ಮಂಗಳೂರು/ಬೆಂಗಳೂರು : ‘ಕನ್ನಡತಿ’ ಧಾರವಾಹಿ ಯಾರಿಗೆ ತಾನೇ ಗೊತ್ತಿಲ್ಲ. ಕರುನಾಡಿನ ಮನೆ, ಮನದಲ್ಲಿ ಅಚ್ಚಳಿಯದೆ ಅಚ್ಚೊತ್ತಿರುವ ಚಂದದ ಧಾರವಾಹಿ. ‘ಕನ್ನಡತಿ’ಯಲ್ಲಿ ಮೂಡಿ ಬಂದ ಪ್ರತಿ ಪಾತ್ರಗಳು ಸಹಜ ಅಭಿನಯದಿಂದ ಮನ ಸೆಳೆದಿವೆ. ಸಂಭಾಷಣೆಯಂತೂ ಸೊಗಸಾಗಿ ಮೂಡಿ ಬಂದಿತ್ತು. ಇದರಲ್ಲಿ ‘ಭುವಿ’ ಪಾತ್ರದಲ್ಲಿ ಮಿಂಚಿದ್ದ ಕಲಾವಿದೆ ರಂಜನಿ ರಾಘವೇಂದ್ರ. ಅದಕ್ಕೂ ಮೊದಲು ಅವರು ‘ಪುಟ್ಟಗೌರಿ’ ಆಗಿ ಖ್ಯಾತಿ ಗಳಿಸಿದ್ದರು. ಸದ್ಯ ಹಿರಿತೆರೆಯಲ್ಲಿ ಬಿಝಿ ಆಗಿದ್ದಾರೆ.
ರಂಜನಿಗೆ ಅವರದೇ ಆದ ಫ್ಯಾನ್ಸ್ ಫಾಲೋವರ್ಸ್ ಇದ್ದಾರೆ. ನಟಿಮಣಿಯರು ಫೇಮಸ್ ಆದ್ಮೇಲೆ ಅವರ ಮದುವೆಯ ಬಗ್ಗೆ ಕುತೂಹಲ ಹೆಚ್ಚಾಗಿ ಇರುತ್ತೆ. ರಂಜನಿ ಬಗ್ಗೆಯೂ ಅವರ ಅಭಿಮಾನಿಗಳು ಕುತೂಹಲ ಹೊಂದಿದ್ದಾರೆ.
ಇತ್ತೀಚೆಗೆ ಸಂದರ್ಶನವೊಂದರಲ್ಲಿ, ಬೆಸ್ಟ್ ಫ್ರೆಂಡ್ ಆಗಿರೋರೇ ಲೈಫ್ ಪಾರ್ಟ್ನರ್ ಆದ್ರೆ ಚೆನ್ನಾಗಿರತ್ತೆ ಎಂದು ಹೇಳಿದ್ದರು. ಇದು ವೈರಲ್ ಆಗಿತ್ತು. ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿತ್ತು. ಇದೀಗ ತಮ್ಮ ಜೀವನ ಸಂಗಾತಿಯ ಫೋಟೋ ಹಂಚಿಕೊಂಡಿದ್ದಾರೆ.
ಯಾರು ಹುಡುಗ?
ರಂಜನಿ ರಾಘವನ್ ಮದುವೆಯಾಗಲಿರುವ ಹುಡುಗ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಹೌದು, ರಂಜನಿ ರಾಘವನ್ ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಗೆಳೆಯನ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. “ಕನ್ನಡಿಯಲ್ಲಿರುವ ವಸ್ತುವು ಕಾಣಿಸುತ್ತಿರುವುದಕ್ಕಿಂತ ಹತ್ತಿರವಾಗಿದೆ” ಎಂದು ಹಾರ್ಟ್ ಇಮೋಜಿಯೊಂದಿಗೆ ಇಬ್ಬರ ಹೆಸರು ಹಾಕಿದ್ದಾರೆ.
