LATEST NEWS
ನಟ ದರ್ಶನ್ ಜೊತೆಗಿನ 10 ವರ್ಷದ ಸಂಬಂಧ ಒಪ್ಪಿಕೊಂಡ ಪವಿತ್ರ ಗೌಡ…
BREAKING NEWS : ಕಳೆದ ಕೆಲವು ವರ್ಷಗಳಿಂದ ದರ್ಶನ್ ಹಾಗೂ ಪವಿತ್ರಾ ಗೌಡ ರಿಲೇಷನ್ಶಿಪ್ನಲ್ಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು. ಆಗಾಗ ದರ್ಶನ್ ಜೊತೆಗಿರುವ ಫೋಟೊಗಳನ್ನು ಪವಿತ್ರಾ ಗೌಡ ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರು.ಇದೀಗನಮ್ಮ ರಿಲೇಷನ್ಶಿಪ್ಗೆ 10 ವರ್ಷವಾಗಿದೆ ಎಂದು ಅವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೆಲವು ವರ್ಷಗಳ ಹಿಂದೆ ದರ್ಶನ್ ಜೊತೆಗಿರುವ ಫೋಟೊವನ್ನು ಸೋಶಿಯಲ್ ಮೀಡಿಯಾ ಪ್ರೊಫೈಲ್ ಮಾಡಿಕೊಂಡಿದ್ದರು. ಅಲ್ಲಿಂದ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಸಂಬಂಧದ ಬಗ್ಗೆ ಚರ್ಚೆಯಾಗುತ್ತಲೇ ಇತ್ತು. ಈಗ ಪವಿತ್ರಾ ಗೌಡ ಅಧಿಕೃತವಾಗಿ ಫೋಟೊಗಳನ್ನು ಹಂಚಿಕೊಳ್ಳುವುದರ ಮೂಲಕ ತಮ್ಮದು 10 ವರ್ಷದ ಸಂಬಂಧ ಎಂಬುದನ್ನು ರಿವೀಲ್ ಮಾಡಿದ್ದಾರೆ.
ಇಷ್ಟೇ ಅಲ್ಲದೆ ದರ್ಶನ್ 46ನೇ ಹುಟ್ಟುಹಬ್ಬದ ವೇಳೆ ಪವಿತ್ರಾ ಗೌಡ ಗೆಳತಿ ಮೇಘಾ ಶೆಟ್ಟಿ ಸೇರಿದಂತೆ ಹಲವರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿದ್ದರು. ದರ್ಶನ್ ಹುಟ್ಟುಹಬ್ಬವನ್ನು ಪವಿತ್ರಾ ಗೌಡ, ಮೇಘಾ ಶೆಟ್ಟಿ, ಸೋನಾಲ್ ಮಾಂತೆರೋ ಸೇರಿದಂತೆ ಇನ್ನೂ ಹಲವರು ಗ್ರ್ಯಾಂಡ್ ಆಗಿ ಆಚರಿಸಿದ್ದರು. ಅದನ್ನು ಮೇಘಾ ಶೆಟ್ಟಿ ವಿಡಿಯೋ ಮಾಡಿ ಇನ್ಸ್ಟಾಗ್ರಾಂ ಸ್ಟೇಟಸ್ ಹಾಕಿಕೊಂಡಿದ್ದರು. ಆ ವಿಡಿಯೋಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಾರ್ನಿಂಗ್ ಕೊಟ್ಟಿದ್ದರು.
ಆದ್ರೀಗ ಪವಿತ್ರಾ ಗೌಡ ನೇರವಾಗಿ ದರ್ಶನ್ ಜೊತೆಗಿನ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ 10 ವರ್ಷದ ರಿಲೇಷನ್ಶಿಪ್ ಅನ್ನೋದನ್ನು ರಿವೀಲ್ ಮಾಡಿದ್ದಾರೆ.
ಇದರ ಬೆನ್ನಲೇ ವಿಜಯಲಕ್ಷ್ಮೀಯವರು ಪವಿತ್ರ ಗೌಡ ಮತ್ತು ಆಕೆಯ ಪತಿ ಸಂಜಯ್ ಸಿಂಗ್ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ.
LATEST NEWS
ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಹ*ಲ್ಲೆ..! ಮುಖಕ್ಕೆ ಬ್ಲೇಡ್ನಿಂದ ಕೊಯ್ದು ಕೃ*ತ್ಯ..!!
ದೆಹಲಿ: ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಕೆನ್ನೆ ಮೇಲೆ ಬ್ಲೇಡ್ನಿಂದ ಹಲ್ಲೆಗೈದಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆಯಿಂದ ವಿದ್ಯಾರ್ಥಿನಿಯ ಕೆನ್ನೆಯಿಂದ ರಕ್ತ ಹರಿಯುತ್ತಿದ್ದು, ನೋವು ತಾಳಲಾರದೇ ಹುಡುಗಿ ಕಿರುಚಾಡುತ್ತಿದ್ದಾಳೆ. ಈ ಘಟನೆ ನಡೆದಿರುವುದು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ಎಂದು ಹೇಳಲಾಗುತ್ತಿದೆ.
ಮುಂದೆ ಓದಿ..; ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಕೆನ್ನೆಗೆ ಬ್ಲೇಡ್ನಿಂದ ಕೊಯ್ದಿದ್ದು ರಕ್ತ ಹೋಗುತ್ತಲೇ ಇದೆ. ಇದರಿಂದ ಜೊತೆಗಿದ್ದ ಗೆಳತಿಯರೂ ಕೂಡ ಗಾಬರಿಗೊಂಡಿದ್ದಾರೆ. ಆದರೆ ಈ ಕೃತ್ಯ ಎಸಗಿರುವುದು ಯಾರು ಎಂದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಈ ದೃಶ್ಯವನ್ನು ಅಲ್ಲೇ ಇದ್ದ ಮಹಿಳೆಯೋರ್ವರು ವೀಡಿಯೋ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
LATEST NEWS
ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.
ಮಳೆಯಾಗುವ ಸಾಧ್ಯತೆ :
ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :
ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!