ಬೆಂಗಳೂರು: ನಟ ದುನಿಯಾ ವಿಜಯ್ (Actor duniya vijay)ಅವರ ತಂದೆ ರುದ್ರಪ್ಪ(81)ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಅಸ್ವಸ್ಥರಾಗಿದ್ದ ವಿಜಯ್ ಅವರ ತಂದೆಯನ್ನು 2 ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.
ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 7.30ಕ್ಕೆ ನಿಧನ ಹೊಂದಿದ್ದಾರೆ. ಕಳೆದ ಜುಲೈನಲ್ಲಿ ವಿಜಯ್ ಅವರ ತಾಯಿ ನಾರಾಯಣಮ್ಮ ಅಸುನೀಗಿದ್ದರು.
ಇದೀಗ ಅವರ ತಂದೆಯೂ ನಿಧನರಾಗಿದ್ದಾರೆ. ಅಂತ್ಯಕ್ರಿಯೆಯನ್ನು ಆನೇಕಲ್ನ ಕುಂಬಾರಹಳ್ಳಿಯಲ್ಲಿ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.