ರಂಜನಿ ಮದುವೆಯಾಗಲಿರೋ ಹುಡುಗನ ಹೆಸರು ಸಾಗರ್ ಭಾರಧ್ವಜ್. ಅವರು ವೃತ್ತಿಯಲ್ಲಿ ಅಥ್ಲೆಟ್ ಎನ್ನಲಾಗಿದೆ. ರನ್ನರ್, ಸೈಕಲಿಸ್ಟ್, ಬೈಕರ್ ಎಂದು ತಿಳಿದು ಬಂದಿದೆ. ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ಪ್ರೈವೇಟ್ ಆಗಿ ಇಟ್ಟಿದ್ದಾರೆ.
ಇನ್ನು ರಂಜನಿ ಹಂಚಿಕೊಂಡಿರುವ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಬಂದಿದ್ದು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಮದುವೆ ಯಾವಾಗ ಅನ್ನೋದು ಇನ್ನಷ್ಟೇ ಅನೌನ್ಸ್ ಆಗಬೇಕಿದೆ.
ರಂಜನಿ ಕೇವಲ ಕಿರುತೆರೆ ಮಾತ್ರವಲ್ಲದೇ, ಸಿನಿಮಾದಲ್ಲೂ ಬಿಝಿ ಆಗಿದ್ದಾರೆ. ಇತ್ತೀಚೆಗೆ ಕಾಂಗರೂ ಎನ್ನುವ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಒಟಿಟಿಯಲ್ಲಿ ಕಾಂಗರೂ ಸಿನಿಮಾ ಬಿಡುಗಡೆಯಾಗಿದ್ದು, ರಂಜನಿ ನಟನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಂಜನಿ ಉತ್ತಮ ನಟಿ ಮಾತ್ರವಲ್ಲ. ಕಥೆಗಾರ್ತಿಯೂ ಹೌದು. ಅವರ ಕಥೆ ಡಬ್ಬಿ, ಸ್ವೈಪ್ ರೈಟ್ ಎಂಬ ಪುಸ್ತಕಗಳು ಪ್ರಕಟವಾಗಿವೆ.
ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಸುಮಾರು 29 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನ ಘೋಷಣೆ ಮಾಡಿದ್ದು ಬಹಳ ಅಚ್ಚರಿ ಮೂಡಿಸಿತ್ತು. ಈ ವಿಚ್ಚೇದನದ ಸುದ್ದಿಯಿಂದಾಗಿ ಎ.ಆರ್ ರೆಹಮಾನ್ ಅವರ ವೈಯಕ್ತಿನ ಬದುಕಿನ ಹಲವು ವಿಚಾರಗಳು ಮುನ್ನೆಲೆಗೆ ಬರುತ್ತಿವೆ.
‘ರೆಹಮಾನ್’ ಎಂಬ ಹೆಸರಿನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದ ದಿಲೀಪ್ ಕುಮರ್ 1980ರಲ್ಲಿ ತಂದೆಯ ಮರಣದ ನಂತರ ಕುಟುಂಬದೊಂದಿಗೆ ಇಸ್ಲಾಂಗೆ ಮತಾಂತರಗೊಂಡ ನಂತರ, ಬಹುಕಾಲದ ಆಸೆಯಾಗಿದ್ದ ರೆಹಮಾನ್’ ಎಂಬ ಹೆಸರನ್ನು ಬಳಸಲು ನಿರ್ಧರಿಸಿದರು.
