Sunday, November 27, 2022

ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಟಿ ಸಪ್ತಮಿ ಗೌಡ..!

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.


ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ‘ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಬೇರೆ ಬೇರೆ ನಿನಿಮಾದ ಬಗ್ಗೆ ಮಾತುಕತೆ ನಡೆಯುತಿದೆ, ತುಳುವಲ್ಲಿ ಅವಕಾಶ ಸಿಕ್ಕಿದೆ ಖಂಡಿತ ನಟಿಸುವೆ ಎಂದರು.

ಸಪ್ತಮಿ ಜೊತೆ ನಟ ಸನಿಲ್ ಗುರು, ತಾಯಿ ಶಾಂತಿ ಇದ್ದರು.


ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಪ್ರಸಾದ ನೀಡಿ ಗೌರವಿಸಿದರು. ಸಪ್ತಮಿ ಜೊತೆ ಅಭಿಮಾನಿಗಳು ಸೆಲ್ಪಿಗಾಗಿ ಮುಗಿ ಬಿದ್ದರು.

LEAVE A REPLY

Please enter your comment!
Please enter your name here

Hot Topics

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...