Home ಉಡುಪಿ ಸಿಂಪಲ್ ಆಗಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿದ ಸಿಂಪಲ್ ಸ್ಟಾರ್.. ರಕ್ಷಿತ್ ಶೆಟ್ಟಿ….

ಸಿಂಪಲ್ ಆಗಿ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿದ ಸಿಂಪಲ್ ಸ್ಟಾರ್.. ರಕ್ಷಿತ್ ಶೆಟ್ಟಿ….

ಉಡುಪಿಯ ಅಲೆವೂರಿನಲ್ಲಿ ಅಪ್ಪ-ಅಮ್ಮನೊಂದಿಗೆ ಹುಟ್ಟುಹಬ್ಬ ಆಚರಿಸಿದ ನಟ ರಕ್ಷಿತ್ ಶೆಟ್ಟಿ…

ಉಡುಪಿ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ..

ಬರ್ತ್ ಡೇ ಸಮಯದಲ್ಲಿ ಪ್ರತೀ ಬಾರಿ ಬೆಂಗಳೂರಿನಲ್ಲಿ ಇರುತ್ತಿದ್ದ ಸಿಂಪಲ್ ಸ್ಟಾರ್ ಈ ಬಾರಿ ಕೊರೊನಾ ಲಾಕ್ ಡೌನ್ ನಿಂದಾಗಿ ತಮ್ಮ ಹುಟ್ಟೂರು ಉಡುಪಿಯಲ್ಲಿ ಮನೆ ಮಂದಿ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.

ಪ್ರತಿವರ್ಷ ಸಾವಿರಾರು ಅಭಿಮಾನಿಗಳ ಜೊತೆಗೆ ಅದ್ದೂರಿಯಾಗಿ, ತಮ್ಮ ಹುಟ್ಟುಹಬ್ಬ ಆಚರಿಸುವ ರಕ್ಷಿತ್ ಶೆಟ್ಟಿ, ಈ ಬಾರಿ ಲಾಕ್ ಡೌನ್ ಎಫೆಕ್ಟ್ ನಿಂದಾಗಿ,

ತಂದೆ-ತಾಯಿ, ಅಣ್ಣ-ಅತ್ತಿಗೆ ಹಾಗೂ ಅಣ್ಣನ ಮಕ್ಕಳ ಜೊತೆಗೆ ಉಡುಪಿಯ ಅಲೆವೂರಿನಲ್ಲಿ ಇರುವ ತಮ್ಮ ಮನೆಯಲ್ಲಿಯೇ ಕೇಕ್ ಕಟ್ ಮಾಡಿ ಸಿಂಪಲ್ ಆಗಿ ಸೆಲೆಬ್ರೆಟ್ ಮಾಡಿದ್ರು..

ಇನ್ನೂ ಹುಟ್ಟು ಹಬ್ಬಕ್ಕೆ ರಕ್ಷಿತ್ ಶೆಟ್ಟಿ ಅವರ ಬಹುನಿರೀಕ್ಷಿತ ಮುಂದಿನ ಸಿನಿಮಾ #777 ಚಾರ್ಲಿ ಸಿನಿಮಾದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡುವ ಮೂಲಕ ಶುಭ ಹಾರೈಸಿದೆ.

ಮೂಲತಃ ಮಂಗಳೂರಿನವರಾದ ರಕ್ಷಿತ್ ಶೆಟ್ಟಿ, ತಮ್ಮ ವಿಭಿನ್ನ ಮ್ಯಾನರಿಸಂ ಹಾಗೂ ಡೈಲಾಗ್ ಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಫೇಮಸ್ ಆಗಿದ್ದಾರೆ.

‘ಉಳಿದವರು ಕಂಡಂತೆ’ ಎಂಬ ವಿನೂತನ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯೂ ಲಭಿಸಿದೆ.

ಬಹುನಿರೀಕ್ಷಿತ ಸಿನಿಮಾ ‘#777 ಚಾರ್ಲಿ’.. ಬರ್ತ್ ಡೇ ಸ್ಪೆಷಲ್ ಟೀಸರ್..

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!