು. ಪತಿ ಸುನೀಲ್ ಸಾಹೋ, ಪತ್ನಿ ಮಮತಾ ಸಾಹೋ, ಮಕ್ಕಳಾದ ಶಂಭು ಸಾಹೋ, ಶಿಯಾ ಸಾಹೋ…ಪುಟ್ಟ ಸಂಸಾರ…ಸಣ್ಣದೊಂದು ಬಾಡಿಗೆ ಮನೆಯಲ್ಲಿ ವಾಸ…ಆಟೋ ಚಾಲಕನಾಗಿ ದುಡಿಯುತ್ತಿದ್ದ ಸುನೀಲ್ ಸಾಹೋ..ಹೀಗೆ ಸಂಸಾರ ಸಾಗುತ್ತಿತ್ತು. ಎಲ್ಲವೂ ಸರಿಯಾಗಿತ್ತು. ಅದ್ಯಾವಾಗ ಗಂಡನ ಬಗ್ಗೆ ಅ*ನೈತಿಕ ಸಂಬಂಧದ ಅನುಮಾನ ಹುಟ್ಟಿಕೊಂತೋ ಎಲ್ಲವೂ ಎಕ್ಕುಟ್ಹೋಗಿತ್ತು. ಪತಿ ಬೇರೊಂದು ಯುವತಿಯೊಂದಿಗೆ ಮಾತಾಡುತ್ತಿರುವುದನ್ನು ಮಮತಾ ಕೇಳಿಸಿಕೊಂಡಿದ್ದಳಂತೆ. ಇದೇ ದಂಪತಿ ನಡುವೆ ನಿತ್ಯ ಜಗಳಕ್ಕೆ ಬುನಾದಿ ಹಾಕಿತ್ತಂತೆ. ನಿನ್ನೆಯೂ(ನ.21) ಜಗಳ ಮುಂದುವರಿದಾಗ ಸುನೀಲ್ ಆಟೋ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.
ಗಂಡ ಹೊರಹೋದ ಮೇಲೆ ಬಾಗಿಲು ಹಾಕಿ, ಇತ್ತ ಮಕ್ಕಳಿಬ್ಬರನ್ನೂ ಕತ್ತು ಹಿಸುಕಿ ಮಮತಾ ಕೊಂ*ದಿದ್ದಾಳೆ. ಬಳಿಕ ತಾನೂ ಚಾ*ಕುವಿನಿಂದ ಕತ್ತು ಕೊ*ಯ್ದುಕೊಂಡಿದ್ದಾಳೆ. ಎಲ್ಲ ಆದ ಮೇಲೆ ತಪ್ಪಿನ ಅರಿವಾಗಿ ಪತಿಗೆ ಸೆಲ್ಫಿ ಫೋಟೋ ಕಳುಹಿಸಿದ್ದಾಳೆ. ಅಷ್ಟೇ ಅಲ್ಲ, ‘ಗಲತ್ ಹೋಗಯಾ…ಮಾಫ್ ಕರೋ’ ಅಂತ ಮೆಸೇಜ್ ಬೇರೆ ಹಾಕಿದ್ದಾಳೆ.
ಮೆಸೇಜ್ ನೋಡಿದ ತಕ್ಷಣ ಮನೆಯತ್ತ ದೌಡಾಯಿಸಿದ ಪತಿ ಬಾಗಿಲು ಒಡೆದು ಒಳ ಹೋಗಿ ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾನೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಮತಾ ಸಾಹೋ ಪ್ರಾ*ಣಾ*ಪಾಯದಿಂದ ಪಾರಾಗಿದ್ದಾಳೆ. ಆದರೆ, ಏನೂ ಅರಿಯದ ಕಂದಮ್ಮಗಳು ಪತಿ – ಪತ್ನಿ ಜಗಳಕ್ಕೆ ಬ*ಲಿಯಾಗಿವೆ.