Friday, July 1, 2022

ಬೆಳ್ತಂಗಡಿ: ಕಣಿಯೂರು ಗ್ರಾಮದ ಹಿರಿಯ ವ್ಯಾಪಾರಿ ಶೀನ ಶೆಟ್ಟಿ ನಿಧನ

ಬೆಳ್ತಂಗಡಿ: ಸುಮಾರು 50 ವರ್ಷಗಳಿಂದ ಕಣಿಯೂರಿನಲ್ಲಿ ಹೋಟೆಲ್ ಬೀಡಿ ಬ್ರಾಂಚ್ ಹಾಗೂ ದಿನಸಿ ಉದ್ಯಮಗಳನ್ನು ನಡೆಸುತ್ತಿದ್ದ ಕಣಿಯೂರು ಗ್ರಾಮದ ಹಿರಿಯ ವ್ಯಾಪಾರಿ ಶೀನ ಶೆಟ್ಟಿ ಎ.23 ರಂದು ಶನಿವಾರ ನಿಧನ ಹೊಂದಿದ್ದಾರೆ.


ಶೀನ ಶೆಟ್ಟಿ (69) ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲೂ ತಮ್ಮನ್ನು ತೆರೆಮರೆಯಲ್ಲಿ ತೊಡಗಿಸಿಕೊಂಡಿದ್ದರು. ಶ್ರೀ ಮಹಾವಿಷ್ಣು ಭಜನಾ ಮಂದಿರ ಇದರ ಮಾಜಿ ಅಧ್ಯಕ್ಷರಾಗಿ ಮಂದಿರದ ಅಭಿವೃದ್ಧಿಗೆ ಶ್ರಮಿಸಿದ್ದರು.

ಸರಳ ಸಜ್ಜನಿಕೆ ಹಾಗೂ ಪ್ರಾಮಾಣಿಕತೆಯಿಂದ ಜನಾನುರಾಗಿಯಾಗಿದ್ದ ಅವರು ಕೊಡುಗೈ ದಾನಿಯಾಗಿ ಊರಿನ ಹಲವಾರು ಬಡ ಕುಟುಂಬಗಳಿಗೆ ಬೆನ್ನೆಲುಬಾಗಿದ್ದರು.

ಇತ್ತೀಚೆಗೆ ಸುಮಾರು 8 ವರ್ಷಗಳಿಂದ ಕಣಿಯೂರು ತೊರೆದು ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ತಮ್ಮ ಸ್ವಗ್ರಹದಲ್ಲಿ ತಮ್ಮವಿಶ್ರಾಂತ ಜೀವನವನ್ನು ನಡೆಸುತ್ತಿದ್ದರು.

ಅವರು ಪತ್ನಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಅರುಣಾ ಶೆಟ್ಟಿ ಮಗಳು ಪ್ರಮೀಳಾ ಡಿ. ಶೆಟ್ಟಿ ಅಳಿಯ ಉದ್ಯಮಿ, ಧಾರ್ಮಿಕ ಮುಂದಾಳು ದುರ್ಗಾದಾಸ್ ಶೆಟ್ಟಿ ಕರಿಂಕಿಜೆ, ಮಗ ಪ್ರಶಾಂತ್ ಶೆಟ್ಟಿ ಸೊಸೆ ಕೃತಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...

ಮಂಗಳೂರು: ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೊಗ್ಲಿಂಗ್ ಸ್ಮರಣೆ

ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮ ಇಂದು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.ಕನ್ನಡದ ಪ್ರಥಮ ಪತ್ರಿಕೆ...