Home ಸಿನೆಮಾ ‘ದಬಾಂಗ್ 3’ ಖಡಕ್ ವಿಲನ್ ರೋಲ್ ಗೆ ಸುದೀಪ್ ಗೆ ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ

‘ದಬಾಂಗ್ 3’ ಖಡಕ್ ವಿಲನ್ ರೋಲ್ ಗೆ ಸುದೀಪ್ ಗೆ ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ

ಅಭಿನಯ ಚಕ್ರವರ್ತಿ ಅನ್ನೋ ಹೆಸರಿಗೆ ತಕ್ಕಂತೆ ಕಿಚ್ಚ ಸುದೀಪ್ ಅವರ ನಟನೆ ಕೂಡ. ತಾವೊಬ್ಬ ನಟ ಭಯಂಕರ ಅನ್ನೋದನ್ನ ಇದೀಗ ಸುದೀಪ್ ಮತ್ತೆ ಪ್ರೂವ್ ಮಾಡಿದ್ದಾರೆ. ಎಸ್.. ‘ದಬಾಂಗ್ 3’ ಹಿಂದಿ ಚಿತ್ರದ ಅತ್ಯದ್ಭುತ ನಟನೆಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸುದೀಪ್ ಅವರ ಮುಡಿಗೇರಿದೆ. ‘ದಬಾಂಗ್-3’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರ ಅಭಿನಯ ವೈಯಕ್ತಿಕವಾಗಿ ಮೆಚ್ಚುಗೆ ಗಳಿಸಿಕೊಂಡಿತ್ತು. ಸಲ್ಮಾನ್ ಖಾನ್ ಎದುರು ಖಡಕ್ ವಿಲನ್ ಆಗಿ ಸುದೀಪ್ ಅಬ್ಬರಿಸಿದ್ದರು. ವಿಶೇಷವಾಗಿ ದಬಾಂಗ್ 3 ಚಿತ್ರವನ್ನು ಇಷ್ಟಪಟ್ಟ ಕನ್ನಡ ಪ್ರೇಕ್ಷಕರು ಸಲ್ಲುಗಿಂತ ಕಿಚ್ಚನ ನಟನೆ ಸೂಪರ್ ಅಂತ ಚಪ್ಪಾಳೆ ತಟ್ಟಿದ್ದರು.

 

ಸದ್ಯ ‘ದಬಾಂಗ್ 3’ ಚಿತ್ರದ ನಟನೆಗಾಗಿ ಸುದೀಪ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭರವಸೆಯ ನಟ’ ಪ್ರಶಸ್ತಿ ಸಿಕ್ಕಿದೆ. ಫೆಬ್ರವರಿ 20 ರಂದು ಮುಂಬೈನಲ್ಲಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಮಹಾರಾಷ್ಟ್ರ ರಾಜ್ಯಪಾಲರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿದ್ದು, ಕಿಚ್ಚ ಸುದೀಪ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

 

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ನಾಯಕನಾಗಿ ನಟಿಸಿದ್ದ ‘ದಬಾಂಗ್ 3’ ಚಿತ್ರವನ್ನು ಡ್ಯಾನ್ಸ್ ಕಿಂಗ್ ಪ್ರಭುದೇವ ನಿರ್ದೇಶಿಸಿದ್ದರು. ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಮತ್ತು ಸಲ್ಲು ಭಾಯ್ ಜಾನ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದರು. ಸೋನಾಕ್ಷಿ ಸಿನ್ಹಾ ನಾಯಕಿಯಾಗಿದ್ದರು. ಕನ್ನಡದಲ್ಲೂ ಈ ಚಿತ್ರ ಬಿಡುಗಡೆಯಾಗಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿತ್ತು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...