ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಡ ಸಂತಸದಿಂದ ಬೀಗಿದ್ದು ಕರಾವಳಿಯ ಆರಾಧ್ಯ ದೈವಗಳಲ್ಲಿ ಒಂದಾದ ಪಂಜುರ್ಲಿಗೆ ವಿನಮ್ರತೆಯಿಂದ ಕೋಲ ನೀಡುವ ಮೂಲಕ ಹರಕೆ ಸಲ್ಲಿಸಿದೆ.
ತುಳು ನಾಡ ದೈವಾಧಾರಿತ ಫಿಲ್ಮ್ ‘ಕಾಂತಾರ’ ಸೂಪರ್ ಹಿಟ್ ಆಗಿದ್ದು, ಈಗಾಗಲೇ ದೇಶ ವಿದೇಶಗಳಲ್ಲಿ ಚಿತ್ರ ಪ್ರದರ್ಶನಗೊಂಡು ದಾಖಲೆ ಮಾಡಿದೆ.
ಇದರಿಂದ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಡ ಸಂತಸದಿಂದ ಬೀಗಿದ್ದು ಕರಾವಳಿಯ ಆರಾಧ್ಯ ದೈವಗಳಲ್ಲಿ ಒಂದಾದ ಪಂಜುರ್ಲಿಗೆ ವಿನಮ್ರತೆಯಿಂದ ಕೋಲ ನೀಡುವ ಮೂಲಕ ಹರಕೆ ಸಲ್ಲಿಸಿದೆ.
ಹರಕೆ ಸಲ್ಲಿಕೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ.
ಈ ವಿಡಿಯೋಗೆ ವರಾಹ ರೂಪಂ ಹಾಡನ್ನು ಬಳಸಲಾಗಿದ್ದು, ವಿಡಿಯೋ ಬಹಳ ಅದ್ಭುತವಾಗಿ, ದೈವಿಕವಾಗಿ ಮೂಡಿಬಂದಿದೆ.
ಈ ದೃಶ್ಯಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಪಂಜುರ್ಲಿ ಕೋಲದಲ್ಲಿ ರಿಷಬ್ ಶೆಟ್ಟಿ ಕುಟುಂಬ, ನಿರ್ಮಾಪಕ ವಿಜಯ್ ಕಿರಂಗದೂರ್, ನಟಿ ಸಪ್ತಮಿ ಗೌಡ ಸೇರಿದಂತೆ ಚಿತ್ರ ತಂಡದ ಕೆಲವರು ಭಾಗಿಯಾಗಿದ್ದರು.
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರ್ ನಿರ್ಮಾಣದ ಈ ಚಿತ್ರ ಬಹುತೇಕ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ.
ಸಿನಿಮಾದಲ್ಲಿ ದಕ್ಷಿಣ ಕನ್ನಡದ ಪ್ರಾಕೃತಿಕ ಸೊಬಗು ಚೆನ್ನಾಗಿ ಮೂಡಿಬಂದಿದೆ.
ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಕಿಶೋರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್ ಮತ್ತು ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ಮತ್ತು ಅರವಿಂದ್ ಎಸ್ ಕಶ್ಯಪ್ ಅವರ ಛಾಯಾಗ್ರಹಣವಿದೆ.