FILM
ಮತ್ತೆ ಪವಿತ್ರಾ ಗೌಡ ಮನೆಯಲ್ಲಿ ಕಾಣಿಸಿಕೊಂಡ ನಟ ದರ್ಶನ್- ಪತ್ನಿ ವಿಜಯಲಕ್ಷ್ಮೀ ನಿಗಿ ನಿಗಿ ಕೆಂಡ…
ಒಂದೆರಡು ವರ್ಷದ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಒಂದು ಗುಸುಗುಸು ಹರಿದಾಡಿತ್ತು. ಅದೇನೆಂದರೆ ನಟಿ ಹಾಗೂ ಮಾಡೆಲ್ ಪವಿತ್ರಾ ಗೌಡ ಜತೆ ದರ್ಶನ್ ಸಂಬಂಧ ಹೊಂದಿದ್ದಾರೆ ಎಂಬ ಗಾಳಿಮಾತು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡಿತ್ತು. ಇದೀಗ ಮತ್ತೆ ಪವಿತ್ರಾ ಗೌಡ ಸುದ್ದಿಯಲ್ಲಿದ್ದಾರೆ.
ಬೆಂಗಳೂರು : ಒಂದೆರಡು ವರ್ಷದ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಒಂದು ಗುಸುಗುಸು ಹರಿದಾಡಿತ್ತು. ಅದೇನೆಂದರೆ ನಟಿ ಹಾಗೂ ಮಾಡೆಲ್ ಪವಿತ್ರಾ ಗೌಡ ಜತೆ ದರ್ಶನ್ ಸಂಬಂಧ ಹೊಂದಿದ್ದಾರೆ ಎಂಬ ಗಾಳಿಮಾತು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡಿತ್ತು. ಇದೀಗ ಮತ್ತೆ ಪವಿತ್ರಾ ಗೌಡ ಸುದ್ದಿಯಲ್ಲಿದ್ದಾರೆ.ನಟಿ ಪವಿತ್ರಾ ಗೌಡ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ದರ್ಶನ್ ಭಾಗಿ ಆಗಿರುವ ವಿಡಿಯೋ ವೈರಲ್ ಆಗುತ್ತಿದೆ. ಮಗಳು ಖುಷಿ ಹುಟ್ಟುಹಬ್ಬ ಆಚರಣೆಯ ವಿಡಿಯೋವನ್ನು ಸ್ವತಃ ನಟಿ ಪವಿತ್ರಾ ಗೌಡ ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ಅಭಿಮಾನಿಗಳು ಕೂಡ ಈ ವಿಡಿಯೋ, ಫೋಟೊಗಳನ್ನು ನೋಡಿ ಖುಷಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
ಈ ಹಿಂದೆ ದರ್ಶನ್ ನಟನೆಯ ಸಿನಿಮಾ ಸೆಟ್‌ಗಳಲ್ಲೂ ಪವಿತ್ರಾ ಗೌಡ ಕಾಣಿಸಿಕೊಂಡಿದ್ದರು.ದರ್ಶನ್ ತಾಯಿ ಹಾಗೂ ಸಹೋದರಿಯ ಜೊತೆಗೂ ಪವಿತ್ರಾ ಗೌಡ ಕಾಣಿಸಿಕೊಂಡಿದ್ದ ಫೋಟೊಗಳು ಸದ್ದು ಮಾಡಿತ್ತು. ಆರ್.ಆರ್ ನಗರದಲ್ಲಿ ಡಿಸೈನರ್ ಸ್ಟುಡಿಯೋ ಆರಂಭಿಸಿರುವ ಪವಿತ್ರಾ ಗೌಡ ಅನೇಕ ಸೆಲೆಬ್ರಿಟಿಗಳಿಗೆ ಉಡುಗೆಗಳನ್ನು ಡಿಸೈನ್ ಮಾಡಿದ್ದಾರೆ.
ಹೈದರಾಬಾದ್‌ನಲ್ಲಿ ‘ಕುರುಕ್ಷೇತ್ರ’ ಸಿನಿಮಾ ಸೆಟ್‌ಗೆ ಆಕೆ ಭೇಟಿ ಕೊಟ್ಟಿದ್ದ ಫೋಟೊಗಳು ವೈರಲ್ ಆಗಿತ್ತು.
ನಟ ಇದೀಗ ಪವಿತ್ರಾ ಗೌಡ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಇದೀಗ ಪವಿತ್ರಾ ಗೌಡ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ದರ್ಶನ್ ಭಾಗಿಯಾಗಿದ್ದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಕಣ್ಣು ಕೆಂಪಾಗಿಸಿದ್ದು ಮಾತ್ರ ಸತ್ಯ.