ತಂಗಿಯ ಮದುವೆಗೆ ಜ್ಯೋತಿಷ್ಯ ನೋಡುವಾಗ, ಒಬ್ಬ ಹಿಂದೂ ಜ್ಯೋತಿಷಿ ಅಬ್ದುಲ್ ರೆಹಮಾನ್ ಮತ್ತು ಅಬ್ದುಲ್ ರಹೀಮ್ ಎಂಬ ಹೆಸರುಗಳನ್ನು ಸೂಚಿಸಿದ್ದಾಗಿ ರೆಹಮಾನ್ ಆಗಾಗ ನನಪಿಸುಕೊಳ್ಳುತ್ತಿರುತ್ತಾರೆ. ‘ರೆಹಮಾನ್’ ಹೆಸರು ಇಷ್ಟವಾಗಿದ್ದ ಕಾರಣ ಅದನ್ನೇ ಆಯ್ಕೆ ಮಾಡಿಕೊಂಡರು. ತಾಯಿಯ ಮನದಿಚ್ಚೆಯಂತೆ, ‘ಅಲ್ಲಾ ರಕ್ಕಾ’ ಎಂಬುದನ್ನು ಸೇರಿಸಿ ಎ.ಆರ್. ರೆಹಮಾನ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು.
‘ದೇವರಿಂದ ರಕ್ಷಿಸಲ್ಪಟ್ಟವರು’ ಎಂಬ ಅರ್ಥವನ್ನು ಹೊಂದಿರುವ ಎ.ಆರ್. ರೆಹಮಾನ್ ಎಂಬ ಹೆಸರು ಇಂದು ಸಂಗೀತ ಲೋಕದಲ್ಲಿ ಅನುಪಮ ಸ್ಥಾನ ಪಡೆದಿದೆ. ಈ ಹೆಸರು ಬದಲಾವಣೆ ರೆಹಮಾನ್ ಅವರ ಆಧ್ಯಾತ್ಮಿಕ ಪಯಣವನ್ನು ಸೂಚಿಸುವುದು ಮಾತ್ರವಲ್ಲದೆ, ಜಾಗತಿಕ ಖ್ಯಾತಿಗೆ ಅವರ ಏಳಿಗೆಯ ಆರಂಭವನ್ನೂ ಸೂಚಿಸುತ್ತದೆ, ರೆಹಮಾನ್ ಎಂಬ ಹೆಸರು ವಿಶ್ವದ ಅತ್ಯಂತ ಪ್ರಸಿದ್ಧ ಸಂಗೀತಗಾರರಲ್ಲಿ ಒಬ್ಬರನ್ನಾಗಿ ಮಾಡಿದೆ.
29 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ ರೆಹಮಾನ್ ಸಾಯಿರಾ ದಂಪತಿ ವಕೀಲರಾದ ವಂದನಾ ಶಾ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯ ಮೂಲಕ ಪ್ರತ್ಯೇಕಗೊಂಡಿರುವ ವಿಚಾರ ತಿಳಿಸಿದರು. ತಮ್ಮ ತಂದೆಯನ್ನು ಕೊನೆಯ ದಿನಗಳಲ್ಲಿ ಆರೈಕೆ ಮಾಡಿದ್ದ ಸೂಫಿ ಸಂತರೊಬ್ಬರ ಪ್ರಭಾವಕ್ಕೆ ಒಳಗಾಗಿ ಮುಸ್ಲಿಂ ಧರ್ಮಕ್ಕೆ ರೆಹಮಾನ್ ಮತಾಂತರಗೊಂಡರು ಎನ್ನಲಾಗಿದೆ. ‘ಈ ನಂಬಿಕೆಯ ಬದಲಾವಣೆ ಮನಸ್ಸಿಗೆ ಶಾಂತಿ ನೀಡಿದ್ದು, ತಾವು ತಮ್ಮ ನಂಬಿಕೆಯನ್ನು ಬೇರೆಯವರ ಮೇಲೆ ಹೇರಲು ಇಷ್ಟಪಡುವುದಿಲ್ಲ’ ಎಂದು ಸ್ವತಃ ರೆಹಮಾನ್ ಹೇಳಿಕೊಂಡಿದ್ದಾರೆ.
