ಜೈಪುರ: ದೇಶಾದ್ಯಂತ ಸುದ್ದಿಯಾದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ತೇಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಖ್ತರ್ ಮತ್ತು ಮೊಹಮ್ಮದ್ ಗೌಸ್ ಉದಯಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 14 ದಿನ ನ್ಯಾಯಾಂಗಕ್ಕೆ ಒಪ್ಪಿಸಿದೆ.
ಬಿಗಿ ಭದ್ರತೆಯ ನಡುವೆ ಗುರುವಾರ ರಾತ್ರಿ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಅವರನ್ನು ಜುಲೈ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜಸ್ಥಾನದ ಉದಯಪುರದ ಧಾನ್ ಮಂಡಿ ಜಿಲ್ಲೆಯಲ್ಲಿ ಜೂನ್ 29ರಂದು ರಾಜ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಆದೇಶಿಸಿದ ಹಿನ್ನೆಲೆಯಲ್ಲಿ ಮರು ಪ್ರಕರಣ ದಾಖಲಿಸಲಾಗಿದೆ.