Connect with us

DAKSHINA KANNADA

ಕಾಸರಗೋಡಿನಲ್ಲಿ ಕನ್ನಡ ಊರುಗಳ ಹೆಸರು ಮಲಯಾಳಂ ಭಾಷೆಗೆ ಬದಲಾವಣೆ: ಪ್ರತಾಪ್‌ ಸಿಂಹ ಆಕ್ರೋಶ

Published

on

ಬೆಂಗಳೂರು: ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ ಮಾಡಿರುವುದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು‌, ‘ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ


ಯಾವ ಊರುಗಳ ಹೆಸರು ಬದಲಾವಣೆ
ಮಧೂರ-ಮಧೂರಂ, ಮಲ್ಲ-ಮಲ್ಲಂ, ಕಾರಡ್ಕ-ಕಾಡಗಂ, ಬೇಡಡ್ಕ-ಬೇಡಗಂ, ಕುಂಬಳೆ-ಕುಂಬ್ಲಾ, ಪಿಲಿಕುಂಜೆ-ಪಿಲಿಕುನ್ನು, ಆನೆಬಾಗಿಲು-ಆನವಾದುಕ್ಕಲ್, ಹೊಸದುರ್ಗ-ಪುದಿಯಕೋಟ, ಸಸಿಹಿತ್ಲು-ತೈವಳಪ್ಪು, ಮಹಾಸತಿಗುಂಡಿ-ಮಾಸ್ತಿಕುಂಡು ಎಂದು ಹೆಸರು ಬದಲಾವಣೆ ಆಗಿವೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೂಡ ಆಕ್ಷೇಪ ವ್ಯಕ್ತಪಡಿಸಿದೆ.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending