Sunday, November 27, 2022

‘ಕಾಂತಾರ’ 50 ದಿನ : ಕುತ್ತಾರು-ಕಲ್ಲಾಪು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿದ ನಾಯಕಿ ನಟಿ ಸಪ್ತಮಿ ಗೌಡ..!

ಕಾಂತಾರ(kantara)  ಚಲನ ಚಿತ್ರದ ನಾಯಕನಟಿ ಸಪ್ತಮೀ ಗೌಡ(sapthami gowda) ಇಂದು ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ ಅಜ್ಜನ ಆಶೀರ್ವಾದ ಪಡೆದರು.  

ಉಳ್ಳಾಲ: ತುಳುನಾಡಿನ ದೈವಾಧಾರಿತ ಕಾಂತಾರ(kantara)  ಚಿತ್ರದ ಬಳಿಕ ದೈವದ ಮೇಲಿನ ನಂಬಿಕೆ ಹೆಚ್ಚಾಗಿದೆ. ಕಾಂತಾರ(kantara)  ಚಲನ ಚಿತ್ರದ ನಾಯಕನಟಿ ಸಪ್ತಮೀ ಗೌಡ(sapthami gowda) ಇಂದು ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ ಅಜ್ಜನ ಆಶೀರ್ವಾದ ಪಡೆದರು.  

ಈ ಸಂದರ್ಭ ಕಾಂತಾರ ಚಿತ್ರನಟ ಗುರು ಸನಿಲ್, ಕದ್ರಿ ಕ್ರಿಕೆಟಸ್೯ ಅಧ್ಯಕ್ಷ ಜಗದೀಶ್ ಕದ್ರಿ, ನಟಿ ತಾಯಿ ಶಾಂತಾ ಯು., ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿಶ್ವನಾಥ್ ನಾಯಕ್, ಕುತ್ತಾರು ಕೊರಗಜ್ಜನ ತಳದ ದೇವಿಪ್ರಸಾದ್ ಶೆಟ್ಟಿ, ಸಾಯಿ ಪರಿವಾರ್ ಟ್ರಸ್ಟಿಗಳಾದ ಪುರುಷೋತ್ತಮ್ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಡಿ.ಕೆ, ಪುರುಷೋತ್ತಮ್ ಶೆಟ್ಟಿ, ಪ್ರಶಾಂತ್ ಕಾಯಂಗಳ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಸಪ್ತಮಿ ಗೌಡ ಕಾಂತಾರ ಚಿತ್ರದ ಬಳಿಕ ದೈವದ ಮೇಲಿನ ನಂಬಿಕೆ ಹೆಚ್ಚಾಗಿದೆ.

ಕೊರಗಜ್ಜನ ಬಗ್ಗೆ ಕೇಳಿ ತಿಳಿದಿದ್ದೆ, ಸಾನಿಧ್ಯವನ್ನು ನೋಡುವ ತವಕದಿಂದ ಬಂದಿದ್ದೇನೆ.

ಅಜ್ಜನ ದಯೆಯಿಂದ ಇನ್ನಷ್ಟು ಚಿತ್ರಗಳು ಸಿಗಲಿ ಎಂದು ಪ್ರಾರ್ಥಿಸಿದ್ದೇನೆ. ಕಾಂತಾರ 50 ದಿನಗಳನ್ನು ದಾಟಿರುವುದು ದೈವದ ಕೃಪೆಯಿಂದ ಎಂದು ಪ್ರತಿಕ್ರೀಯಿಸಿದರು.

LEAVE A REPLY

Please enter your comment!
Please enter your name here

Hot Topics

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...