ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿಯೂ ಕರ್ತವ್ಯವನ್ನು ನಿರ್ವಹಿಸಿದ್ದ ಲೋಹಿತಾಶ್ವ ಟಿ.ಎಸ್ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.
ಲೋಹಿತಾಶ್ವ (80) ಅವರಿಗೆ ಭಾನುವಾರ ರಾತ್ರಿ ಹೃದಯಾಘಾತವಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿನ ಸಾಗರ್ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.
ಹಲವು ಬಗೆಯ ಪರೀಕ್ಷೆ ನಡೆಸಿದರೂ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಅವರ ಮೆದುಳು ಶೇ. 95ರಷ್ಟು ನಿಷ್ಕ್ರೀಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ತುಮಕೂರು ಜಿಲ್ಲೆ ತೊಂಡಗೆರೆಯವರಾದ ಲೋಹಿತಾಶ್ವ ಕನ್ನಡದಲ್ಲಿ ಸರಿಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ನಟನೆಗೂ ಮೊದಲು ಇಂಗ್ಲಿಷ್ ಭಾಷೆಯಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತ್ತಕೋತ್ತರ ಪದವಿ ಪಡೆದು, ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ಅವತಾರ ಪುರುಷ, ಚಿನ್ನ ಹೊಸನೀರು, ಸ್ನೇಹಲೋಕ ಮುಂತಾದವು ಇವರ ಜನಪ್ರಿಯತೆ ಪಡೆದ ಸಿನಿಮಾಗಳಾಗಿವೆ. ಇದಲ್ಲದೆ ಇವರು ಧಾರಾವಾಹಿಗಳಲ್ಲಿ ಕೂಡಾ ನಟಿಸಿದ್ದಾರೆ.