ಮಂಗಳೂರು/ಬೆಂಗಳೂರು : ಏಕ್ ಲವ್ ಯಾ ಸಿನಿಮಾದಲ್ಲಿ ನಾಯಕನಾಗಿ ಮಿಂಚಿ ಸಕತ್ ಫೇಮಸ್ ಆಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸರಳವಾಗಿ ಅವರ ನಿಶ್ಚಿತಾರ್ಥ ಕಾರ್ಯ ನೆರವೇರಿದೆ.
ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು, ರಾಣಾ ಎಂಗೇಜ್ಮೆಂಟ್ ಆಗಿರುವ ಹುಡುಗಿ ಯಾರು? ಎಲ್ಲಿಯವರು? ಎಂಬ ಮಾಹಿತಿ ಬಹಿರಂಗವಾಗಿಲ್ಲ. ನಿಶ್ಚಿತಾರ್ಥದ ಫೋಟೋ ನೋಡಿದ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಪ್ರೇಮ್ ಮಿಸ್ ಯಾಕೆ?
ರಾಣಾ ಎಂಗೇಜ್ಮೆಂಟ್ ಸಮಾರಂಭದಲ್ಲಿ ನಟಿ ರಕ್ಷಿತಾ ಪ್ರೇಮ್ ಕುಟುಂಬ ಇದೆ. ಆದ್ರೆ ನಿರ್ದೇಶಕ ಪ್ರೇಮ್ ಇಲ್ಲ. ಅವರು ಏನು ಭಾಗಿಯಾಗಿಲ್ಲ ಎಂಬ ಅನುಮಾನ ಹುಟ್ಟಿರೋದು ಸಹಜ. ಪ್ರೇಮ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರೋದರಿಂದ ನಿಶ್ಚಿತಾರ್ಥದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಕೆಡಿ ಸಿನಿಮಾದ ಶೂಟಿಂಗ್ ಗಾಗಿ ಅವರು ಚಿಕ್ಕಮಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.
ಏಕ್ ಲವ್ ಯಾ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ರಾಣಾ, ಪ್ರೇಮ್ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ್ ಈಶ್ವರ್ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಾನ್ವಿ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಅನೇಕ ಕಲಾವಿದರು ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಆದರೆ, ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿಗೆ ಆದಿತ್ಯ ರಾಯ್ ಕಪೂರ್ ಸಹ ಸೇರುತ್ತಾರೆ. ಕ್ರಿಕೆಟರ್ ಆಗಬೇಕು ಎಂದು ಕನಸು ಕಂಡಿದ್ದ ಆದಿತ್ಯ ನಂತರ ಬಾಲಿವುಡ್ನ ಸ್ಟಾರ್ ಆಗಿರೋ ಕಥೆಯೇ ರೋಚಕ.
ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು. ಈ ಸರಣಿಯಲ್ಲಿ ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಈ ಸರಣಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದಕ್ಕೆ ಸೀಕ್ವೆಲ್ ಕೂಡ ಬರಬೇಕಿದೆ. ಇಷ್ಟೆಲ್ಲ ಹೆಸರು ಮಾಡಿದ ಆದಿತ್ಯ ಅವರ ಮೂಲ ಕನಸು ಮಾತ್ರ ಬೇರೆಯದೇ ಇತ್ತು.
‘ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದೆ. ಆದರೆ, ಅದು ಹೊಂದಾಣಿಕೆ ಆಗಿಲ್ಲ. ನಂತರ ನಟನೆಗೆ ಬಂದೆ. ನಾನು ವಿಡಿಯೋ ಜಾಕಿ ಕೂಡ ಆಗಿದ್ದೆ’ ಎಂದಿದ್ದರು ಆದಿತ್ಯ ರಾಯ್ ಕಪೂರ್. ಹಾಗಂತ ಆದಿತ್ಯ ರಾಯ್ ಕಪೂರ್ ಅವರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದುಕೊಳ್ಳಬೇಡಿ. ಅವರು ದೊಡ್ಡ ಕುಟುಂಬದ ಹಿನ್ನೆಲೆಯಿಂದಲೇ ಬಂದವರು.