Connect with us

    MANGALORE

    ಡಾ. ಎಂ. ಎನ್‌. ರಾಜೇಂದ್ರ ಕುಮಾರ್‌ಗೆ ‘ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮಂಗಳೂರು: ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ನ್ಯೂಸ್‌ ಪೇಪರ್ಸ್‌ ಅಸೋಸಿಯೇಶನ್‌ ಆಫ್‌ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಡಾ. ಎಂ. ಎನ್‌. ರಾಜೇಂದ್ರ ಕುಮಾರ್‌ ಆಯ್ಕೆ ಗೊಂಡಿದ್ದಾರೆ.


    ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 26ರಂದು ಬೆಂಗಳೂರು ನಗರ ಕೆ. ಆರ್‌. ರಸ್ತೆ ಕೋಟೆಯಲ್ಲಿರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆಯ ಆವರಣದ ಬಿ.ಎಂ.ಸಿ. ಸಭಾಂಗಣದಲ್ಲಿ ನಡೆಯಲಿದೆ.

    ನ್ಯೂಸ್‌ ಪೇಪರ್ಸ್‌ ಅಸೋಸಿಯೇಶನ್‌ ಆಫ್‌ಕರ್ನಾಟಕ ಸಂಸ್ಥೆ ದಶಮಾನೋತ್ಸವ ಆಚರಿಸುತ್ತಿರುವ ಸಂದರ್ಭ ವಿವಿಧ ಕ್ಷೇತ್ರಗಳ ಗಣ್ಯರಿಗೆ ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿದ್ದು

    ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಅಭಿನಂದನಾ ಪತ್ರವನ್ನು ಶುಕ್ರವಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್‌ ಹಸ್ತಾಂತರಿಸಿದರು.
    ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್‌ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟ ಇವರು ಕೋರ್‌ಬ್ಯಾಂಕಿಂಗ್‌ ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು

    ಎಸ್‌ಸಿಡಿಸಿಸಿ ಬ್ಯಾಂಕ್‌ ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಮೊಬೈಲ್‌ ಬ್ಯಾಂಕ್‌ ನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದಾಗಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಕೇಂದ್ರ ಮೈದಾನದಲ್ಲಿ 32 ನೇ ವರ್ಷದ ಗಣೇಶೋತ್ಸವ

    Published

    on

    ಮಂಗಳೂರು: ಮಂಗಳೂರು ಹಿಂದೂ ಯುವಸೇನೆ ವತಿಯಿಂದ 32 ನೇ ವರ್ಷದ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ನಗರದ ಕೇಂದ್ರ ಮೈದಾನದಲ್ಲಿ ಛತ್ರಪತಿ ಶಿವಾಜಿ ಮಂಟಪದಲ್ಲಿ ಇಂದು(ಆ.7) ಧಾರ್ಮಿಕ ವಿಧಿ ವಿದಾನಗಳೊಂದಿಗೆ ಗಣಪತಿಯ ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರತಿಷ್ಠಾಪನೆಯ ಬಳಿ ಗಣಹೋಮದೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಏಳು ದಿನಗಳ ಕಾಲ ನಿರಂತರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ವಿಜೃಂಬಣೆಯಿಂದ ನಡೆಯಲಿದೆ.


    ಗಣಪತಿಗೆ 20ಕೆಜಿ ಬಂಗಾರದ ಕಿರೀಟ ನೀಡಿದ ನವ ಜೋಡಿ..! ಎಷ್ಟು ಕೋಟಿ ಗೊತ್ತಾ?
    ಹಿಂದೂ ಯುವಸೇನೆಯ ಸಮಾಜಿ ಮುಖಿ ಕೆಲಸದಲ್ಲಿ ಹಲವಾರು ವರ್ಷಗಳಿಂದ ಕೈ ಜೋಡಿಸಿಕೊಂಡು ಬಂದಿರುವ ಕರಾವಳಿ ಸಮೂಹ ಸಂಸ್ಥೆಯ ಸಂಸ್ಥಾಪಕ ಗಣೇಶ್ ರಾವ್ ಎಸ್ ಅವರು ದೀಪ ಬೆಳಗಿಸುವ ಮೂಲಕ ಗಣೇಶೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಉದ್ಯಮಿ ರಮೇಶ್ ದಾಮೋದರ್ ಶೆಟ್ಟಿ , ಉದ್ಯಮಿ ರಮೇಶ್ ನಾಯಕ್ ಮೈರಾ ದಂಪತಿ ಈ ಉದ್ಘಾಟನಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

    ಹಿಂದೂ ಯುವಸೇನೆಯ ಕೇಂದ್ರಿಯ ಮಂಡಳಿಯ ಗೌರವಾಧ್ಯಕ್ಷ ಬಾಸ್ಕರ್ ಚಂದ್ರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಗಣೇಶೋತ್ಸವ ನಡೆಯುತ್ತಿದ್ದು, ಜಿಲ್ಲೆಯಲ್ಲೇ ಅತ್ಯಂತ ಶಿಸ್ತುಬದ್ದ ಹಾಗೂ ಧಾರ್ಮಿಕ ಮೌಲ್ಯವನ್ನು ಎತ್ತಿ ಹಿಡಿಯುವ ಗಣೇಶೋತ್ಸವ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ನಗರದ ಹಲವು ಹಿಂದೂ ಯುವಸೇನಾ ಘಟಕಗಳ ಸಹಭಾಗಿತ್ವ ಹಾಗೂ ಸಹಕಾರದಲ್ಲಿ ಏಳು ದಿನಗಳ ಆರಾಧನೆಯ ಬಳಿಕ ವೈಭವದ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    LATEST NEWS

    Trending