FILM
ಖಡಕ್ ಪೊಲೀಸ್ ಅಧಿಕಾರಿಯಾದ ರೂಪೇಶ್ ಶೆಟ್ಟಿ
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 9ರ ರೂಪೇಶ್ ಶೆಟ್ಟಿ ‘ಅಧಿಪತ್ರ’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿನ ರೂಪೇಶ್ ಲುಕ್ ಇದೀಗ ರಿವೀಲ್ ಆಗಿದೆ.
ಚಹನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಅಧಿಪತ್ರ ಚಿತ್ರದಲ್ಲಿ ಹೀರೋ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ಜಾಹ್ನವಿ ನಟಿಸುತ್ತಿದ್ದಾರೆ. ಬೃಹತಿ ಎಂಬ ಪಾತ್ರಕ್ಕೆ ಗಿಚ್ಚಿ ಗಿಲಿ ಗಿಲಿ ನಟಿ ಬಣ್ಣ ಹಚ್ಚಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.
‘ಅಧಿಪತ್ರ’ ಚಿತ್ರದಲ್ಲಿ ರೂಪೇಶ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೂಲಿಂಗ್ ಗ್ಲಾಸ್ ಧರಿಸಿ ಬೈಕ್ ಮೇಲೆ ಕುಳಿತು ಖಡಕ್ ಆಗಿ ಕ್ಯಾಮೆರಾ ಕಣ್ಣಿಗೆ ರೂಪೇಶ್ ಪೋಸ್ ನೀಡಿದ್ದಾರೆ.
bangalore
ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.
ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್‌ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.
2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ
FILM
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
ಮುಂಬೈ: ರಶ್ಮಿಕಾ ಮಂದಣ್ಣ, ಕಾಜೋಲ್ ಡೀಫ್ ಫೇಕ್ ವಿಡಿಯೋ ವೈರಲ್ ಬೆನ್ನಲ್ಲೇ ಇದೀಗ ಮತ್ತೊಂದು ನಟಿ ಆಲಿಯಾ ಭಟ್ ನ ಡೀಫ್ ಫೇಕ್ ವಿಡಿಯೋ ವೈರಲ್ ಆಗ್ತಾ ಇದೆ.
ಕೆಲವು ದಿನಗಳ ಹಿಂದೆಯಿಂದ ಡೀಫ್ ಫೇಕ್ ಎಂಬ ಫೇಸ್ ಆ್ಯಪ್ ಮೂಲಕ ಸಿನಿಮಾ ತಾರೆಯರ ಫೋಟೋಗಳನ್ನು ಅರೆ ಬಟ್ಟೆಯಲ್ಲಿ ಹಾಟ್ ಕಾಣಿಸುವಂತೆ ವಿಡಿಯೋ ಮಾಡಿ ವೈರಲ್ ಮಾಡುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅರೆ ಬಟ್ಟೆಯಲ್ಲಿ ಹಾಟ್ ಕಾಣಿಸಿಕೊಂಡಿರುವ ಯಾವುದೋ ಯುವತಿಯ ದೇಹಕ್ಕೆ ಬಾಲಿವುಡ್ ನಟಿ ಆಲಿಯಾ ಭಟ್ ನ ಮುಖವನ್ನು ಅಂಟಿಸಿ ವಿಡಿಯೋ ಮಾಡಿರೋದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.
ಈ ಹಿಂದೆ ಹಲವು ನಟಿಗಳ ಡೀಫ್ ಫೇಕ್ ವಿಡಿಯೋ ವೈರಲ್ ಅದಾಗ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ಕಠಿಣ ಕ್ರಮ ಕೈಗೊಂಡರೂ ಈ ಡೀಫ್ ಫೇಕ್ ವಿಡಿಯೋ ವೈರಲ್ ಮಾಡೋ ಕಿಡಿಗೇಡಿಗಳ ಕಾಟ ನಿಲ್ಲಿಸ್ತಿಲ್ಲ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇಂತಹ ವಿಡಿಯೋಗಳು ಇನ್ನು ಹೆಚ್ಚಾಗುತ್ತದೆ ಎಂದು ನೆಟ್ಟಿಗರು ಹೇಳ್ತಾ ಇದ್ದಾರೆ.
- FILM6 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru5 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS6 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA5 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು
Santhosh
10/11/2023 at 10:13 PM
Avru nimig bandu helidraa.. nimig yaakri ennobru mane usaabari.. ero vishya heli elde erodella seriskondu helodalla