ಬೆಂಗಳೂರು: ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ, ಕನ್ನಡ ಚಿತ್ರರಂಗದ ಹಿರಿಯ ನಟ ಶಂಕರ್ ರಾವ್ ಇಂದು ನಿಧನ ಹೊಂದಿದ್ದಾರೆ.
ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್ ರಾವ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.