Home ಬೆಳ್ತಂಗಡಿ ‘ಕನಸು ಮಾರಾಟಕ್ಕಿದೆ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ

‘ಕನಸು ಮಾರಾಟಕ್ಕಿದೆ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ

‘ಕನಸು ಮಾರಾಟಕ್ಕಿದೆ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಸದ್ಯ ಕರಾವಳಿಯಾದ್ಯಂತ ಸಖತ್ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ ಅದು ವಿಭಿನ್ನ ಟೈಟಲ್ ಇಟ್ಟುಕೊಂಡಿರುವ “ಕನಸು ಮಾರಾಟಕ್ಕಿದೆ”.

ಸ್ಮಿತೇಶ್ ಎಸ್ ಬಾರ್ಯ ಪರಿಕಲ್ಪನೆಯಲ್ಲಿ ಮೂಡಿ ಬರುತ್ತಿರುವ ಕನಸು ಮಾರಾಟಕ್ಕಿದೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಶ್ರೀಧರ್ಮಸ್ಥಳ ಮಂಜುನಾಥೇಶ್ವರನ ಆಲಯದಲ್ಲಿ  ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಪೂಜ್ಯ ಖಾವಂದರು, ಉತ್ಸಾಹಿ ಯುವಕರು ಸೇರಿ ಹೊಸ ತಂಡ ಕಟ್ಟಿಕೊಂಡು ಚಿತ್ರ ತಯಾರಿಸಿದ್ದು ಖುಷಿಯ ವಿಚಾರ.

ಈ ಸಿನಿಮಾ ಚಿತ್ರ ಮುಂದೆ ಉತ್ತಮ ಪ್ರದರ್ಶನ ಕಾಣುವಂತಾಗಲಿ ಎಂದು ಶುಭ ಹಾರೈಸಿದರು.

ಚಿತ್ರಕ್ಕೆ ಸ್ಮಿತೇಶ್ ಎಸ್ ಬಾರ್ಯ ನಿರ್ದೇಶನವಿದ್ದು, ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಶರತ್ ಕುಮಾರ್ ಹಾಗೂ ಪ್ರಶಾಂತ್ ಕೋಟ್ಯಾನ್ ಬಂಡವಾಳ ಹೂಡಿದ್ದು, ನಾಯಕನಾಗಿ ಪ್ರಜ್ಞೇಶ್ ಶೆಟ್ಟಿ, ನಾಯಕಿಯಾಗಿ ಸ್ವಸ್ತಿಕ ಪೂಜಾರಿ ಹಾಗೂ ನವ್ಯ ಪೂಜಾರಿ ಬಣ್ಣ ಹಚ್ಚಿದ್ದಾರೆ..

ಸದ್ಯ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕಕ್ಷನ್ ಹಂತದಲ್ಲಿದ್ದು, ಸಿನೆಮಾ ಎಪ್ರಿಲ್ ತಿಂಗಳಿನಲ್ಲಿ ಅದ್ಧೂರಿ ತೆರೆ ಕಾಣಲಿದೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...