Connect with us

    LATEST NEWS

    ಹಿರಿಯ ಸಾಹಿತಿ ಚಂಪಾ ನಿಧನ: ಸಿಎಂ ಸೇರಿ ಗಣ್ಯರಿಂದ ಸಂತಾಪ

    Published

    on

    ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(83) ವಿಧಿವಶರಾಗಿದ್ದಾರೆ.

    ಚಂಪಾ ಎಂದೇ ಪರಿಚಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 6.30ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
    ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

    ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ.

    ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
    ಬೆಂಗಳೂರಿನಲ್ಲಿಯೇ ಅಂತ್ಯಕ್ರಿಯೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

    LATEST NEWS

    ಆರ್‌ಬಿಐ ಗವರ್ನರ್‌ ಶಕ್ತಿಕಾಂತ್ ದಾಸ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    Published

    on

    ಚೆನ್ನೈ: ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಉಂಟಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 23 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    1960 ರ ನಂತರ ಸುದೀರ್ಘ ಸೇವೆ ಸಲ್ಲಿಸಿದ RBI ಮುಖ್ಯಸ್ಥರೆಂಬ ಖ್ಯಾತಿ ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ, RBI ಹಣದುಬ್ಬರದ ಒತ್ತಡಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಸೇರಿದಂತೆ ವಿವಿಧ ಆರ್ಥಿಕ ಸವಾಲುಗಳನ್ನು ನ್ಯಾವಿಗೇಟ್ ಮಾಡಿದೆ.

    ಶಕ್ತಿಕಾಂತ್​ ದಾಸ್​ ಅವರನ್ನು RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು.ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿತ್ತು.ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ RBI ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ.

    Continue Reading

    LATEST NEWS

    ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಮುಂದಿನ ಸಿಎಂ ಇವರೇ ?

    Published

    on

    ಮಂಗಳೂರು/ಮಹಾರಾಷ್ಟ್ರ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಜಯ ಗಳಿಸಿದೆ. ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲದ ನಡುವೆಯೇ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.


    ಇಂದು ಬೆಳಿಗ್ಗೆ ರಾಜಭವನಕ್ಕೆ ತೆರಳಿದ ಅವರು ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಈ ವೇಳೆ ಉಪಮುಖ್ಯಮಂತ್ರಿಗಳಾದ ಅಜಿತ್ ಪವರ್ ಹಾಗೂ ದೇವೇಂದ್ರ ಫಡ್ನವಿಸ್ ಕೂಡ ಉಪಸ್ಥಿತರಿದ್ದರು.

    ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು
    ಇನ್ನೂ ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 132, ಶಿವಸೇನಾ ಶಿಂಧೆ ಬಣ 57, ಎನ್ ಸಿಪಿ ಅಜಿತ್ ಪವರ್ ಬಣ 41 ಹಾಗೂ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕೇವಲ 49 ಸೀಟುಗಳನ್ನು ಗಳಿಸಿ ತೀವ್ರ ಮುಖಭಂಗ ಅನುಭವಿಸಿದೆ. ಅಲ್ಲದೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವೇ ಇಲ್ಲದಂತಾಗಿದೆ.

    ಮುಂದಿನ ಮುಖ್ಯಮಂತ್ರಿ ಯಾರು ?
    ಮಹಾರಾಷ್ಟ್ರದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ದೇವೇಂದ್ರ ಫಡ್ನವಿಸ್ ಜವಾಬ್ದಾರಿಯನ್ನು ಪಡೆಯಬಹುದು ಹಾಗೂ ಉಪಮುಖ್ಯಂತ್ರಿಗಳಾಗಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವರ್ ಅಧಿಕಾರ ವಹಿಸುವ ಸಾಧ್ಯತೆ ಇದೆ.

    Continue Reading

    LATEST NEWS

    ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು

    Published

    on

    ಮೊರೆನಾ: ಮಧ್ಯಪ್ರದೇಶದ ಮೊರೆನಾ ನಗರದಲ್ಲಿ ಮಧ್ಯರಾತ್ರಿಯ ಸುಮಾರಿಗೆ ಮೂರು ಮನೆಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರಾಥೋಡ್ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಫೋರೆನ್ಸಿಕ್ ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದ್ದಾರೆ.

    Continue Reading

    LATEST NEWS

    Trending